ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 26 ಫೆಬ್ರವರಿ 2020 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ವೃತ್ತಿರಂಗದಲ್ಲಿ ಹೊಸ ಯೋಚನೆಗಳನ್ನು ಪ್ರಯೋಗಕ್ಕೆ ತರಲು ಇದು ಸಕಾಲ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದ್ದು, ಭವಿಷ್ಯ ಭದ್ರಗೊಳಿಸುವಂತಹ ಯೋಜನೆ ರೂಪಿಸುವಿರಿ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಪ್ರಭಾವ ಹೆಚ್ಚಿಸಿಕೊಳ್ಳುವಿರಿ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಿಥುನ: ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಮುನ್ನಡೆ ತೋರಿಬರಲಿದ್ದು, ಹೊಸ ಉದ್ಯಮ ಅವಕಾಶಗಳು ಗೋಚರವಾಗಲಿದೆ. ವೈಯಕ್ತಿಕವಾಗಿ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯ.

ಕರ್ಕಟಕ: ವೃತ್ತಿರಂಗದಲ್ಲಿ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಮುಂದುವರಿಯಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಹಿನ್ನಡೆಯಾದೀತು. ಅನಿರೀಕ್ಷಿತವಾಗಿ ಧನವ್ಯಯವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕಾಗುತ್ತದೆ.

ಸಿಂಹ: ಹಿತಮಿತವಾಗಿ ವರ್ತಿಸಿದಲ್ಲಿ ಸಂಬಂಧಗಳು ಹಾಳಾಗದು. ಅತಿಯಾಗಿ ಯಾರನ್ನೂ ನಂಬಲು ಹೋಗಬೇಡಿ. ದೇವತಾ ಕಾರ್ಯಗಳನ್ನು ಪೂರ್ತಿ ಮಾಡಲಿದ್ದೀರಿ. ಹಿರಿಯರ ಸಲಹೆ ಸೂಚನೆಗಳನ್ನು ಪಾಲಿಸಿದರೆ ಉತ್ತಮ. ರಾಜಕೀಯದವರಿಗೆ ಅಚ್ಚರಿಯ ಮುನ್ನಡೆಯಿರಲಿದೆ.

ಕನ್ಯಾ: ಸಂಸಾರ ಸಮಸ್ಯೆಗಳನ್ನು ಸಣ್ಣದರಲ್ಲೇ ಚಿವುಟಿ ಹಾಕದೇ ಇದ್ದರೆ ಬೃಹತ್ ಆಗಿ ಕಾಡಲಿದೆ. ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಭೀತಿಯಿದೆ. ವಿದ್ಯಾರ್ಥಿಗಳ ಉದಾಸೀನ ಪ್ರವೃತ್ತಿಯಿಂದ ಉತ್ತಮ ಅವಕಾಶ ಕಳೆದುಕೊಳ್ಳಲಿದ್ದಾರೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ಆರ್ಥಿಕವಾಗಿ ಆದಾಯ ವೃದ್ಧಿಯಾದರೂ ಖರ್ಚು ವೆಚ್ಚಗಳು ಹೆಚ್ಚಲಿವೆ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ನಿರುದ್ಯೋಗಿಗಳು ಬಯಸಿದ ಉದ್ಯೋಗ ಸಿಗದೇ ನಿರಾಶೆ ಅನುಭವಿಸಲಿದ್ದಾರೆ. ಸ್ವಂತ ವೃತ್ತಿಯವರಿಗೆ ಮುನ್ನಡೆ.

ವೃಶ್ಚಿಕ: ಪೋಷಕರ ಬಹುದಿನಗಳ ಕನಸು ನನಸು ಮಾಡಲಿದ್ದೀರಿ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ. ದೇವತಾ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಜೀರ್ಣ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು, ಎಚ್ಚರ. ಮಿತ್ರರ ಭೇಟಿಯಾಗಲಿದ್ದೀರಿ.

ಧನು: ಹೊಸ ಕೆಲಸಗಳಿಗೆ ಕೈಹಾಕುವಾಗ ಬಂಧು ಮಿತ್ರರ ಚಾಡಿ ಮಾತು ಕೇಳಿಬೇಕಾಗಿ ಬರಬಹುದು. ತಾಳ್ಮೆಯಿಂದ ನಿಭಾಯಿಸಿ. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳು ನೆರವೇರಲಿದೆ.

ಮಕರ: ವ್ಯಾಪಾರಿ ವರ್ಗದವರಿಗೆ ಇಂದು ಸಂತಸದ ದಿನ. ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಮನೆಯಲ್ಲಿ ಬಂಧು ಮಿತ್ರರ ಆಗಮನದಿಂದ ಸಂತಸದ ವಾತಾವರಣವಿರಲಿದೆ. ಕಾರ್ಯಕ್ಷೇತ್ರದಲ್ಲಿ ಮುನ್ನಡೆಯಿರಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಕುಂಭ: ವ್ಯವಹಾರದಲ್ಲಿ ಎಷ್ಟೇ ಕಷ್ಟಪಟ್ಟರೂ ಅದರ ಫಲ ಇನ್ನೊಬ್ಬರ ಪಾಲಾಗುತ್ತಿದೆ ಎಂಬ ಭಾವನೆ ಬರಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳನ್ನು ಬಿಡಿ. ಮಕ್ಕಳ ಆರೋಗ್ಯದ ಬಗ್ಗೆ ಗಮನಕೊಡಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದಿರಿ.

ಮೀನ: ರಾಜಕೀಯ ವರ್ಗದವರಿಗೆ ಅನಗತ್ಯ ವಿವಾದಗಳು ಕೇಳಿಬರಲಿದೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಯೋಗವಿದೆ. ಹಿರಿಯರ ಯಾತ್ರೆಗೆ ಏರ್ಪಾಟು ಮಾಡಲಿದ್ದೀರಿ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ಆದಾಯ ವೃದ್ಧಿಗೆ ದಾರಿ ಸಿಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ