ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 5 ಜೂನ್ 2020 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಹಿತಶತ್ರುಗಳ ಕಾಟ ಹೆಚ್ಚಾಗುವುದು. ಉದ್ಯೋಗದಲ್ಲಿ ಬದಲಾವಣೆಗೆ ಮನಸ್ಸು ಬಯಸಲಿದೆ. ಸಾಂಸಾರಿಕವಾಗಿ ನೆಮ್ಮದಿ ಸಿಗಲಿದೆ. ಆದರೆ ಅನಗತ್ಯ ವಿಚಾರಗಳಿಗೆ ಚಿಂತೆ ಮಾಡುವುದನ್ನು ಬಿಡಿ. ಆರೋಗ್ಯದಲ್ಲಿ ಕಾಳಜಿಯಿರಲಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಉತ್ಸಾಹದಿಂದ ಕೆಲಸ ಮಾಡಲಿದ್ದೀರಿ. ಧರ್ಮ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ನಿಮ್ಮ ಕ್ರಿಯಾಶೀಲತೆಗೆ ತಕ್ಕ ಮನ್ನಣೆ ಸಿಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಮಿಥುನ: ವೃತ್ತಿರಂಗದಲ್ಲಿ ಮೇಲ್ವರ್ಗದ ಹುದ್ದೆಯಲ್ಲಿರುವವರಿಗೆ ಹೆಚ್ಚಿನ ಜವಾಬ್ಧಾರಿಗಳನ್ನು ಹೊರಬೇಕಾಗುತ್ತದೆ. ಬಿಡುವಿಲ್ಲದ ಕಾರ್ಯದೊತ್ತಡದಿಂದ ದೇಹಾಯಾಸವಾಗಲಿದೆ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಿಗಲಿದೆ. ಇಷ್ಟ ಮಿತ್ರರ ಭೇಟಿ ಯೋಗವಿದೆ.

ಕರ್ಕಟಕ: ಕಾರ್ಯರಂಗದಲ್ಲಿ ಉನ್ನತ ಸ್ಥಾನದ ಯೋಗವಿದ್ದರೂ ಹಿತಶತ್ರುಗಳ ಉಪಟಳವಿರಲಿದೆ. ಬಾಕಿ ಹಣ ಪಾವತಿಯಾಗಲಿದ್ದು, ಆರ್ಥಿಕವಾಗಿ ಉನ್ನತಿಯ ಯೋಗವಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಚಿಂತೆ ಬೇಡ.

ಸಿಂಹ: ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಹೊಸ ವ್ಯವಹಾರಗಳಿಗೆ ಬಂಡವಾಳ ಹೂಡಿಕೆ ಮಾಡಲು ಇದು ಸಕಾಲ. ಇಷ್ಟಮಿತ್ರರೊಂದಿಗೆ ಭೋಜನ, ಉತ್ತಮ ಸಮಯ ಕಳೆಯಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಧನವ್ಯಯ ಮಾಡಲಿದ್ದೀರಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆಯುಂಟಾಗಲಿದ್ದು, ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ಹಣಕಾಸಿನ ಮುಗ್ಗಟ್ಟು ಎದುರಿಸಲು ಸಿದ್ಧರಾಗಿ. ಸಂಗಾತಿಯ ಸಾಂತ್ವನ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ವ್ಯಾಪಾರ ವ್ಯವಹಾರಗಳಲ್ಲಿ ಹೂಡಿಕೆ ಮಾಡಲಿದ್ದು, ಉತ್ತಮ ಫಲ ಪಡೆಯಲಿದ್ದೀರಿ. ಆದಾಯದಲ್ಲಿ ಕೊಂಚ ಚೇತರಿಕೆ ಕಂಡುಬರಲಿದೆ. ದಾಂಪತ್ಯದಲ್ಲಿ ಸಂತೋಷ ಹೆಚ್ಚಾಗಲಿದೆ. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ದೇವತಾ  ಪ್ರಾರ್ಥನೆ ಮಾಡಿ.

ವೃಶ್ಚಿಕ: ಅರ್ಧಕ್ಕೇ ನಿಂತ ಕೆಲಸಗಳಿಗೆ ಮರು ಚಾಲನೆ ನೀಡಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ಮನೆಗೆ ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದ್ದು, ಸಂತಸವಾಗಲಿದೆ.

ಧನು: ನಿಮ್ಮ ಕೆಲವೊಂದು ನಡೆಗಳು ಸಂಗಾತಿಯ ಮುನಿಸಿಗೆ ಕಾರಣವಾದೀತು. ಅನಗತ್ಯ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ಆದಾಯ ಕುಂಠಿತವಾಗಲಿದ್ದು, ಉಳಿಕೆ ಬಗ್ಗೆ ಯೋಚನೆ ಮಾಡಬೇಕು. ವೃತ್ತಿರಂಗದಲ್ಲಿ ಆಶಾವಾದಿಗಳಾಗಿ.

ಮಕರ: ವಿದ್ಯಾರ್ಥಿಗಳಿಗೆ ಅಭಿವೃದ್ಧಿಗೆ ಪೂರಕವಾದ ಸನ್ನಿವೇಶ ಒದಗಿಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಸಾಂಸಾರಿಕವಾಗಿ ಸಂತಸವಿರಲಿದೆ. ಮಕ್ಕಳಿಂದ ಶುಭ ಸಮಾಚಾರ ಕೇಳಿಬರಲಿದೆ. ಇಷ್ಟ ಮಿತ್ರರ ಭೇಟಿಯಾಗಲಿದ್ದೀರಿ.

ಕುಂಭ: ಕೆಲಸ ಕಾರ್ಯಗಳು ನೀವು ಅಂದುಕೊಂಡಂತೇ ನಡೆಯದೇ ಇದ್ದಾಗ ಕೋಪ, ತಾಪಗಳುಂಟಾಗುವುದು ಸಹಜ. ಆದರೆ ದುಡುಕಿನ ನಿರ್ಧಾರದಿಂದ ಕಾರ್ಯಹಾನಿಯಾಗಬಹುದು. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ತಾಳ್ಮೆಯಿರಲಿ.

ಮೀನ: ಮಹಿಳೆಯರಿಗೆ ಇಂದು ತಾಳ್ಮೆ ಪರೀಕ್ಷಿಸುವ ಘಟನೆಗಳನ್ನು ಎದುರಿಸಬೇಕಾಗುತ್ತದೆ. ಹಿರಿಯರ ಸಲಹೆಗೆ ಕಿವಿಗೊಡುವುದು ಮುಖ್ಯ. ವೃತ್ತಿರಂಗದಲ್ಲಿ ಹೆಚ್ಚಿನ ಜವಾಬ್ಧಾರಿ ಹೊರಲು ಸಿದ್ಧರಾಗಬೇಕಾಗುತ್ತದೆ. ವ್ಯಾಪಾರಿಗಳಿಗೆ ಮುನ್ನಡೆಯಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ