ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 1 ಜನವರಿ 2021 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೆಲಸದ ವಿಚಾರದಲ್ಲಿ ನಿಮ್ಮ ಏಳಿಗೆಯನ್ನು ತಡೆಯಲು ಯಾರಿಂದಲೂ ಸಾಧ್ಯವಾಗದು. ಕ್ರಿಯಾತ್ಮಕ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಕೌಟುಂಬಿಕ ವಿಚಾರದಲ್ಲಿ ಅನಗತ್ಯ ವಿವಾದಗಳನ್ನು ಮೈಮೇಲೆಳೆದುಕೊಳ್ಳಬೇಡಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಸಫಲತೆಯನ್ನು ಕಾಣಲಿದ್ದೀರಿ. ಹೊಸ ಯೋಜನೆಗಳಿಗೆ ಬಂಡವಾಳ ಹೂಡಲಿದ್ದೀರಿ. ಮನೆಯಲ್ಲಿ ಪತ್ನಿ ಜೊತೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ.

ಮಿಥುನ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಲಿದೆ. ಗೌರವ ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಕೃಷಿಕರಿಗೆ ವ್ಯವಹಾರಗಳಿಗೆ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ವ್ಯಾಪಾರ, ವ್ಯವಹಾರ ಕ್ಷೇತ್ರದಲ್ಲಿ ನಷ್ಟದಿಂದ ಚೇತರಿಸಿಕೊಳ್ಳಲಿದ್ದೀರಿ. ಆರ್ಥಿಕ ಚಟುವಟಿಕೆಗಳು ಸುಗಮವಾಗಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡವಿರಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯುವುದು.

ಸಿಂಹ: ಅನಿರೀಕ್ಷಿತವಾಗಿ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ಇಷ್ಟದೇವತೆಗಳ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಕೈ ಹಿಡಿದ ಕೆಲಸಗಳು ಯಶಸ್ವಿಯಾಗಲಿವೆ. ಆರ್ಥಿಕವಾಗಿ ಹಣಕಾಸಿನ ತೊಂದರೆಗಳು ನಿವಾರಣೆಯಾಗಲಿವೆ.

ಕನ್ಯಾ:  ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಲಿವೆ. ಪ್ರೀತಿ ಪಾತ್ರರನ್ನು ಮರಳಿ ಸೇರಿದ ಖುಷಿ ನಿಮ್ಮದಾಗುವುದು. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಾಧ್ಯತೆ. ಕಿರು ಓಡಾಟ ನಡೆಸಬೇಕಾಗುತ್ತದೆ.

ತುಲಾ: ಹಿರಿಯರು ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆ ಸೇರುವಂತಾದೀತು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತೋರಿಬಂದೀತು. ಮನಸ್ಸಿಗೆ ಹಿಡಿಸಿದವರ ಜೊತೆ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಮನಸ್ಸಿಗೆ ಉಲ್ಲಾಸದಾಯಕವೆನಿಸಲಿದ್ದು, ಕಾರ್ಯಕ್ಷೇತ್ರದಲ್ಲಿ ಉತ್ಸಾಹ ಇಮ್ಮಡಿಯಾಗುವುದು. ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಸಂಗಾತಿಯ ಭಾವನೆಗಳಿಗೆ ಬೆಲೆಕೊಡಿ. ಆತುರದ ನಿರ್ಧಾರ ಬೇಡ.

ಧನು: ಬಂಧು ವರ್ಗದವರಿಂದ ಚಾಡಿ ಮಾತುಗಳು ಕೇಳಿಬಂದೀತು. ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಿ ಸಮಸ್ಯೆಗೆ ಸಿಲುಕಬೇಡಿ. ಮಾತಿನ ಮೇಲೆ ನಿಗಾ ಇರಲಿ. ದಾಯಾದಿ ಕಲಹಗಳ ನಿವಾರಣೆಗೆ ಹಿರಿಯರ ಮಧ್ಯಸ್ಥಿಕೆ ಉತ್ತಮ.

ಮಕರ: ಬಹುದಿನಗಳ ಕನಸು ನನಸು ಮಾಡಿಕೊಳ್ಳಲಿದ್ದೀರಿ. ಸದ್ಯದಲ್ಲೇ ವಾಹನ ಖರೀದಿ ಯೋಗ ಕೂಡಿಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆಯಿರಲಿ.

ಕುಂಭ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಶತ್ರುಗಳಿಗೆ ಹಿನ್ನಡೆಯಾಗಲಿದೆ. ನಿಮ್ಮ ಉನ್ನತಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಕೌಟುಂಬಿಕವಾಗಿ ಮಕ್ಕಳ ದೇಹಾರೋಗ್ಯ ಚಿಂತೆಗೀಡು ಮಾಡೀತು. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ಕೌಟುಂಬಿಕವಾಗಿ ಸಂತಸದ ವಾತಾವರಣವಿರಲಿದೆ. ಪ್ರೀತಿ ಪಾತ್ರರನ್ನು ಬಹಳ ದಿನಗಳ ನಂತರ ಭೇಟಿ ಮಾಡಲಿದ್ದೀರಿ. ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗಕ್ಕೆ ಹುಡುಕಾಟ ತಪ್ಪದು. ಸ್ವಯಂ ವ್ಯಾಪಾರಿಗಳಿಗೆ ಮುನ್ನಡೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ