ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 15 ಜುಲೈ 2020 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬಂಧು ಮಿತ್ರರ ಸಹಕಾರದಿಂದ ಕೆಲವು ಸಮಸ್ಯೆಗಳು ಸುಲಭವಾಗಿ ಪರಿಹಾರವಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗದಂತೆ ಕಾಳಜಿವಹಿಸಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ.

ವೃಷಭ: ವಾಹನ ಸವಾರರಿಗೆ ಕೊಂಚ ಎಚ್ಚರ ತಪ್ಪಿದರೂ ಅವಘಡ ತಪ್ಪಿದ್ದಲ್ಲ. ವಿದ್ಯಾರ್ಥಿಗಳು ಅಭ್ಯಾಸದ ಕಡೆಗೆ ಹೆಚ್ಚಿನ ಗಮನ ಕೊಡಬೇಕಾಗುತ್ತದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ.

ಮಿಥುನ: ವೃತ್ತಿರಂಗದಲ್ಲಿ ಸ್ಥಾನ ಪಲ್ಲಟವಾಗುವ ಸಾಧ‍್ಯತೆಯಿದೆ. ಆಗುವುದೆಲ್ಲವೂ ಒಳ್ಳೆಯದಕ್ಕೇ ಅಂದುಕೊಳ್ಳಿ. ಸಾಂಸಾರಿಕವಾಗಿ ಬರುವ ಸಮಸ್ಯೆಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿಕೊಳ್ಳಿ. ಕುಲದೇವರ ಪ್ರಾರ್ಥನೆಯಿಂದ ಒಳಿತಾಗುವುದು.

ಕರ್ಕಟಕ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಪ್ರೇಮಿಗಳಿಗೆ ಅಗಲುವಿಕೆಯ ನೋವು ಕಾಡಲಿದೆ. ವಿವಾಹ ಮಾತುಕತೆಗಳನ್ನು ಮುಂದೂಡುವುದು ಒಳಿತು. ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ಸರಕಾರಿ ಕೆಲಸಗಳು ಸುಲಭವಾಗಿ ನೆರವೇರದು. ಓಡಾಟ ನಡೆಸಬೇಕಾಗುತ್ತದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಹಳೆಯ ಮಿತ್ರರ ಭೇಟಿ ಮನಸ್ಸಿಗೆ ಸಂತಸ ಕೊಡಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ.

ಕನ್ಯಾ: ಕಟ್ಟಡ ಇತ್ಯಾದಿ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಿದ್ದರೆ ಅರ್ಧಕ್ಕೇ ಸ್ಥಗಿತಗೊಳಿಸಬೇಕಾಗುತ್ತದೆ. ವಿಘ್ನಗಳ ನಿವಾರಣೆಗೆ ಕುಲದೇವರ ಪ್ರಾರ್ಥನೆ ಮಾಡಿ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ತಾಳ್ಮೆಯಿರಲಿ.

ತುಲಾ: ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ. ವೃತ್ತಿರಂಗದಲ್ಲಿ ನಿಮ್ಮ ಸಲಹೆಯಿಂದ ಸಮಸ್ಯೆಗಳು ದೂರವಾಗಲಿವೆ. ಕೃಷಿಕರಿಗೆ ವ್ಯವಹಾರಕ್ಕೆ ಪೂರಕವಾದ ಸನ್ನಿವೇಶ ಒದಗಿಬರಲಿದೆ. ಸ್ವಯಂ ವೃತ್ತಿಯವರಿಗೆ ಲಾಭವಾಗುವುದು.

ವೃಶ್ಚಿಕ: ಆರ್ಥಿಕವಾಗಿ ಖರ್ಚು ವೆಚ್ಚಗಳಿದ್ದರೂ ಉತ್ತಮ ಕೆಲಸಕ್ಕೆ ಧನವಿನಿಯೋಗ ಮಾಡಿದ ಸಂತೋಷ ಸಿಗಲಿದೆ. ಶತ್ರುಬಾಧೆ ನಿವಾರಣೆಯಾಗಲಿದೆ. ಹಳೇ ವ್ಯಾಜ್ಯಗಳು ಪರಿಹಾರವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಪ್ರಯತ್ನ ಪಟ್ಟರೆ ಸಿಗದೇ ಇರುವುದು ಯಾವುದೂ ಇಲ್ಲ ಎಂಬುದನ್ನು ಮನಗಾಣುವಿರಿ. ನಿಮ್ಮ ಹಠವಾದಿ ಮನೋಭಾವ ಕೆಲವೊಮ್ಮೆ ಉಪಯೋಗಕ್ಕೆ ಬಂದರೂ ಇನ್ನು ಕೆಲವೊಮ್ಮೆ ಇತರರ ಅಸಮಾಧಾನಕ್ಕೆ ಕಾರಣವಾಗಬಹುದು. ಸಂಗಾತಿಯ ಮಾತಿಗೆ ಕಿವಿಗೊಡಿ.

ಮಕರ: ವೃತ್ತಿರಂಗದಲ್ಲಿ ಪರಸ್ಪರ ಸಹಕಾರದಿಂದ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ದೂರ ಸಂಚಾರಗಳನ್ನು ಅನಿವಾರ್ಯವಾಗಿ ಮುಂದೂಡಬೇಕಾಗುತ್ತದೆ. ಹಿರಿಯರ ಸೇವೆ ಮಾಡುವ ಭಾಗ್ಯ ನಿಮ್ಮದಾಗಲಿದೆ. ಕೌಟುಂಬಿಕವಾಗಿ ಸಂತಸ ನಿಮ್ಮದಾಗಲಿದೆ.

ಕುಂಭ: ಮಹಿಳೆಯರಿಗೆ ಆಕಸ್ಮಿಕ ಧನಲಾಭವಾಗಲಿದ್ದು, ಚಿನ್ನಾಭರಣ ಖರೀದಿ ಯೋಗವಿದೆ. ಬೇಡದ ವಿಚಾರಗಳಿಗೆ ತಲೆಕೆಡಿಸಿಕೊಂಡು ಸಂಬಂಧಗಳು ಹಾಳುಮಾಡಿಕೊಳ್ಳಬೇಡಿ. ಮಕ್ಕಳಿಂದ ಸಂತೋಷ ಸಿಗುವುದು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಮೀನ: ಬಯಸಿದ ಉದ್ಯೋಗ ಪಡೆಯುವ ನಿರುದ್ಯೋಗಿಗಳು ಕನಸು ನನಸಾಗಲಿದೆ. ವ್ಯಾಪಾರ, ವ್ಯವಹಾರಗಳಿಂದ ಲಾಭ ಸಿಗಲಿದೆ. ಗೃಹೋಪಯೋಗಿ ವಸ್ತುಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ