ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 7 ಆಗಸ್ಟ್ 2020 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಷ್ಟದ ಸಮಯದಲ್ಲಿ ನಿಮ್ಮ ಸ್ವಯಂ ನೀತಿ ನಿಯಮಗಳೇ ಉಪಯೋಗಕ್ಕೆ  ಬರಲಿದೆ. ಶಿಸ್ತಿನ ಜೀವನ ನಡೆಸಿದರೆ ತೊಂದರೆಯಾಗದು. ದೇಹಾರೋಗ್ಯದಲ್ಲಿ ಸುಧಾರಕಣೆ ಕಂಡುಬರಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ.

ವೃಷಭ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಹಿರಿಯರೊಂದಿಗೆ ವಿನಾಕಾರಣ ಸಂಘರ್ಷಕ್ಕಿಳಿಯಬೇಡಿ. ವಿದ್ಯಾರ್ಥಿಗಳಿಗೆ ಮುನ್ನಡೆಗೆ ಅವಕಾಶ ಸಿಗಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಹಿರಿಯರಿಗೆ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯಲಿದೆ. ಕೆಲಸ ಕಾರ್ಯದಲ್ಲಿ ಅನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ.

ಕರ್ಕಟಕ: ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ ಒದಗಿಬರಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಗೆ ಅವಕಾಶ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ಗೃಹ ನಿರ್ಮಾಣ ಕೆಲಸಗಳಿಗೆ ಚಾಲನೆ ನೀಡಲು ಸಕಾಲ. ಆರ್ಥಿಕವಾಗಿ ಬಾಕಿ ಹಣ ಸಂದಾಯವಾಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ವಿರೋಧ ಕಟ್ಟಿಕೊಳ್ಳಬೇಡಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಮಾನಸಿಕ ಒತ್ತಡ ಕಡಿಮೆಯಾಗಲು ದೇವರ ಮೊರೆ ಹೋಗಲಿದ್ದೀರಿ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಸಾಲ ಪಾವತಿ ಚಿಂತೆ ಕಾಡಲಿದೆ. ಧನಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಳೆಯ ಮಿತ್ರರ ಭೇಟಿ ಸಾಧ್ಯತೆ.

ತುಲಾ: ಮಕ್ಕಳ ಭವಿಷ್ಯದ ವಿಚಾರವಾಗಿ ತಲೆಕಡಿಸಿಕೊಳ್ಳಬೇಡಿ. ಶೈಕ್ಷಣಿಕ ರಂಗದಲ್ಲಿರುವವರಿಗೆ ಅಭಿವೃದ್ಧಿ ಕಂಡುಬರಲಿದೆ. ನೂತನ ಉದ್ಯೋಗಕ್ಕೆ ಸೇರಿದವರಿಗೆ ಹೊಂದಾಣಿಕೆ ಕಷ್ಟವಾಗಬಹುದು. ತಾಳ್ಮೆ, ಸಂಯವಿರಲಿ. ಕಿರು ಓಡಾಟ ನಡೆಸಬೇಕಾಗುತ್ತದೆ.

ವೃಶ್ಚಿಕ: ಅನಿರೀಕ್ಷಿತವಾಗಿ ಹೊಸ ಉದ್ಯೋಗಾವಕಾಶಗಳು ನಿಮ್ಮ ಪಾಲಿಗೆ ಒದಗಿ ಬರಲಿವೆ. ಸ್ನೇಹಿತರ ಕಷ್ಟಕ್ಕೆ ನೆರವಾಗಲಿದ್ದೀರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ವಿವಾಹ ಮಾತುಕತೆಗಳಲ್ಲಿ ಮುನ್ನಡೆ ಸಿಗಲಿದೆ.

ಧನು: ವೃತ್ತಿರಂಗದಲ್ಲಿ ಮೇಲ್ವರ್ಗದ ಅಧಿಕಾರಿಗಳ ವಿಶ್ವಾಸ ಗಳಿಸಲಿದ್ದೀರಿ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ವಾಹನ ಚಾಲನೆ ಮಾಡುವ ಎಚ್ಚರಿಕೆ ವಹಿಸುವುದು ಅಗತ್ಯ. ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು.

ಮಕರ: ದೈವ ಬಲವಿಲ್ಲದೇ ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆಯಾಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳನ್ನು ಬಿಡಿ. ಆತ್ಮಸ್ಥೈರ್ಯ ರೂಢಿಸಿಕೊಳ್ಳಿ. ಇಷ್ಟ ಮಿತ್ರರ ಭೇಟಿ ಸಂಭವವಿದೆ. ಹಿರಿಯರಿಗೆ ಸಾಮಾಜಿಕ ಕಾರ್ಯಗಳಿಂದ ಮನಸ್ಸಿಗೆ ತೃಪ್ತಿಯಾಗುವುದು.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಕೆಲವೊಂದು ಘಟನೆಗಳು ನಿಮ್ಮ ಮನಸ್ಸಿಗೆ ನೋವುಂಟುಮಾಡಬಹುದು. ಯಾವುದನ್ನೂ ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ. ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ಆಲಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ನಿರೀಕ್ಷಿತ ರೀತಿಯಲ್ಲಿ ಕೆಲಸ ಕಾರ್ಯಗಳು ನಡೆಯುವುದರಿಂದ ಚಿಂತೆ ಬೇಡ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಸಂಭವ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಸಕಾಲದಲ್ಲಿ ಹಿರಿಯರ ಸೂಕ್ತ ಸಲಹೆ ಸೂಚನೆ ಪಡೆಯಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ