ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 25 ಅಕ್ಟೋಬರ್ 2020 (09:09 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಹಿಳೆಯರಿಗೆ ಮನೆಕೆಲಸ, ವೃತ್ತಿರಂಗ ಎರಡನ್ನೂ ಸರಿದೂಗಿಸಿಕೊಂಡು ಹೋಗುವ ಸವಾಲು ಎದುರಾಗಲಿದೆ. ಕೌಟುಂಬಿಕವಾಗಿ ಬರುವ ಸಮಸ್ಯೆಗಳನ್ನು ಎದುರಿಸಲು ಸಂಗಾತಿಯ ಸಲಹೆ ಪಡೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ವೃತ್ತಿರಂಗದಲ್ಲಿ ಮೇಲಧಿಕಾರಿಗಳ ವಿಶ್ವಾಸ ಗಳಿಸಲಿದ್ದೀರಿ. ಯಾವ ವಿಚಾರವನ್ನೇ ಆದರೂ ನೀವು ಹೇಗೆ ಪರಿಗಣಿಸುತ್ತೀರೋ ಅದರ ಮೇಲೆ ಯಶಸ್ಸು ನಿರ್ಭರವಾಗಿರುತ್ತದೆ. ನೆರೆಹೊರೆಯವರ ಮಾತಿಗೆ ಕಿವಿಗೊಡಬೇಕಾಗಿಲ್ಲ.

ಮಿಥುನ: ಮಂದಗತಿಯಲ್ಲಿ ಸಾಗುತ್ತಿರುವ ಕೆಲಸಗಳಿಗೆ ಚುರುಕು ಮುಟ್ಟಿಸಲಿದ್ದೀರಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಗಮನ ಕೊಡಲಿದ್ದಾರೆ. ಆರ್ಥಿಕವಾಗಿ ಸಂಕಷ್ಟಗಳು ಎದುರಾದೀತು. ಕುಟುಂಬ ಸದಸ್ಯರ ಸಹಕಾರ ಪಡೆಯಲಿದ್ದೀರಿ.

ಕರ್ಕಟಕ: ಬಂಧು ಮಿತ್ರರೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡುವಿರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ದಾಯಾದಿ ಕಲಹಗಳು ದೂರವಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ನಿಮ್ಮ ಮನಸ್ಸಿಗೆ ಹಿಡಿಸುವ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಅನಿರೀಕ್ಷಿತವಾಗಿ ಮನೆಗೆ ಬಂಧು ಮಿತ್ರರ ಭೇಟಿ ಸಂಭವ. ಕುಟುಂಬ ಸದಸ್ಯರ ನಡುವೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕನ್ಯಾ: ಉದ್ಯೋಗ, ವ್ಯವಹಾರದಲ್ಲಿ ನಿಶ್ಚಿತ ಮುನ್ನಡೆ, ಆರ್ಥಿಕ ಲಾಭ ಕಂಡುಬರುವುದು. ಆದರೆ ಕೌಟುಂಬಿಕ ವಿಚಾರಗಳಲ್ಲಿ ಹಲವು ಚಿಂತೆಗಲು ಕಾಡಲಿವೆ. ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾಗಲಿದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ.

ತುಲಾ: ನಿಮ್ಮ ಮನಸ್ಸಿನ ಅಭಿಪ್ರಾಯವನ್ನು ಹಂಚಿಕೊಳ್ಳುವುದರಿಂದ ಬೇರೆಯವರ ನಿಷ್ಠುರಕ್ಕೆ ಕಾರಣವಾಗುವಿರಿ. ಆದರೆ ನಿಮ್ಮ ದಾರಿ ನಿಮಗೆ ಎನ್ನುವ ದೃಢ ವಿಶ್ವಾಸವಿರಲಿ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.

ವೃಶ್ಚಿಕ: ಹೊಸ ಮಿತ್ರರ ಭೇಟಿ ಸಂಭವವಿದೆ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗ ಕಂಡುಕೊಳ್ಳಲಿದ್ದೀರಿ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಭೂಮಿ, ವಾಹನ ಖರೀದಿ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ.

ಧನು: ವ್ಯಾಪಾರ, ವ್ಯವಹಾರದಲ್ಲಿ ಕಷ್ಟ, ನಷ್ಟಗಳು ಸಾಮಾನ್ಯ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಛಾತಿ ಬೆಳೆಸಬೇಕು. ಆರ್ಥಿಕವಾಗಿ ಸಾಲ ಮಾಡುವ ಪರಿಸ್ಥಿತಿ ಎದುರಾದೀತು. ಹಿತ ಮಿತವಾಗಿ ನಡೆದುಕೊಂಡಲ್ಲಿ ಉತ್ತಮ.

ಮಕರ: ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರುವುದು. ನೂತನ ದಂಪತಿಗಳು ಸುಂದರ ಕ್ಷಣ ಕಳೆಯಲಿದ್ದಾರೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗದು.

ಕುಂಭ: ಸರಕಾರಿ ಅಧಿಕಾರಿಗಳಿಗೆ ಕೆಲಸ ಕಾರ್ಯಗಳಲ್ಲಿ ಕೊಂಚ ಕಾರ್ಯದೊತ್ತಡ ಕಡಿಮೆಯಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ಹಳೆಯ ಮಿತ್ರರನ್ನು ಅನಿರೀಕ್ಷಿತವಾಗಿ ಭೇಟಿಯಾದ ಸಂತಸ ಸಿಗಲಿದೆ.

ಮೀನ: ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಲಿದೆ. ಮನೆಯಲ್ಲಿ ದೇವತಾ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ