ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 13 ಜೂನ್ 2020 (09:08 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಗೃಹಕೃತ್ಯಗಳಲ್ಲಿ ಕೊಂಚ ಬಿಡುವು ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ವಿಚಾರಗಳಲ್ಲಿ ಕಟ್ಟುನಿಟ್ಟು ಅಗತ್ಯ. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿಯಿದೆ.

ವೃಷಭ: ಅವಿವಾಹಿತರಿಗೆ ವಿವಾಹ ಪ್ರಯತ್ನಗಳಿಗೆ ಅಡ್ಡಿ ಆತಂಕಗಳು ಎದುರಾಗಲಿವೆ. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಮಿಥುನ: ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಮಾತಿನ ಮೇಲೆ ನಿಗಾ ಇರಲಿ. ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಕಂಡುಬರಲಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕರ್ಕಟಕ: ಇಷ್ಟ ಜನರ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ. ಶುಭ ಮಂಗಲ ಕಾರ್ಯಗಳ ಸಿದ್ಧತೆಗೆ ಓಡಾಟ ನಡೆಸಬೇಕಾಗುತ್ತದೆ. ಸಂಗಾತಿಯ ಮನಸ್ಸಿನ ದುಃಖಗಳಿಗೆ ಸಾಥ್ ನೀಡಿ. ಕೌಟುಂಬಿಕವಾಗಿ ಕೆಲವೊಂದು ಹೊಸ ಜವಾಬ್ಧಾರಿಗಳನ್ನು ಹೊತ್ತುಕೊಳ್ಳಬೇಕಾಗುತ್ತದೆ.

ಸಿಂಹ: ವೃತ್ತಿರಂಗದಲ್ಲಿ ವಿನಾಕಾರಣ ತೊಂದರೆ ಕೊಡುವವರನ್ನು ಮುಲಾಜಿಲ್ಲದೇ ನಿರ್ಲಕ್ಷಿಸುವುದು ಒಳ್ಳೆಯದು. ಸರಕಾರಿ ಉದ್ಯೋಗಿಗಳಿಗೆ ಕಾರ್ಯಭಾರ ಹೆಚ್ಚಲಿದೆ. ನ್ಯಾಯಾಲಯದ ಕಲಾಪಗಳಿಗೆ ಮುನ್ನಡೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಲಹೆಗಳನ್ನು ಇಷ್ಟವಿಲ್ಲದೇ ಹೋದರೂ ಪಾಲಿಸಲೇಬೇಕಾಗುತ್ತದೆ. ಧನಾಗಮನಕ್ಕೆ ಕೊರತೆಯಿರದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣವಿರಲಿ. ಸ್ವಯಂ ವೃತ್ತಿಯವರಿಗೆ ಲಾಭ ಕಂಡುಬರಲಿದೆ.

ತುಲಾ: ಅಧಿಕ ಧನದಾಸೆಗೆ ಬಿದ್ದು ಪಾಲಿಗೆ ಬಂದ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಮಿತ್ರರ ಸಲಹೆಗಳು ಉಪಯುಕ್ತವೆನಿಸಲಿದೆ. ದಾಯಾದಿ ಕಲಹಗಳಿಗೆ ಅಂತ್ಯ ಸಿಗಲಿದೆ. ಭೂ, ಮನೆ ಖರೀದಿಗೆ ಮುಂದಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ದೈವಾನುಗ್ರಹದಿಂದ ಆರೋಗ್ಯ ಸಮಸ್ಯೆಗಳು ದೂರವಾಗಲಿದೆ. ಮಾನಸಿಕವಾಗಿ ನೆಮ್ಮದಿ ಮೂಡಲಿದೆ. ಕುಟುಂಬ ಸದಸ್ಯರೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ಆದರೆ ವ್ಯಾವಹಾರಿಕವಾಗಿ ನಿಮ್ಮ ನಿಜವಾದ ಶತ್ರುಗಳು ಯಾರು ಎಂದು ಗುರುತಿಸಲು ಕಷ್ಟವಾಗಬಹುದು.

ಧನು: ವೃತ್ತಿರಂಗದಲ್ಲಿ ಪ್ರತಿಸ್ಪರ್ಧಿಗಳಿಂದ ನಿಮಗೆ ತೊಂದರೆಗಳು ಎದುರಾದೀತು. ವಾಸಸ್ಥಳ ಬದಲಾವಣೆಯಿಂದ ಮನಸ್ಸಿಗೆ ಖುಷಿಯಾಗಲಿದೆ. ಬಯಸಿದ ಕೆಲಸಗಳು ಅಡೆತಡೆಯಿದ್ದರೂ ಅಂತಿಮವಾಗಿ ನೆರವೇರಲಿದೆ. ಸಾಮಾಜಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ.

ಮಕರ: ವ್ಯಾಪಾರಿ ವರ್ಗದವರಿಗೆ ಕಿರುಕುಳವಿದ್ದೀತು. ಆದರೆ ಅದಕ್ಕೆಲ್ಲಾ ಎದೆಗುಂದದೇ ಮುನ್ನಡಯಬೇಕು. ಸಾಮಾಜಿಕ ಕ್ಷೇತ್ರದಲ್ಲಿ ಕೀರ್ತಿ ಸಂಪಾದಿಸುವ ಯೋಗವಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಕಾರ್ಯಸಿದ್ಧಿಗಾಗಿ ದೇವರ ಪ್ರಾರ್ಥನೆ ಮಾಡಿ.

ಕುಂಭ: ಬಂಧು ಮಿತ್ರರೊಡನೆ ಉತ್ತಮ ಸಂಬಂಧ ಕಾಯ್ದುಕೊಳ್ಳಲಿದ್ದೀರಿ. ಎಲ್ಲರ ಮನಸ್ಸಿಗೆ ಇಷ್ಟವಾಗುವಂತೆ ನಡೆದುಕೊಳ್ಳುವುದು ಕಷ್ಟವಾದರೂ ಈಗ ಅನಿವಾರ್ಯವೆನಿಸಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿ.

ಮೀನ: ಹೊಸ ವಿಷಯಗಳನ್ನು ಕಲಿಯುವಾಗ ವಿದ್ಯಾರ್ಥಿಗಳಿಗೆ ಅನೇಕ ಸವಾಲುಗಳು ಎದುರಾಗಲಿವೆ. ಆತ್ಮವಿಶ್ವಾಸವಿರಲಿ. ದುಡುಕಿ ಮಾತನಾಡಿ ಬೇರೆಯವರ ಮನಸ್ಸಿಗೆ ನೋವುಂಟು ಮಾಡಬೇಡಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಶಾಂತಿ, ಸಮಾಧಾನವಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ