ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 24 ಫೆಬ್ರವರಿ 2020 (09:19 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯವಹಾರದಲ್ಲಿ ಉನ್ನತಿಯ ಯೋಗವಿದೆ. ಕಷ್ಟಪಟ್ಟಿದ್ದಕ್ಕೆ ತಕ್ಕ ಫಲ ಸಿಗುವುದು. ಆದರೆ ಖಾಸಗಿ ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ನೆರವಿನಿಂದ ಎದುರಾಗುವ ಸಮಸ್ಯೆಗಳನ್ನು ನಿವಾರಿಸುವಿರಿ. ಸಾಂಸಾರಿಕವಾಗಿ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳಿಗೆ ಅಂತ್ಯ ಹಾಡುವಿರಿ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಬೇಕು.

ಮಿಥುನ: ವ್ಯಾಪಾರ, ವ್ಯವಹಾರದಲ್ಲಿ ನಯವಂಚಕರ ಕಾಟವಿರಲಿದ್ದು, ಅಡೆತಡೆಗಳುಂಟಾಗಲಿದೆ. ಸಂಗಾತಿಯ ಸಲಹೆಗಳು ಪ್ರಯೋಜನಕ್ಕೆ ಬರುವುದು. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಕಾರ್ಯನಿಮಿತ್ತ ಕಿರು ಸಂಚಾರ ಯೋಗವಿರುತ್ತದೆ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತವಾಗಿ ಸ್ಥಾನ ಪಲ್ಲಟವಾಗಲಿದೆ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ವ್ಯಾಪಾರ ವ್ಯವಹಾರದಲ್ಲಿ ಹೂಡಿಕೆ ಮಾಡಲು ಇದು ಸಕಾಲ. ವಾಹನ ಖರೀದಿಗೆ ಮುಂದಾಗುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ವಿವಾಹ ಪ್ರಯತ್ನಗಳಿಗೆ ಇದುವರೆಗೆ ಇದ್ದ ಅಡೆತಡೆಗಳು ದೂರವಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ದಾಯಾದಿಗಳೊಂದಿಗಿನ ಮನಸ್ತಾಪಗಳು ದೂರವಾಗಲಿದೆ. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರಬಹುದು, ಎಚ್ಚರ.

ತುಲಾ: ಇದುವರೆಗೆ ಅಂದುಕೊಂಡಿದ್ದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಿರಿ. ಶತ್ರು ಪೀಡೆ ದೂರವಾಗಲಿದೆ. ವ್ಯವಹಾರದಲ್ಲಿ ಕೊಂಚ ಹಿನ್ನಡೆಯಾದೀತು. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ದೂರ ಸಂಚಾರ ಸಾಧ್ಯತೆಯಿದೆ.

ವೃಶ್ಚಿಕ: ಇಷ್ಟ ಮಿತ್ರರ ಭೇಟಿ, ಭೋಜನ ಸಾಧ‍್ಯತೆಯಿದೆ. ಮನಸ್ಸಿನಲ್ಲಿ ಅಂದುಕೊಂಡಿದ್ದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ಆರೋಗ್ಯದಲ್ಲಿ ಸುದಾರಣೆಯಾಗಲಿದೆ.

ಧನು: ಮಾನಸಿಕವಾಗಿ ಹಲವು ಚಿಂತೆಗಳು ಕಾಡಲಿದ್ದು, ಗೊಂದಲದ ವಾತಾವರಣವಿರಲಿದೆ. ಸಂಗಾತಿಯಿಂದ ಸಾಂತ್ವನ ಸಿಗಲಿದೆ. ಅನಗತ್ಯವಾಗಿ ಬೇರೆಯವರ ವಿಚಾರಕ್ಕೆ ತಲೆಕೆಡಿಸಿಕೊಳ್ಳಬೇಡಿ. ಅಧಿಕ ಧನಲಾಭ ತರುವ ಯೋಜನೆಗಳಿಗೆ ಕೈ ಹಾಕಲಿದ್ದೀರಿ.

ಮಕರ: ಕೌಟುಂಬಿಕ ಜವಾಬ್ಧಾರಿಗಳು ಹೆಚ್ಚಲಿದ್ದು, ಅಧಿಕ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಹಿರಿಯರಿಂದ ಗುರುತರ ಜವಾಬ್ಧಾರಿ ಸಿಗಲಿದೆ. ತಾಳ್ಮೆಯಿಂದ ನಿಭಾಯಿಸಿ.

ಕುಂಭ: ಮಹಿಳೆಯರಿಗೆ ಋಣಾತ್ಮಕ ಚಿಂತೆಗಳು ಕಾಡಲಿದ್ದು, ಮನಶ್ಶಾಂತಿಗಾಗಿ ದೇವರ ಮೊರೆ ಹೋಗುವುದು ಉತ್ತಮ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ.

ಮೀನ: ಕೆಳ ಹಂತದ ನೌಕರರಿಗೆ ಉನ್ನತಿಯ ಯೋಗವಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಹಣಕಾಸಿನ ಹರಿವಿಗೆ ತೊಂದರೆಯಾದೀತು. ಗೃಹ ಸಂಬಂಧೀ ಕೆಲಸಗಳನ್ನು ಕೆಲ ಸಮಯ ಮುಂದೂಡಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ