ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 17 ಆಗಸ್ಟ್ 2020 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರಾಗಲಿದ್ದು, ಅಧಿಕ ಖರ್ಚು ವೆಚ್ಚಗಳಾಗಲಿವೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಬೇಕಾಗುತ್ತದೆ. ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ವೃಷಭ: ಸರಕಾರಿ ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯದೊತ್ತಡದಿಂದ ದೇಹ ಹೈರಾಣಾಗಬಹುದು. ಕೃಷಿಕರಿಗೆ ತಮ್ಮ ಚಟುವಟಿಕೆಗಳಿಗೆ ಅಡ್ಡಿ ಎದುರಾಗಲಿದೆ. ಸಾಮಾಜಿಕ ಕಾರ್ಯದಿಂದ ಮನಸ್ಸಿಗೆ ನೆಮ್ಮದಿಯಾಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ನಿಮ್ಮ ಕೆಲಸ ಕಾರ್ಯಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮನಸ್ಸಿಗೆ ನೆಮ್ಮದಿ ಕೊಡುವ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗವಾಗಲಿದೆ. ಹಿರಿಯರಿಗೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದೀತು.

ಕರ್ಕಟಕ: ನಿಮ್ಮ ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳಬೇಕಾದ ಸಮಯವಿದು. ಅಧಿಕ ಧನಲಾಭಕ್ಕಾಗಿ ನಾನಾ ಮಾರ್ಗಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಉತ್ತಮರ ಸಂಗದಿಂದ ಒಳ್ಳೆಯದೇ ಆಗುವುದು. ಸ್ವಯಂ ವೃತ್ತಿಯವರಿಗೆ ಮುನ್ನಡೆ.

ಸಿಂಹ: ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದ್ದು, ಆರ್ಥಿಕವಾಗಿ ನಿಮ್ಮ ಸ್ಥಿತಿ ಗತಿ ಸುಧಾರಿಸಲಿದೆ. ಉದ್ಯೋಗದಲ್ಲಿ ಹಂತ ಹಂತವಾಗಿ ಚೇತರಿಕೆ ಕಂಡುಬರಲಿದೆ. ರಾಜಕೀಯ ರಂಗದವರಿಗೆ ಅಪವಾದದ ಭೀತಿಯಿದೆ, ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ಹೊಸ ಯೋಜನೆಗಳಿಗೆ ಕೈ ಹಾಕುವ ಮುನ್ನ ಅಡ್ಡಿ ಆತಂಕಗಳು ಸಾಮಾನ್ಯ. ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಆತ್ಮವಿಶ್ವಾಸದಿಂದ ಮುಂದುವರಿಯಿರಿ. ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಂಡುಬರಬಹುದು. ತಾಳ್ಮೆ, ಸಂಯಮ ಅಗತ್ಯ.

ತುಲಾ: ಪ್ರೇಮಿಗಳ ವಿಚಾರ ಮನೆಯವರ ಎದುರು ಬಹಿರಂಗವಾಗಲಿದೆ. ಅವಿವಾಹಿತರ ವಿವಾಹ ಮಾತುಕತೆಗಳಿಗೆ ಚಾಲನೆ ಸಿಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ವೃಶ್ಚಿಕ: ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಮಾಡುವ ನಿಮ್ಮ ಕೆಲಸಗಳು ಮುಂದೊಂದು ದಿನ ನಿಮ್ಮನ್ನು ಕಾಪಾಡಲಿದೆ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಸ್ವಯಂ ಉದ್ಯೋಗಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

ಧನು: ಇಷ್ಟ ಮಿತ್ರರೊಂದಿಗೆ ಓಡಾಟ, ಇಷ್ಟ ಭೋಜನ ಮಾಡುವ ಯೋಗವಿದೆ. ಸಂಗಾತಿಯೊಂದಿಗೆ ನಿಮ್ಮ ಮನಸ್ಸಿನ ದುಃಖ ಹಂಚಿಕೊ‍ಳ್ಳುವುದರಿಂದ ಮನಸ್ಸಿನ ಭಾರ ಕಡಿಮೆಯಾಗುವುದು. ಎಷ್ಟೋ ದಿನದಿಂದ ಬಾಕಿಯಿದ್ದ ಹರಕೆ ತೀರಿಸಲು ಮುಂದಾಗುವಿರಿ.

ಮಕರ: ಅಡೆತಡೆಗಳಿದ್ದರೂ ನಿಮ್ಮ ಕಾರ್ಯಸಾಧನೆಯಾಗುವುದರಿಂದ ಚಿಂತೆ ಬೇಡ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ವಾಹನ ಸವಾರರು ಚಾಲನೆಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಕುಂಭ: ಮಹಿಳೆಯರಿಗೆ ಅನಿರೀಕ್ಷಿತ ಧನಲಾಭವಾಗುವ ಯೋಗವಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುವುದು. ನಿಮ್ಮ ಚಿಂತನೆಗಳಿಗೆ ಬೆಲೆ ಸಿಗಲಿದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ.

ಮೀನ: ಕೌಟುಂಬಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಸದಸ್ಯರ ಅಸಮಾಧಾನಕ್ಕೆ ಕಾರಣವಾದೀತು. ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರಾದೀತು. ಆರ್ಥಿಕ ಯೋಜನೆಗಳ ಬಗ್ಗೆ ಎಚ್ಚರಿಕೆಯಿಂದ ಹೆಜ್ಜೆಯಿಡುವುದು ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ