ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 6 ಜುಲೈ 2020 (09:00 IST)

ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಬದಲಾವಣೆಯಾಗುವ ಸಂಭವವಿದೆ. ಮೇಲಧಿಕಾರಿಗಳ ಸಲಹೆ ಸೂಚನೆಗೆ ಕಿವಿಗೊಡಬೇಕಾಗುತ್ತದೆ. ಪೋಷಕರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಹಿವಹಿಸಬೇಕಾಗುತ್ತದೆ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ.

 

ವೃಷಭ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿಯಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯುವುದು. ಯಾವುದೇ ವಿಚಾರಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಿ ಹೆಜ್ಜೆಯಿಡಿ.

 

ಮಿಥುನ: ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲಿಯೇ ಕಂಕಣ ಬಲ ಕೂಡಿಬರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲು ಪ್ರಯಾಸವಾಗಬಹುದು. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಮನಸ್ಸು ಮಾಡಲಿದ್ದಾರೆ. ಕುಲದೇವರ ಪ್ರಾರ್ಥನೆ ಮಾಡಿ.

 

ಕರ್ಕಟಕ: ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಫಲವಿಲ್ಲ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ವ್ಯಾವಹಾರಿಕವಾಗಿ ಮುನ್ನಡೆಗೆ ಪೂರಕ ವಾತಾವರಣವಿರಲಿದೆ. ನಯವಂಚಕರಿಂದ ದೂರುವಿರುವುದು ಉತ್ತಮ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

 

ಸಿಂಹ: ಯಾವುದೇ ಕೆಲಸಗಳನ್ನು ಮಾಡಬೇಕೆಂದಾಗ ಅಡೆತಡೆಗಳು ಸಾಮಾನ್ಯ. ಅದಕ್ಕಾಗಿ ಚಿಂತಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯ ಮಾಡಲಿದ್ದೀರಿ. ಸಂಗಾತಿಯ ಮಾತುಗಳನ್ನು ಪಾಲಿಸಿದರೆ ಉತ್ತಮ. ಚಿಂತೆ ಬೇಡ.

 

ಕನ್ಯಾ: ಮಕ್ಕಳ ವಿಚಾರದಲ್ಲಿ ಕೆಲವು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾದೀತು. ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವ್ಯಾಪಾರಿಗಳಿಗೆ ಸಾಲಬಾಧೆ ಕಾಡಲಿದೆ.

 

ತುಲಾ: ಬೇರೆಯವರ ಜೀವನದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋಗಬೇಡಿ. ಮಾತಿನ ಮೇಲೆ ನಿಗಾ ಇರಲಿ. ಮನಸ್ಸಿಗೆ ಖುಷಿಕೊಡುವ ಕೆಲಸ ಮಾಡಲಿದ್ದೀರಿ. ಮನೆ ರಿಪೇರಿ, ವಾಹನ ರಿಪೇರಿ ಇತ್ಯಾದಿಗಳಿಗೆ ಖರ್ಚು ವೆಚ್ಚಗಳಾದೀತು.

 

ವೃಶ್ಚಿಕ: ವ್ಯಾಪಾರಿ ವರ್ಗದವರಿಗೆ ನಿವ್ವಳ ಲಾಭ ಗಳಿಸುವ ಅವಕಾಶಗಳು ಬರಲಿವೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

 

ಧನು: ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾಗಬಹುದು. ಸ್ವ ವ್ಯವಹಾರದಲ್ಲಿ ತೊಡಗಿಸಿಕೊಂಡವರಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಚಿಂತೆ ಬೇಡ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ನೆಂಟರಿಷ್ಟರ ಆಗಮನ ಸಾಧ್ಯತೆ.

 

ಮಕರ: ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆ ಎದುರಾಗಬಹುದು. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಕೊಡಬೇಕಾಗುತ್ತದೆ. ದೂರ ಸಂಚಾರಗಳನ್ನು ಅನಿವಾರ್ಯವಾಗಿ ರದ್ದುಮಾಡಬೇಕಾಗುತ್ತದೆ.

 

ಕುಂಭ: ಬಂಧು ಮಿತ್ರರು ತೋರಿಕೆಯ ಪ್ರೀತಿ ತೋರಿಸುತ್ತಿದ್ದಾರೆ ಎಂಬ ಭಾವನೆ ಕಾಡಲಿದೆ. ಯಾರೊಂದಿಗೂ ಅತಿಯಾದ ಅವಲಂಬನೆ ಬೇಡ. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಲೆಕ್ಕಾಚಾರದ ಹೆಜ್ಜೆಯಿಡಬೇಕಾಗುತ್ತದೆ. ಮಕ್ಕಳಿಂದ ಸಂತಸ ಸಿಗಲಿದೆ.

 

ಮೀನ: ಆಕಸ್ಮಿಕವಾಗಿ ಧನಲಾಭವಾಗಲಿದ್ದು, ಅಂದುಕೊಂಡ ಕೆಲಸಗಳನ್ನು ನೆರವೇರಿಸಲಿದ್ದೀರಿ. ವಾಹನ, ಭೂಮಿ ಖರೀದಿ ಯೋಗವಿದೆ. ದೇಹಾರೋಗ್ಯದಲ್ಲಿ ಏರುಪೇರಾಗದಂತೆ ಎಚ್ಚರಿಕೆ ವಹಿಸಿ. ಸಂಗಾತಿಗೆ ಪ್ರೀತಿಯ ಉಡುಗೊರೆ ನೀಡಲಿದ್ದೀರಿ. ಇಷ್ಟ ದೇವರ ಪ್ರಾರ್ಥನೆ ಮಾಡಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ