ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 24 ಜನವರಿ 2021 (07:15 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗುವುದು. ಇಷ್ಟದೇವರ ದೇವಾಲಯ ಸಂದರ್ಶನ ಮಾಡುವ ಯೋಗ ಕೂಡಿಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ವೈಯಕ್ತಿಕ ವಿಚಾರದಲ್ಲಿ ನಿಮ್ಮ ಮನಸ್ಸಿನ ನೋವನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆಯ ಯೋಗವಿದೆ.

ಮಿಥುನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರುವುದು. ಮನಸ್ಸಿನ ಮಾತಿನಂತೆ ನಡೆಯಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ನಿಮ್ಮ ಭಾವನೆ ಹಂಚಿಕೊಳ್ಳಲಿದ್ದೀರಿ.

ಕರ್ಕಟಕ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಯಶಸ್ಸು ಪಡೆಯುವಿರಿ.

ಸಿಂಹ: ಮನೆಗೆ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದೆ. ಸ್ನೇಹಿತರೊಂದಿಗೆ ಪ್ರವಾಸ, ವಿನೋದ ಯಾತ್ರೆ ಕೈಗೊಳ್ಳುವ ಯೋಗವಿದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಕನ್ಯಾ: ನಿಮ್ಮ ಕೈ ಮೀರಿ ಹೋದ ಘಟನೆಗಳ ಬಗ್ಗೆ ಚಿಂತಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಹಣಕಾಸಿನ ಮುಗ್ಗಟ್ಟು ಸರಿದೂಗಿಸಲು ಪ್ರಯತ್ನ ನಡೆಸಬೇಕಾಗುತ್ತದೆ. ಸಂಗಾತಿಯ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದರೆ ಉತ್ತಮ.

ತುಲಾ: ವೈಯಕ್ತಿಕವಾಗಿ ಕೆಲವೊಂದು ದೃಢ ನಿರ್ಧಾರ ಕೈಗೊಳ್ಳುವ ಸಂದರ್ಭಗಳು ಎದುರಾದೀತು. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗಕ್ಕೆ ಹೊಸ ದಾರಿಗಳು ಕಂಡುಬರಲಿದೆ.

ವೃಶ್ಚಿಕ: ಕಾರ್ಯರಂಗದಲ್ಲಿ ಬರುವ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಹೊಸ ಕೆಲಸಗಳಿಗೆ ಕೈ ಹಾಕಲಿದ್ದೀರಿ. ವಿಘ್ನ ಭಯವಿದ್ದರೂ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಧನು: ಬೇರೆಯವರೊಂದಿಗೆ ನಿಮ್ಮನ್ನು ಹೋಲಿಸಿಕೊಂಡು ಕೀಳರಿಮೆ ಪಟ್ಟುಕೊಳ್ಳುವುದನ್ನು ಬಿಡಿ. ಹೊಸ ವಸ್ತ್ರಾಭರಣ ಖರೀದಿ ಯೋಗವಿದೆ. ಸಂಗಾತಿಯ ಸಲಹೆಗಳು ಅಪಥ್ಯವೆನಿಸೀತು. ತಾಳ್ಮೆ, ಸಂಯಮವಿರಲಿ. ಹೊಸ ಮಿತ್ರರ ಭೇಟಿಯಾಗಲಿದ್ದೀರಿ.

ಮಕರ: ಕೌಟುಂಬಿಕವಾಗಿ ನಿರ್ಧಾರಗಳನ್ನು ಕೈಗೊಳ್ಳುವಾಗ ಎಲ್ಲರ ಸಹಮತ ಪಡೆದು ಮುನ್ನಡೆದರೆ ಉತ್ತಮ. ನಿಮ್ಮ ಗುಟ್ಟುಗಳು ಬಹಿರಂಗವಾಗಿದೆ. ನೆರೆಹೊರೆಯವರೊಂದಿಗೆ ನೀರಿನ ವಿಚಾರಕ್ಕೆ ಮನಸ್ತಾಪ ಬಂದೀತು. ತಾಳ್ಮೆಯಿರಲಿ.

ಕುಂಭ: ನಿಮ್ಮ ಉತ್ಸಾಹಕ್ಕೆ ಭಂಗ ತರುವ ಘಟನೆಗಳಾದೀತು. ಸರಕಾರಿ ಲೆಕ್ಕ ಪತ್ರಗಳನ್ನು ಸರಿಯಾಗಿ ಜೋಡಿಸಿಟ್ಟುಕೊಳ್ಳಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕಿರು ಓಡಾಟ ನಡೆಸಬೇಕಾಗುತ್ತದೆ.

ಮೀನ: ಗೃಹೋಪಯೋಗಿ ವಸ್ತುಗಳ ಖರೀದಿ ನಿಮಿತ್ತ ಅಧಿಕ ಖರ್ಚು ವೆಚ್ಚಗಳಾದೀತು. ಸಾಂಸಾರಿಕ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಬಂಧು ಜನರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ