ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 8 ಸೆಪ್ಟಂಬರ್ 2020 (09:08 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅದೃಷ್ಟದ ದಿನಗಳು ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಎಣ್ಣೆ ಬಂದಾಗ ಕಣ್ಮುಚ್ಚಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ತಾಳ್ಮೆ, ಸಂಯಮ ಅಗತ್ಯ. ಅನಗತ್ಯ ವಾದ ವಿವಾದಗಳಿಗೆ ಅವಕಾಶ ಕೊಡಬೇಡಿ.

ವೃಷಭ: ದೈವಾನುಕೂಲದಿಂದ ನೀವು ಅಂದುಕೊಂಡ ಕಾರ್ಯಗಳು ಸಾಂಗವಾಗಿ ನೆರವೇರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಯೋಚನೆಗಳಿಗೆ ಬೆಲೆ ಸಿಗಲಿದೆ. ಸಹೋದ್ಯೋಗಿಗಳ ಕಷ್ಟಗಳಿಗೆ ನೆರವಾಗಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ಮಕ್ಕಳ ವಿದ್ಯಾಭ‍್ಯಾಸ ಅತಂತ್ರ ಸ್ಥಿತಿಗೆ ತಲುಪಿದ ಆತಂಕ ಕಾಡುವುದು. ಒಳ್ಳೆಯ ದಿನಗಳಿಗಾಗಿ ಕಾಯಬೇಕಾಗುತ್ತದೆ. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.

ಸಿಂಹ: ಸ್ವಲ್ಪ ಸಮಯದಿಂದ ಕಾಡುತ್ತಿದ್ದ ಸಮಸ್ಯೆಗೆ ಮಿತ್ರರ ಸಲಹೆಯಿಂದ ಪರಿಹಾರ ಸಿಗಲಿದೆ. ಬೇರೆಯವರ ಸಮಸ್ಯೆಗಳಿಗೆ ಅನಗತ್ಯವಾಗಿ ಮೂಗು ತೂರಿಸಲು ಹೋದರೆ ಚಿಂತೆ ತಪ್ಪಿದ್ದಲ್ಲ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ನಿಮ್ಮ ನೇರ ನುಡಿ ಬೇರೆಯವರಿಗೆ ಇಷ್ಟವಾಗದೇ ಇರಬಹುದು. ಆದರೆ ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳಿದರೆ ನಿಮಗೂ ನೆಮ್ಮದಿ.

ತುಲಾ: ಸಹವಾಸ ದೋಷದಿಂದ ಕೆಡುವುದು ಅಂತಾರಲ್ಲ ಅದು ನಿಮ್ಮ ಅನುಭವಕ್ಕೆ ಬರಲಿದೆ. ಉತ್ತಮ ಸ್ನೇಹಿತರನ್ನು ಆರಿಸಿಕೊ‍ಳ್ಳಿ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರ, ಅಪವಾದದ ಭೀತಿಯಿದೆ. ಇಷ್ಟ ಭೋಜನ ಯೋಗವಿದೆ.

ವೃಶ್ಚಿಕ: ನಿಮ್ಮ ಮನಸ್ಸಿನ ದುಃಖವನ್ನು ಇತರರಲ್ಲಿ ಹಂಚಿಕೊಂಡು ಸಮಾಧಾನಗೊಳ್ಳುವಿರಿ. ಆದರೆ ಅತಿಯಾಗಿ ಯಾರ ಮೇಲೂ ಅವಲಂಬನೆ ಒಳ್ಳೆಯದಲ್ಲ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ನಿಮ್ಮ ಜತೆಗೇ ಇದ್ದು ಬೆನ್ನ ಹಿಂದೆ ಚೂರಿ ಹಾಕುವವರ ಸಂಚು ಬಯಲಾಗಿದೆ. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು.

ಮಕರ: ನಿಮ್ಮ ಕೆಲವೊಂದು ನಿರ್ಧಾರಗಳು ಇತರರ ಮನಸ್ಸಿಗೆ ಹಿಡಿಸದೇ ಹೋಗಬಹುದು. ಹಿಡಿದ ಕೆಲಸಗಳನ್ನು ಪೂರ್ತಿ ಮಾಡಿ. ವೃತ್ತಿರಂಗದಲ್ಲಿ ಮೇಲ್ವರ್ಗಕ್ಕೇರುವ ಅವಕಾಶಗಳು ಒದಗಿಬರಲಿದೆ. ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗಲಿದೆ.

ಕುಂಭ: ಮನಸ್ಸಿನಲ್ಲಿ ಅಂದುಕೊಂಡಿದ್ದು ಒಂದು ಆಗಿದ್ದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ನಿಮ್ಮದಾಗುವುದು. ಇಷ್ಟದೇವತೆಯ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ.

ಮೀನ: ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ. ಕೋಪ ತಾಪಗಳಿಗೆ ಅವಕಾಶ ಮಾಡಿಕೊಡಬೇಡಿ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಧನವ್ಯಯವಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಅನಿರೀಕ್ಷಿತವಾಗಿ ಮಿತ್ರರ ಭೇಟಿ ಯೋಗ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ