ಮೇಷ: ವಿದ್ಯಾರ್ಥಿಗಳಿಗೆ ಸಂತಸದ ವಾರ್ತೆ ಕೇಳಿಬರಲಿದೆ. ದೈವಾನುಗ್ರಹ ನಿಮ್ಮ ಮೇಲಿದ್ದು, ಅಂದುಕೊಂಡ ಕೆಲಸ ನೆರವೇರಿಸಲಿದ್ದೀರಿ. ಕಾರ್ಯರಂಗದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶವಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.
ವೃಷಭ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಸಾಮಾಜಿಕವಾಗಿ ಉನ್ನತ ಸ್ಥಾನಮಾನಕ್ಕೇರುವ ಯೋಗವಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಮಿಥುನ: ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ ಒದಗಿಬರಲಿದೆ. ವಾರಂತ್ಯಕ್ಕೆ ಸ್ನೇಹಿತರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.
ಕರ್ಕಟಕ: ದಾಂಪತ್ಯದಲ್ಲಿ ಜೀವನದಲ್ಲಿ ಹೊಂದಾಣಿಕೆ ಕೊರತೆ ಕಂಡುಬರಲಿದೆ. ಯಾವುದೇ ವಿಚಾರಕ್ಕೂ ಅನಗತ್ಯ ಚಿಂತೆ ಮಾಡಲು ಹೋಗಬೇಡಿ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಆದರೆ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.
ಸಿಂಹ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳು ನೆರವೇರಲಿದೆ. ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸದ್ಯದಲ್ಲೇ ಮುಂಬಡ್ತಿಯ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.
ಕನ್ಯಾ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದ್ದು, ಸುಧಾರಣೆ ಕಂಡುಬರಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ನೆರವು ಸಿಗಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ದಿನದಂತ್ಯಕ್ಕೆ ಶುಭ ಸುದ್ದಿ.
ತುಲಾ: ಯಾವುದೇ ನಿರ್ಧಾರಗಳನ್ನೂ ವಿವೇಚನೆಯಿಂದ ಕೈಗೊಂಡರೆ ಉತ್ತಮ. ವೃತ್ತಿರಂಗದಲ್ಲಿ ಕ್ರಿಯಾತ್ಮಕವಾಗಿ ಯೋಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಬಹುಕಾಲದ ನಿಮ್ಮ ಕನಸು ನನಸಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.
ವೃಶ್ಚಿಕ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದ್ದು, ಪೋಷಕರ ಪ್ರಶಂಸೆಗೊಳಗಾಗಲಿದ್ದಾರೆ. ಇತರರ ಮಾತಿನಲ್ಲಿ ಅತಿಯಾದ ವಿಶ್ವಾಸವಿಟ್ಟು ನಿರ್ಧಾರ ತೆಗೆದುಕೊಳ್ಳಬೇಡಿ. ದಾಂಪತ್ಯ ಜೀವನದಲ್ಲಿ ಸುಖ ನೆಮ್ಮದಿ ಕಂಡುಬರಲಿದೆ.
ಧನು: ಮಾನಸಿಕವಾಗಿ ಖಿನ್ನತೆಗೊಳಗಾಗುವಿರಿ. ದೇಹಾರೋಗ್ಯ ನಿಮ್ಮನ್ನು ಚಿಂತೆಗೀಡು ಮಾಡಲಿದೆ. ಶೈಕ್ಷಣಿಕ ರಂಗದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಇಷ್ಟ ಭೋಜನ ಯೋಗವಿದೆ. ಮಹಿಳೆಯರಿಗೆ ಬಂಧು ಮಿತ್ರರ ಭೇಟಿಯಾಗುವ ಯೋಗ.
ಮಕರ: ಕೆಲಸದಲ್ಲಿ ಒಂದು ರೀತಿಯ ನಿರುತ್ಸಾಹ ಕಂಡುಬರಲಿದೆ. ಕೆಳ ಹಂತದ ನೌಕರರಿಗೆ ಉದ್ಯೋಗ ಬದಲಾವಣೆ ಯೋಚನೆ ಬರಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಕುಂಭ: ಸಕಾಲಿಕವಾಗಿ ಮಿತ್ರರ ಸಹಾಯವೊದಗಿಬರಲಿದ್ದು, ಕಷ್ಟದಿಂದ ಪಾರಾಗಲಿದ್ದೀರಿ. ಸಂಗಾತಿಯ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ. ನೂತನ ದಂಪತಿಗಳಿಗೆ ಸುಂದರ ದಿನವಾಗಲಿದೆ.
ಮೀನ: ವ್ಯಾಪಾರ, ವ್ಯವಹಾರ ರಂಗದಲ್ಲಿರುವವರಿಗೆ ನಿವ್ವಳ ಲಾಭ ಕಂಡುಬರಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು.