ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 25 ಜೂನ್ 2020 (09:04 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮದೇ ತಪ್ಪಿಗೆ ಅನ್ಯರ ದೂಷಿಸಿ ಪ್ರಯೋಜನವಿಲ್ಲ. ಆರ್ಥಿಕವಾಗಿ ಬಾಕಿ ಹಣ ವಸೂಲಾತಿ ಚಿಂತೆ ಕಾಡಲಿದೆ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಉತ್ಸಾಹ ಕಂಡುಬರಲಿದೆ. ರಾಜಕೀಯದವರಿಗೆ ಮುನ್ನಡೆ.

ವೃಷಭ: ಅವಿವಾಹಿತರು ಕಂಕಣ ಬಲ ಕೂಡಿ ಬರಲು ಕುಲದೇವರ ಪ್ರಾರ್ಥನೆ ಮಾಡುವುದು ಉತ್ತಮ. ನಿರುದ್ಯೋಗಿಗಳಿಗೆ ಅಡೆತಡೆಗಳು ಬಂದರೂ ಅಂತಿಮವಾಗಿ ಬಯಸಿದ್ದು ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಚಿಂತೆ ಬೇಡ.

ಮಿಥುನ: ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ತೋರಿಬಂದು ಅಂದುಕೊಂಡ ಕಾರ್ಯಗಳು ಅರ್ಧಕ್ಕೇ ನಿಲ್ಲಲಿದೆ. ವೃತ್ತಿರಂಗದಲ್ಲಿ ಹಿರಿಯ ಅಧಿಕಾರಿಗಳೊಡನೆ ಭಿನ್ನಾಭಿಪ್ರಾಯ ತೋರಿಬಂದೀತು. ಮಹಿಳೆಯರಿಗೆ ಅಚ್ಚರಿಯ ಸುದ್ದಿಗಳು ಕೇಳಿಬರಲಿದೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ‍ಪ್ರಯತ್ನಬಲದಿಂದ ಯಶಸ್ಸು ಸಿಗಲಿದೆ. ರಾಜಕೀಯ ರಂಗದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಆದಾಯಕ್ಕೆ ನಾನಾ ಮಾರ್ಗಗಳು ತೋರಿಬರಲಿವೆ. ಕಾರ್ಮಿಕರ ಪರಿಸ್ಥಿತಿ ಸುಧಾರಣೆಯಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ವೃತ್ತಿರಂಗದಲ್ಲಿ ಮೇಲಧಿಕಾರಿಗಳ ಸಲಹೆ ಸೂಚನೆಗಳು ಅಪಥ್ಯವೆನಿಸಬಹುದು. ಆದರೆ ಅನಿವಾರ್ಯವಾಗಿ ಪಾಲಿಸಬೇಕಾಗುತ್ತದೆ. ಸಾಂಸಾರಿಕವಾಗಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಿ ನೆಮ್ಮದಿ ಸಿಗಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ.

ಕನ್ಯಾ: ಮಕ್ಕಳ ಬಗ್ಗೆ ವಿನಾಕಾರಣ ಚಿಂತೆ ಮಾಡುವುದು ಬಿಡಿ. ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಿ ನಿಷ್ಠುರಕ್ಕೊಳಗಾಗುವಿರಿ. ವ್ಯಾಪಾರ, ವ್ಯವಹಾರದಲ್ಲಿ ತಕ್ಕ ಮಟ್ಟಿಗೆ ಲಾಭ ಕಂಡುಬರಲಿದೆ. ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ.

ತುಲಾ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ನಿರುದ್ಯೋಗಿಗಳು ಸರಿಯಾದ ಮಾರ್ಗ ಆಯ್ಕೆ ಮಾಡುವಲ್ಲಿ ಎಡವಬಹುದು. ಎಚ್ಚರಿಕೆ ಅಗತ್ಯ. ದಾಂಪತ್ಯ ಜೀವನದಲ್ಲಿ ಸುಖ ಅನುಭವಿಸುವಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಶ್ಚಿಕ: ನಿಮ್ಮ ಮನಸ್ಸಿಗೆ ಖುಷಿಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ಧನು: ನಿಮಗೆ ಸಂಬಂಧಪಡದ ವಿಚಾರದಲ್ಲಿ ಮೂಗು ತೂರಿಸಲು ಹೋದರೆ ಅವಮಾನ ಎದುರಿಸಬೇಕಾದೀತು. ಮಹಿಳೆಯರು ಸಂಶಯ ಪ್ರವೃತ್ತಿಯಿಂದ ಸಂಬಂಧ ಹಾಳು ಮಾಡಿಕೊಳ್ಳಬಹುದು. ತಾಳ್ಮೆ, ಸಂಯಮ ಅಗತ್ಯ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಕರ: ಸಹೋದರರೊಂದಿಗಿನ ಆಸ್ತಿ ವಿವಾದಗಳಿಗೆ ತಕ್ಕ ಮಟ್ಟಿನ ಪರಿಹಾರ ಕಂಡುಕೊಳ್ಳಲಿದ್ದೀರಿ. ಮಕ್ಕಳಿಂದ ಪೋಷಕರ ಮನಸ್ಸಿಗೆ ಬೇಸರವಾಗುವ ಘಟನೆಗಳು ನಡೆದೀತು. ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ದುಂದು  ವೆಚ್ಚಗಳಿಗೆ ಕಡಿವಾಣ ಹಾಕಿ.

ಕುಂಭ: ಅನವಶ್ಯಕ ಮಾತುಗಳಿಂದ ವಾದ ವಿವಾದವಾದೀತು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳನ್ನು ಬಿಡಿ. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಕಾರ್ಮಿಕ ವರ್ಗದವರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ವೃತ್ತಿರಂಗದಲ್ಲಿ ನಿಮ್ಮ ಹಿಂದೆ ಸಂಚು ನಡೆಸುತ್ತಿದ್ದವರ ಮುಖವಾಡ ಬಯಲಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಕಂಡುಬರಬಹುದು. ಆರ್ಥಿಕವಾಗಿ ಹಣಕಾಸಿನ ಅಡಚಣೆಗಳು ಎದುರಾದೀತು. ಉದಾಸೀನ ಪ್ರವೃತ್ತಿ ಬಿಟ್ಟು ಕಾರ್ಯೋನುಖರಾಗಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ