ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 30 ಡಿಸೆಂಬರ್ 2020 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಶತ್ರುಬಾಧೆಯಿಂದ ಪದೇ ಪದೇ ಕೆಲಸ ಕಾರ್ಯಗಳಲ್ಲಿ ವಿಘ್ನ ತೋರಿಬರಲಿದೆ. ನಿಮ್ಮ ಹತ್ತಿರದವರಿಂದಲೇ ವಂಚನೆಗೊಳಗಾಗುವ ಸಾಧ್ಯತೆಯಿದೆ. ಎಚ್ಚರಿಕೆಯಿಂದಿರಿ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆಯಿರಲಿ.

ವೃಷಭ: ಹೊಸ ವಾಹನ ಖರೀದಿಸುವ ನಿಮ್ಮ ಕನಸು ಸದ್ಯದಲ್ಲೇ ಕೈಗೂಡಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಕೃಷಿ, ವ್ಯವಹಾರದಲ್ಲಿ ತೊಡಗಿಸಿಕೊಂಡವರಿಗೆ ಮುನ್ನಡೆಯ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಹೊಸದಾಗಿ ಆರಂಭಿಸಿರುವ ನಿಮ್ಮ ವೃತ್ತಿ ಜೀವನದಲ್ಲಿ ಯಶಸ್ಸು ಕಾಣಲು ಪರಿಶ್ರಮಪಡಬೇಕಾಗಬಹುದು. ತಾಳ್ಮೆ, ಸಂಯಮ  ಅಗತ್ಯ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಮಿತ್ರರ ಭೇಟಿಯಾಗಲಿದ್ದೀರಿ.

ಕರ್ಕಟಕ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ವಿಲಾಸೀ ಜೀವನದ ನಿಮ್ಮ ಕನಸು ಸದ್ಯದಲ್ಲೇ ನನಸಾದೀತು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಸಿಂಹ:  ವೃತ್ತಿರಂಗದಲ್ಲಿ ಉತ್ತಮ ಸ್ಥಾನ ಮಾನ ಪಡೆಯಲು ಒದ್ದಾಟ ತಪ್ಪದು. ಮಕ್ಕಳ ವಿದ್ಯಾಭ‍್ಯಾಸದ ನಿಮಿತ್ತ ಖರ್ಚು ವೆಚ್ಚಗಳಾಗಲಿವೆ. ಯೋಗ್ಯ ವಯಸ್ಕರಿಗೆ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಕಿರು ಸಂಚಾರ ಮಾಡುವಿರಿ.

ಕನ್ಯಾ:  ನಿಮ್ಮದಲ್ಲದ ತಪ್ಪಿಗೆ ಪಶ್ಚಾತ್ತಾಪ ಪಡುವ ಪರಿಸ್ಥಿತಿ ಎದುರಾದೀತು. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ದೇವಾಲಯ ಸಂದರ್ಶನ ಯೋಗವಿದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

ತುಲಾ: ವೃತ್ತಿರಂಗದಲ್ಲಿ ಅನೇಕ ತೊಡಕುಗಳಿದ್ದರೂ ಅಂತಿಮ ಜಯ ನಿಮ್ಮದಾಗುವುದು. ಕಳೆದೇ ಹೋಯಿತು ಎಂದಿದ್ದ ವಸ್ತು ಅನಿರೀಕ್ಷಿತವಾಗಿ ನಿಮ್ಮ ಕೈ ಸೇರಲಿದೆ. ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ತೊಡಗಿಸಿಕೊಳ್ಳಲು ಸಕಾಲ.

ವೃಶ್ಚಿಕ: ಕೌಟುಂಬಿಕವಾಗಿ ಸುಖ ಶಾಂತಿಗೆ ತೊಂದರೆಯಿರದು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಸಂಗಾತಿಯ ಬಹುದಿನಗಳ ಬೇಡಿಕೆ ಪೂರೈಸಲು ಮುಂದಾಗುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಧನು: ಮಕ್ಕಳ ವಿಚಾರಕ್ಕೆ ಅನಗತ್ಯ ತಲೆಕೆಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ನೆರೆಹೊರೆಯವರು ನಿಮ್ಮ ಗುಟ್ಟು ತಿಳಿದುಕೊಳ್ಳಲು ಪ್ರಯತ್ನಿಸುವರು. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಮಹಿಳೆಯರಿಗೆ ಔದ್ಯೋಗಿಕವಾಗಿ ಮುನ್ನಡೆಯಿರಲಿದೆ. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳು ಬಾರದಂತೆ ಎಚ್ಚರಿಕೆ ವಹಿಸಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಕುಂಭ: ಇಷ್ಟಮಿತ್ರರೊಂದಿಗೆ ಪ್ರವಾಸ, ಭೋಜನ ಮಾಡುವ ಯೋಗ ಕೂಡಿಬರಲಿದೆ. ನಿಮ್ಮ ಕ್ರಿಯಾತ್ಮಕ ಯೋಚನೆಗಳು ಇತರರ ಮೆಚ್ಚುಗೆಗೆ ಪಾತ್ರವಾಗಲಿದೆ. ಹಣಕಾಸಿನ ವಿಚಾರವಾಗಿ ಆಪ್ತರೊಂದಿಗೆ ಕಲಹಗಳಾಗದಂತೆ ಎಚ್ಚರಿಕೆ ವಹಿಸಿ.

ಮೀನ: ನೂತನ ದಂಪತಿಗಳಿಗೆ ಸದ್ಯದಲ್ಲೇ ಶುಭ ವಾರ್ತೆ ಕೇಳಿಬರಲಿದೆ. ಹಳೆಯ ಮಿತ್ರರನ್ನು ಭೇಟಿಯಾದ ಸಂತಸ ಮನಸ್ಸಿಗೆ ಸಿಗಲಿದೆ. ಪತ್ನಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಗೃಹ ನಿರ್ಮಾಣ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ