ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 16 ಫೆಬ್ರವರಿ 2021 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಸಂಬಂಧವಾದ ವಿಚಾರಕ್ಕೆ ತಲೆಕೆಡಿಸಿಕೊಂಡು ವೈಯಕ್ತಿಕ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಸಂಗಾತಿಯೊಂದಿಗೆ ತಾಳ್ಮೆಯಿಂದ ವರ್ತಿಸಿ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನಹರಿಸಬೇಕಾಗುತ್ತದೆ.

ವೃಷಭ: ಇಷ್ಟದಿನ ಕಾಡುತ್ತಿದ್ದ ಸಮಸ್ಯೆಗಳಿಗೆ ಆಪ್ತರೊಂದಿಗೆ ಸಮಾಲೋಚಿಸಿ ಪರಿಹಾರ ಕಂಡುಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾಗಲಿವೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಮನಸ್ಸಿನ ಆಸೆ ಪೂರೈಸಿಕೊಳ್ಳಲು ಖರ್ಚು ವೆಚ್ಚಗಳಾದೀತು. ಸಂಗಾತಿಯ ಕಷ್ಟಗಳಿಗೆ ಹೆಗಲುಕೊಡಲಿದ್ದೀರಿ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ. ಕೃಷಿಕರು ಲಾಭದಾಯಕ ಬೆಳೆಯ ಬಗ್ಗೆ ಚಿಂತನೆ ನಡೆಸಲಿದ್ದಾರೆ.

ಕರ್ಕಟಕ: ಕಳೆದು ಹೋದ ಸಂಬಂಧ ಮರಳಿ ಕೂಡಿಸಲು ಪ್ರಯತ್ನಿಸಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸಿದಲ್ಲಿ ಉತ್ತಮ. ವ್ಯಾವಹಾರಿಕವಾಗಿ ನಷ್ಟವಾಗದಂತೆ ಎಚ್ಚರಿಕೆ ವಹಿಸಿ. ವಾಹನ ಸವಾರರು ಎಚ್ಚರಿಕೆಯಿಂದಿರಬೇಕು. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಸಿಂಹ: ವೃತ್ತಿರಂಗದಲ್ಲಿ ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬಾರದೇ ನಿರಾಸೆಯಾದೀತು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.

ಕನ್ಯಾ: ಆದಾಯ ಮೂಲಕ್ಕೆ ಪೆಟ್ಟು ಬಿದ್ದು, ಅಂದುಕೊಂಡ ಕೆಲಸಗಳು ಏರುಪೇರಾದೀತು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಅಸಹನೆ ಎದುರಿಸಬೇಕಾಗುತ್ತದೆ. ತಾಳ್ಮೆ, ಸಂಯಮ ಅಗತ್ಯ. ಸಂಗಾತಿಯ ಸಹಕಾರ ಸಿಗಲಿದೆ.

ತುಲಾ: ದಾಂಪತ್ಯದಲ್ಲಿ ಕಲಹ, ಭಿನ್ನಾಭಿಪ್ರಾಯ ಕಂಡುಬಂದೀತು. ಮಾತು, ವರ್ತನೆ ಬಗ್ಗೆ ಎಚ್ಚರಿಕೆಯಿರಲಿ. ಹೊಸ ವ್ಯವಹಾರಗಳಿಗೆ ಬಂಡವಾಳ ಹೂಡಿಕೆ ಮಾಡಲಿದ್ದೀರಿ. ವಿಶೇಷ ವ್ಯಕ್ತಿಗಳ ಭೇಟಿಯಿಂದ ಕಾರ್ಯಸಾಧನೆಯಾಗಲಿದೆ.

ವೃಶ್ಚಿಕ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲು ಮನಸ್ಸು ಹಾತೊರೆಯುವುದು. ಸರಕಾರಿ ಉದ್ಯೋಗಿಗಳಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾದೀತು. ಧಾರ್ಮಿಕ ಕಾರ್ಯಕ್ರಮಗಳಿಗೆ ಧನವಿನಿಯೋಗ ಮಾಡಲಿದ್ದೀರಿ.

ಧನು: ಕಾರ್ಯರಂಗದಲ್ಲಿ ಶತ್ರು ಪೀಡೆ ಅಧಿಕವಾಗಲಿದೆ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಅಂದುಕೊಂಡ ಕೆಲಸ ಸುಗಮವಾಗಲಿದೆ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ.

ಮಕರ: ಮಾನಸಿಕವಾಗಿ ಋಣಾತ್ಮಕವಾದ ಯೋಚನೆಗಳಿಂದ ಕೆಲಸದಲ್ಲಿ ನಿರುತ್ಸಾಹ ಮೂಡೀತು. ಸಂಗಾತಿಯೊಂದಿಗೆ ನಿಮ್ಮ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಕುಂಭ: ಇಂದು ನೀವು ಕೈಗೆತ್ತಿಕೊಳ್ಳಲಿರುವ ಕೆಲಸಗಳು ಸುಗಮವಾಗಿ ನೆರವೇರಲಿದೆ. ಕಾರ್ಯಕ್ಷೇತ್ರದಲ್ಲಿ ಅಡೆತಡೆಗಳಿದ್ದರೂ ನಿಮ್ಮ ಮುನ್ನಡೆಯನ್ನು ಯಾರಿಂದಲೂ ತಡೆಯಲಾಗದು. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮೀನ: ಉದ್ಯೋಗಸ್ಥ ಮಹಿಳೆಯರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ಆತುರದಲ್ಲಿ ಕೈಗೊಳ್ಳುವ ನಿರ್ಧಾರಗಳಿಂದ ಕೈಸುಟ್ಟುಕೊಳ್ಳಬೇಕಾದೀತು. ಹೊಸ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ