ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 11 ಅಕ್ಟೋಬರ್ 2020 (09:28 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಮಹಿಳೆಯರು ಅಲಂಕಾರಿಕ ವಸ್ತುಗಳಿಗಾಗಿ ಖರ್ಚು ವೆಚ್ಚ ಮಾಡುವರು. ಮನಸ್ಸಿನ ಇಚ್ಛೆ ಪೂರೈಸಲು ಮುಂದಾಗುವಿರಿ. ಆದರೆ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಕುಟುಂಬ ಸದಸ್ಯರೊಡನೆ ನಿಮ್ಮ ಬಾಂಧವ್ಯ ಗಟ್ಟಿಯಾಗಲಿದೆ. ಮಡದಿ ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ಬಾಕಿ ಕೆಲಸಗಳನ್ನು ಪೂರ್ತಿ ಮಾಡಲು ಮುಂದಾಗಲಿದ್ದೀರಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಯೋಚನೆ ಮಾಡಲಿದ್ದೀರಿ.

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಮ್ಮ ಉತ್ಸಾಹಕ್ಕೆ ಭಂಗ ತರುವ ಘಟನೆಗಳಾದೀತು. ಆದರೆ ಎದೆಗುಂದದೇ ಮುನ್ನಡೆಯಿರಿ. ಹಿರಿಯರಿಗೆ ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಸಹಕಾರಿಯಾಗುವ ಘಟನೆಗಳು ನಡೆಯಲಿವೆ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗವಿದೆ. ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಗೃಹಿಣಿಯರಿಗೆ ಇಂದು ದೈನಂದಿನ ಕೆಲಸದಿಂದ ದೇಹ ಹೈರಾಣಾದೀತು. ಯಾವುದೇ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬೇಡಿ. ನಿಮ್ಮ ಮಾತಿನಿಂದ ಕುಟುಂಬ ಸದಸ್ಯರ ಮನಸ್ಸಿಗೆ ನೋವುಂಟಾದೀತು. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ನಿಮ್ಮ ಇಷ್ಟಾನುಸಾರ ಕೆಲಸ ಮಾಡಲು ಹೋಗಿ ಸಂಗಾತಿಯ ಮುನಿಸಿಗೆ ಕಾರಣರಾಗಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ನಿವಾರಿಸಲು ಪ್ರಯತ್ನಿಸಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ವ್ಯಕ್ತಿಯ ಭೇಟಿ.

ತುಲಾ: ಮನೆಗೆ ನೆಂಟರಿಷ್ಟರ ಆಗಮನವಾಗಲಿದ್ದು, ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಧನಗಳಿಕೆಗೆ ನಾನಾ ಮಾರ್ಗ ಕಂಡುಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ  ಅಗತ್ಯವಿದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.

ವೃಶ್ಚಿಕ: ಕಾರ್ಯರಂಗದಲ್ಲಿ ಹೊಸ ಸವಾಲುಗಳನ್ನು ಎದುರಿಸಲು ಸಿದ್ಧತೆ ನಡೆಸಿ. ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆಯಿಂದ ಪರಿಹಾರ ಕಂಡುಕೊಳ್ಳಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ಸಾಂಸಾರಿಕ ಜೀವನದಲ್ಲಿ ಜವಾಬ್ಧಾರಿ ಹೆಚ್ಚಲಿದೆ. ಸಂಗಾತಿಯ ಮನಸ್ಸಿನ ಆಸೆ ನೆರವೇರಿಸಲು ಅಡೆತಡೆಗಳು ಎದುರಾದೀತು. ಹಿರಿಯರ ಆರೋಗ್ಯದಲ್ಲಿ ಏರುಪೇರಾದೀತು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆಯುಂಟಾದೀತು.

ಮಕರ: ಅನವಶ್ಯಕವಾಗಿ ಕೊರಗುತ್ತಾ ಮಾನಸಿಕ ಆರೋಗ್ಯ ಹಾಳು ಮಾಡಿಕೊಳ್ಳಬೇಡಿ. ಕಷ್ಟ ಕಾಲದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿ ಎದುರಾಗಲಿದೆ. ವಾಹನ ಸವಾರರು ಎಚ್ಚರಿಕೆಯಿಂದಿರಿ.

ಕುಂಭ: ಅನವಶ್ಯಕ ವಿಚಾರಗಳಿಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ. ಕಾರ್ಯರಂಗದಲ್ಲಿ ನಿಮ್ಮ ಮನಸ್ಸಿಗೆ ಖುಷಿ ಕೊಡುವ ರೀತಿಯಲ್ಲಿ ಕೆಲಸ ಮಾಡುವಿರಿ. ಸಾಮಾಜಿಕವಾಗಿ ಸ್ಥಾನ ಮಾನ ಉತ್ತಮವಾಗಲಿದೆ. ಪ್ರವಾಸಾದಿ ಯೋಗವಿದೆ.

ಮೀನ: ನಿಮ್ಮ ಖಾಸಗಿ ಜೀವನದ ವಿಚಾರಗಳು ಬಹಿರಂಗವಾಗಲಿದೆ. ಪ್ರೇಮಿಗಳಿಗೆ ಮನೆಯವರ ವಿರೋಧ ಬಂದೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ. ವ್ಯಾಪಾರಿ ವರ್ಗದವರಿಗೆ ಮುನ್ನಡೆಯ ಯೋಗವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ