ಮೇಷ: ವೃತ್ತಿರಂಗದಲ್ಲಿ ಅವಕಾಶಗಳು ಬಂದಾಗ ಸದುಪಯೋಗ ಪಡಿಸಿಕೊಳ್ಳಿ. ನೀವು ಇಂದು ಕೈಗೊಳ್ಳುವ ನಿರ್ಧಾರಗಳು ಮುಂದಿನ ಜೀವನದ ಮೇಲೆ ಪರಿಣಾಮ ಬೀರಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಚಿಂತೆಯಾಗಬಹುದು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.
ವೃಷಭ: ಅಧಿಕ ಧನಲಾಭ ತರುವ ಯೋಜನೆಗಳಿಗೆ ಕೈ ಹಾಕುವ ಮುನ್ನ ಸರಿಯಾಗಿ ಯೋಚಿಸಿ ಹೆಜ್ಜೆಯಿಡಿ. ಪ್ರೀತಿ ಪಾತ್ರರೊಂದಿಗೆ ಅಮೂಲ್ಯ ಸಮಯ ಕಳೆಯುವಿರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದಿದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ.
ಮಿಥುನ: ಬೇಡದ ವಿಚಾರ, ಮಾತುಗಳಿಗೆ ತಲೆಕೆಡಿಸಿಕೊಳ್ಳುವುದನ್ನು ಬಿಡಿ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಮುನ್ನಡೆ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.
ಕರ್ಕಟಕ: ಹೊಸ ಯೋಜನೆಗಳಿಗೆ ಕೈಹಾಕಲು ಇದು ಸಕಾಲ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಧನವ್ಯಯ ಮಾಡಲಿದ್ದೀರಿ. ಸಂಗಾತಿಯ ಸಂಪ್ರೀತಿಗೆ ಪಾತ್ರರಾಗಲಿದ್ದೀರಿ. ಮಹಿಳೆಯರಿಗೆ ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ.
ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವ್ಯವಹಾರದಲ್ಲಿ ಕ್ರಿಯಾಶೀಲರಾಗಿರುವುದರಿಂದ ಧನಲಾಭ ಪಡೆಯುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡುವಾಗ ಎಚ್ಚರಿಕೆಯಿಂದಿರಬೇಕು.
ಕನ್ಯಾ: ವಾಹನ ಸವಾರರಿಗೆ ಇಂದು ಅಪಘಾತದ ಭಯ ತಪ್ಪಿದ್ದಲ್ಲ. ವಿನಾಕಾರಣ ಯಾರೊಂದಿಗೂ ವಾಗ್ವಾದ ನಡೆಸಲು ಹೋಗಬೇಡಿ. ಕೋರ್ಟು ಕಚೇರಿ ವ್ಯವಹಾರಗಳಿಗೆ ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮವಿದ್ದರಷ್ಟೇ ಫಲ ಸಿಗುವುದು.
ತುಲಾ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆ ಕಂಡುಬರಬಹುದು. ಅನಿರೀಕ್ಷಿತವಾಗಿ ಧನಲಾಭವಾಗಲಿದೆ.
ವೃಶ್ಚಿಕ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಉದ್ಯೋಗ ಸಂದರ್ಶನ ಕರೆ ಬರಲಿದ್ದು, ದೂರ ಸಂಚಾರ ಮಾಡಬೇಕಾಗುತ್ತದೆ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸದ ವಾತಾವರಣವಿರುವುದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.
ಧನು: ಅಪರಿಚಿತರನ್ನು ಅತಿಯಾಗಿ ನಂಬುವ ನಿಮ್ಮ ಗುಣದಿಂದ ವಂಚನೆಗೊಳಗಾಗಬೇಕಾದೀತು. ಸಂಗಾತಿಯ ಮಾತಿಗೆ ಕಿವಿಗೊಡಿ. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ.
ಮಕರ: ನೀವು ಅಂದುಕೊಂಡ ಕೆಲಸಗಳನ್ನು ನೆರವೇರಿಸಲು ಸಾಕಷ್ಟು ಅಡೆತಡೆಗಳು ತೋರಿಬಂದೀತು. ಆದರೂ ತಾಳ್ಮೆ ಕಳೆದುಕೊಳ್ಳಬೇಡಿ. ಎಷ್ಟೋ ದಿನದಿಂದ ಹುಡುಕುತ್ತಿದ್ದ ವಸ್ತು ಕೈಗೆ ಸಿಗಲಿವೆ. ಹಳೆಯ ಮಿತ್ರರ ಭೇಟಿ ಮನಸ್ಸಿಗೆ ಸಂತಸ ನೀಡಲಿದೆ.
ಕುಂಭ: ಮನೆಗೆ ಬೇಕಾದ ಹೊಸ ವಸ್ತುಗಳ ಖರೀದಿ ಮಾಡಲಿದ್ದೀರಿ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಮಕ್ಕಳ ಆರೋಗ್ಯದ ಬಗ್ಗೆ ಅಧಿಕ ಕಾಳಜಿ ಅಗತ್ಯ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಕುಲದೇವರ ಪ್ರಾರ್ಥನೆಯಿಂದ ಒಳಿತಾಗುವುದು.
ಮೀನ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೂ ಬೆರಗಾಗುವಂತೆ ಕೆಲಸ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ನಿಮ್ಮ ಏಳಿಗೆಗೆ ನಯವಂಚಕರು ಅಸೂಯೆಪಡುವರು. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಹಣಕಾಸಿನ ಹರಿವಿಗೆ ತೊಂದರೆಯಿರದು.