ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 3 ಮಾರ್ಚ್ 2021 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕೆಲವೊಂದು ಆದೇಶಗಳು ನಿಮ್ಮ ಅಸಹನೆ ಹೆಚ್ಚಿಸಲಿವೆ. ಕೆಲವೊಮ್ಮೆ ಇಷ್ಟವಿಲ್ಲದಿದ್ದರೂ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಆರೋಗ್ಯದಲ್ಲಿ ಗಮನಾರ್ಹ ಚೇತರಿಕೆ ಕಂಡುಬರಲಿದೆ.

ವೃಷಭ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ದೈಹಿಕ, ಮಾನಸಿಕ ಆರೋಗ್ಯ ಹಾಳುಮಾಡಿಕೊಳ್ಳಬೇಡಿ. ಪ್ರೀತಿ ಪಾತ್ರರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಿ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು.

ಮಿಥುನ: ನೀವು ಹಿಂದೆ ಮಾಡಿದ ತಪ್ಪು ಏನೆಂದು ತಿಳಿದುಕೊಂಡು ಹೊಸ ಕೆಲಸಕ್ಕೆ ಕೈ ಹಾಕುವುದು ಸೂಕ್ತ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ.

ಕರ್ಕಟಕ: ವೃತ್ತಿರಂಗದಲ್ಲಿ ನಿಮ್ಮ ಏಳಿಗೆಯನ್ನು ತಡೆಯಲು ಯಾರಿಂದಲೂ ಆಗದು. ಬೇರೆಯವರು ನಿಮ್ಮ ಬಗ್ಗೆ ಏನು ತಿಳಿದುಕೊಳ್ಳುತ್ತಾರೋ ಎಂಬ ಕೀಳರಿಮೆ ಬೇಡ. ಸ್ವಯಂ ಉದ್ಯೋಗಿಗಳಿಗೆ ಆರ್ಥಿಕವಾಗಿ ಮುನ್ನಡೆಯ ಯೋಗ.

ಸಿಂಹ: ಕಷ್ಟದ ಸಮಯದಲ್ಲಿ ನಿಮ್ಮ ನೆರವಿಗೆ ಬಂದವರಿಗೆ ನೀವು ಆಗಿ ಬರಲಿದ್ದೀರಿ. ವೈಯಕ್ತಿಕ ವಿಚಾರಗಳಲ್ಲಿ ಮೂರನೆಯವರಿಗೆ ಮೂಗು ತೂರಿಸಲು ಅವಕಾಶ ಕೊಡಬೇಡಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸುವಿರಿ.

ಕನ್ಯಾ: ನೀವು ಅಂದುಕೊಂಡಿದ್ದ ಕೆಲಸ ಅಂದುಕೊಂಡ ರೀತಿಯಲ್ಲೇ ಸಾಗಿ ಮನಸ್ಸಿಗೆ ಸಂತೋಷವಾಗಲಿದೆ. ನಿಮಗೆ ಕೇಡು ಬಯಸಿದವರನ್ನು ಉದಾಸೀನ ಮಾಡುವುದೇ ಉತ್ತಮ. ಹಣ ಗಳಿಕೆಗೆ ಹೊಸ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ.

ತುಲಾ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಪ್ರೀತಿ ಪಾತ್ರರಿಗೆ ಅಚ್ಚರಿಯ ಉಡುಗೊರೆ ನೀಡಲಿದ್ದೀರಿ.

ವೃಶ್ಚಿಕ: ವೈಯಕ್ತಿಕ ಸಂತೋಷಕ್ಕೆ ಕೆಲವು ಸಮಯ ಮೀಸಲಿಡಲಿದ್ದೀರಿ. ಸಂಗಾತಿಯ ಪ್ರೀತಿಗೆ ಪಾತ್ರರಾಗಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ಸಂತೋಷವಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಧನು: ಬೇರೆಯವರು ನಿಮ್ಮ ಬಗ್ಗೆ ಏನು ತಿಳಿದುಕೊಳ್ಳುತ್ತಾರೋ ಎಂಬ ಕೀಳರಿಮೆ ಬೇಡ. ನಿಮ್ಮ ಯಶಸ್ಸಿನ ಹಾದಿಯಲ್ಲಿ ಅಡೆತಡೆಗಳು ಬರಲಿವೆ. ಆದರೆ ಎಲ್ಲವನ್ನೂ ಎದುರಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಕರ: ಆಪ್ತೇಷ್ಟರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ ಕೂಡಿಬರಲಿದೆ. ಸ್ನೇಹಿತರ ಕಷ್ಟಕ್ಕೆ ನೆರವಾಗಲಿದ್ದೀರಿ. ಖರ್ಚು ವೆಚ್ಚಗಳಿಗೆ ಮಿತಿಯಿರಲಿ.

ಕುಂಭ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಅಲಕ್ಷ್ಯ ಬೇಡ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ಸಂತೋಷವಾಗುವುದು. ನಿಮ್ಮ ಪ್ರೀತಿಪಾತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಚಿಂತೆ ಬೇಡ.

ಮೀನ: ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಂದಲೇ ಎಲ್ಲರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಬಂಧು ಮಿತ್ರರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ