ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 3 ಅಕ್ಟೋಬರ್ 2020 (08:58 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಎಲ್ಲದರಲ್ಲೂ ಅತಿಯಾದ ಉತ್ಸಾಹದಿಂದ ತೊಡಗಿಸಿಕೊಳ್ಳುತ್ತೀರಿ. ಆದರೆ ಅತಿಯಾದ ನಿರೀಕ್ಷೆಗಳು ಕೆಲವೊಮ್ಮೆ ಬೇಸರಕ್ಕೆ ಕಾರಣವಾಗಬಹುದು. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಮಕ್ಕಳ ಸಂತೋಷಕ್ಕಾಗಿ ಕೆಲವು ಕೆಲಸ ಮಾಡಲಿದ್ದೀರಿ.

ವೃಷಭ: ಆರ್ಥಿಕವಾಗಿ ದಿನೇ ದಿನೇ ಅಭಿವೃದ್ಧಿ ಕಂಡುಬರಲಿದೆ. ಮನೆಯಲ್ಲಿ ಗೃಹಿಣಿಯರಿಗೆ ಬಿಡುವಿಲ್ಲದ ಕೆಲಸದಿಂದ ಒತ್ತಡ ಕಂಡುಬರಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಸ್ವಲ್ಪದರಲ್ಲೇ ಕೈ ತಪ್ಪಿದ ಬೇಸರ ಕಾಡಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಸಣ್ಣ ಪುಟ್ಟ ವಿಚಾರಗಳಿಗೆ ಸಿಡಿಮಿಡಿಗೊಂಡು ಆಪ್ತರ ಮನಸ್ಸಿಗೆ ಬೇಸರವುಂಟು ಮಾಡಲಿದ್ದೀರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ವೃತ್ತಿರಂಗದಲ್ಲಿ ನಿಮ್ಮ ಕೆಲಸಗಳಿಗೆ ಸಹೋದ್ಯೋಗಿಗಳ ಸಹಕಾರನ ಸಿಗಲಿದೆ.

ಕರ್ಕಟಕ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಲಿದ್ದಾರೆ. ಸಹವರ್ತಿಗಳ ಬಗ್ಗೆ ನಿಮ್ಮ ತಪ್ಪು ಕಲ್ಪನೆಗಳು ದೂರವಾಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೈಗೊಂಡ ಕೆಲಸಗಳು ಯಶಸ್ವಿಯಾಗಲಿದೆ.

ಸಿಂಹ: ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದ್ದು, ಪೋಷಕರಿಗೆ ಸಂತಸ ಸಿಗಲಿದೆ. ವೃತ್ತಿರಂಗದಲ್ಲಿ ಹೊಸ ಅವಕಾಶಗಳು ಬಂದಾಗ ಬಳಸಿಕೊಳ್ಳುವುದನ್ನು ಕಲಿಯಬೇಕು. ಮೇಲಧಿಕಾರಿಗಳ ಕೃಪಾಕಟಾಕ್ಷೆಗೆ ಒಳಗಾಗಲಿದ್ದೀರಿ.

ಕನ್ಯಾ: ಮನೆಯ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯೊಂದಿಗೆ ಭಿನ್ನಾಬಿಪ್ರಾಯ ಮೂಡಿಬಂದೀತು. ಆದರೆ ತಾಳ್ಮೆ, ಸಂಯಮ ಅಗತ್ಯ. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ತುಲಾ: ದೈವಾನುಗ್ರಹದಿಂದ ಇಷ್ಟು ದಿನ ನಡೆಯದೇ ಇದ್ದ ಕೆಲಸಗಳು ಇಂದು ಅನಿರೀಕ್ಷಿತವಾಗಿ ನಡೆದುಹೋಗಲಿದೆ. ಅನಿರೀಕ್ಷಿತವಾಗಿ ಹಳೆಯ ಮಿತ್ರನನ್ನು ಭೇಟಿಯಾಗಲಿದ್ದೀರಿ. ಕಾರ್ಯರಂಗದಲ್ಲಿ ಮೇಲಧಿಕಾರಿಗಳೊಂದಿಗೆ ಅನಗತ್ಯ ಸಂಘರ್ಷ ಬೇಡ.

ವೃಶ್ಚಿಕ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಪತ್ನಿ-ಮಕ್ಕಳ ಸಹಕಾರ ಸಿಗಲಿದ್ದು, ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ.

ಧನು: ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ಪರ ಊರಿಗೆ ಪ್ರಯಾಣ ಬೆಳೆಸಬೇಕಾದೀತು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳನ್ನು ಬಿಟ್ಟು ಬಿಡಿ. ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳಿ.

ಮಕರ: ಕೋಪದ ಕೈಗೆ ಬುದ್ಧಿ ಕೊಟ್ಟು ಸಂಬಂಧ ಹಾಳು ಮಾಡಿಕೊಳ್ಳಬೇಡಿ. ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆಯಿಂದ ಪರಿಹಾರ ಕಂಡುಕೊ‍ಳ್ಳಿ. ಸರಕಾರಿ ಕೆಲಸದವರಿಗೆ ಕಾರ್ಯದೊತ್ತಡ ಕೊಂಚ ಕಡಿಮೆಯಾಗಲಿದೆ.

ಕುಂಭ: ಮೆಚ್ಚಿನ ಕೆಲಸ ಮಾಡುವುದರಿಂದ ನಿಮ್ಮ ಮನಸ್ಸಿಗೂ ನೆಮ್ಮದಿ ಸಿಗಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದಿಂದ ಲಾಭ ಸಿಗಲಿದೆ. ಮಕ್ಕಳ ವಿಚಾರವಾಗಿ ಸಂಗಾತಿಯೊಂದಿಗೆ ಸಂಘರ್ಷ ನಡೆಸುವಿರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮೀನ: ಸ್ವಯಂ ಉದ್ಯೋಗಿಗಳಿಗೆ ಧನ ಗಳಿಕೆಗೆ ಹೊಸ ಮಾರ್ಗಗಳು ತೋರಿಬರಲಿವೆ. ಭವಿಷ್ಯದ ದೃಷ್ಟಿಯಿಂದ ಆರ್ಥಿಕವಾಗಿ ಉತ್ತಮ ಯೋಜನೆ ಹಾಕಿಕೊಳ್ಳಿ. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶಿಸಿ ಮುನ್ನಡೆಯಿರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ