ಮೇಷ: ಅಂದುಕೊಂಡಿದ್ದ ಕೆಲಸಗಳು ಸರಿಯಾದ ಸಮಯದಲ್ಲಿ ನಡೆಯದೇ ಮನಸ್ಸಿಗೆ ಕಸಿವಿಸಿಯಾಗಲಿದೆ. ಆರ್ಥಿಕವಾಗಿ ಹಣಕಾಸಿನ ಬಗ್ಗೆ ಲೆಕ್ಕಾಚಾರದ ಹೆಜ್ಜೆಯಿಡಬೇಕಾಗುತ್ತದೆ. ಗೃಹಿಣಿಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾಗಲಿದೆ.
ವೃಷಭ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿಧಾನವಾಗಿ ಚೇತರಿಸಿಕೊಳ್ಳಲಿವೆ. ಸಾಂಸಾರಿಕವಾಗಿ ಹೊಸ ಅತಿಥಿಗಳ ಆಗಮನವಾಗಲಿದೆ. ಸಂಗಾತಿಯ ಮಾತಿಗೆ ಬೆಲೆಕೊಡಬೇಕಾಗುತ್ತದೆ. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ.
ಮಿಥುನ: ವೃತ್ತಿರಂಗದಲ್ಲಿ ಹೆಚ್ಚಿನ ಅವಕಾಶ ಎದುರಾಗಲಿದ್ದು, ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಅವಿವಾಹಿತರ ವಿವಾಹ ಮಾತುಕತೆಗಳು ಮುಂದೂಡಿಕೆಯಾಗುವುದು. ಚಿಂತೆ ಬೇಡ.
ಕರ್ಕಟಕ: ಇಂದು ನಿಮ್ಮ ಮಾತೇ ನಿಮಗೆ ಶತ್ರುವಾಗಲಿದೆ. ಬಾಯ್ತಪ್ಪಿ ಆಡುವ ಕೆಲವು ಮಾತುಗಳು ಪ್ರೀತಿ ಪಾತ್ರರ ಅಸಮಾಧಾನಕ್ಕೆ ಗುರಿಯಾಗಲಿದೆ. ತಾಳ್ಮೆ, ಸಂಯಮವಿರಲಿ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಸಿಂಹ: ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಪ್ರೀತಿ ಪಾತ್ರರಿಂದ ಅನಿರೀಕ್ಷಿತ ಉಡುಗೊರೆ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಕನ್ಯಾ: ನಿಮ್ಮ ಉನ್ನತಿಯನ್ನು ಯಾರೂ ತಡೆಯಲಾಗದು. ಹಿತಶತ್ರುಗಳಿಂದ ದೂರವಿದ್ದರೆ ಉತ್ತಮ. ಸಂಗಾತಿಯ ಬಹುದಿನಗಳ ಬೇಡಿಕೆ ನೆರವೇರಿಸಲಿದ್ದೀರಿ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ದಿನದಂತ್ಯಕ್ಕೆ ಶುಭ ಸುದ್ದಿ ಕೇಳಿಬರಲಿದೆ.
ತುಲಾ: ಮನಸ್ಸಿನಲ್ಲಿ ಅಂದುಕೊಂಡಿದ್ದ ಕೆಲಸ ಕಾರ್ಯಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ವಾಹನ ರಿಪೇರಿಗಾಗಿ ಖರ್ಚು ವೆಚ್ಚಗಳಾದೀತು. ನೂತನ ದಂಪತಿಗಳಿಗೆ ಹೊಂದಾಣಿಕೆಯ ಕೊರತೆ ಕಂಡುಬಂದೀತು. ಹಿರಿಯರ ಸಲಹೆಗಳನ್ನು ಪಾಲಿಸಿ.
ವೃಶ್ಚಿಕ: ವೃತ್ತಿರಂಗದಲ್ಲಿ ಅಂದುಕೊಂಡಿದ್ದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ವಾಹನ ಖರೀದಿ ಯೋಗವಿದೆ. ಇಷ್ಟ ದೇವರ ಪ್ರಾರ್ಥನೆ, ಹರಕೆ ತೀರಿಸಲು ಮುಂದಾಗಲಿದ್ದೀರಿ. ಮನಸ್ಸಿನ ಮಾತುಗಳನ್ನು ಸಂಗಾತಿ ಜತೆ ಹಂಚಿಕೊಳ್ಳಲಿದ್ದೀರಿ.
ಧನು: ವೃತ್ತಿರಂಗದಲ್ಲಿ ಹೊಸ ಆಶಾಕಿರಣ ಮೂಡಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸವಿರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ.
ಮಕರ: ನಿಮ್ಮ ಪ್ರಾರ್ಥನೆಗೆ ತಕ್ಕ ಫಲ ಸಿಗಲಿದೆ. ಬಹಳ ದಿನಗಳ ನಂತರ ಹಳೆಯ ಮಿತ್ರನನ್ನು ಭೇಟಿಯಾದ ಸಂತೋಷ ಸಿಗಲಿದೆ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ.
ಕುಂಭ: ಕಾರ್ಯರಂಗದ ಕೆಲಸದೊತ್ತಡಗಳಿಂದ ಬಿಡುವು ಪಡೆಯಲಿದ್ದೀರಿ. ಕುಟುಂಬದವರೊಂದಿಗೆ ಅಮೂಲ್ಯ ಸಮಯ ಕಳೆಯಲಿದ್ದೀರಿ. ಇಷ್ಟ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚವಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.
ಮೀನ: ಯಾವುದೇ ಕೆಲಸ ಪ್ರಾರಂಭಿಸಬೇಕೆಂದರೂ ಅಡೆತಡೆಗಳು ಎದುರಾದೀತು. ಆತ್ಮಸ್ಥೈರ್ಯದಿಂದ ಮುನ್ನಡೆಯಿರಿ. ಶುಭ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಅವಿವಾಹಿತರಿಗೆ ಅನಿರೀಕ್ಷಿತ ರೀತಿಯಲ್ಲಿ ಯೋಗ್ಯ ಸಂಬಂಧ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.