ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 11 ಏಪ್ರಿಲ್ 2021 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನಿರೀಕ್ಷಿತವಾಗಿ ಬಂದ ಖರ್ಚು ವೆಚ್ಚಗಳಿಂದ ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ದೇಹಾರೋಗ್ಯ ಸುಧಾರಣೆಗೆ ಚಿಕಿತ್ಸೆ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ವೃಷಭ: ಹಲವು ರೀತಿಯ ಎಡರು ತೊಡರುಗಳಿದ್ದರೂ ನೀವು ಅಂದುಕೊಂಡ ಕೆಲಸ ಕಾರ್ಯಗಳು ನೆರವೇರಲಿವೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಯಶಸ್ವಿಯಾಗಿ ಮುಗಿಸಿದ ನೆಮ್ಮದಿ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಹೊಸ ಸಂಬಂಧಗಳು ಹೊಸ ಉತ್ಸಾಹ ತುಂಬಲಿದೆ. ಅತಿಥಿ ಸತ್ಕಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ಹೊಸ ವ್ಯಾಪಾರಗಳಲ್ಲಿ ಬಂಡವಾಳ ಹೂಡಿಕೆ ಮಾಡಿದರೆ ಯಶಸ್ಸು ಸಿಗಲಿದೆ. ಅನಗತ್ಯ ಖರ್ಚುವೆಚ್ಚಗಳಿಗೆ ಕಡಿವಾಣ ಹಾಕಿ.

ಕರ್ಕಟಕ: ಶ್ರೀದೇವರ ಅನುಗ್ರಹದಿಂದ ನಿಮ್ಮ ಕೆಲಸಗಳೆಲ್ಲಾ ಯಶಸ್ವಿಯಾದೀತು. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಅಂದುಕೊಂಡ ಕೆಲಸ ಪೂರ್ತಿ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಸಿಂಹ: ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ. ವೈಯಕ್ತಿಕ ದುಃಖ ದುಮ್ಮಾನಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ತಾತ್ಕಾಲಿಕ ವೃತ್ತಿಯವರಿಗೆ ಉದ್ಯೋಗ ಭದ್ರತೆಯ ಭರವಸೆ ಸಿಗಲಿದೆ.

ಕನ್ಯಾ: ಪ್ರೀತಿ ಪಾತ್ರರ ಅನಾರೋಗ್ಯ ಚಿಂತೆಗೆ ಕಾರಣವಾಗಲಿದೆ. ವೈಯಕ್ತಿಕವಾಗಿ ನಿಮಗೆ ಬೇಸರವಾಗುವಂತಹ ಘಟನೆಗಳು ನಡೆದೀತು. ಹಾಗಿದ್ದರೂ ಸಂಗಾತಿಯ ಸಹಕಾರ ನೆಮ್ಮದಿಕೊಡಲಿದೆ. ಮಕ್ಕಳಿಂದ ಸಂತೋಷ ಸಿಗುವುದು.

ತುಲಾ: ವ್ಯಾವಹಾರಿಕವಾಗಿ ಅಪರಿಚಿತರಿಂದ ಸಹಾಯ ಸಿಗಲಿದೆ. ಸರಕಾರಿ ಅಧಿಕಾರಿಗಳಿಗೆ ಉದ್ಯೋಗದೊತ್ತಡ ಹೆಚ್ಚಾದೀತು. ಕೌಟುಂಬಿಕವಾಗಿ ಆಪ್ತೇಷ್ಟರೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ತಾಳ್ಮೆಯಿರಲಿ.

ವೃಶ್ಚಿಕ: ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶಿಸಿ ಮುನ್ನಡೆಯುವುದು ಉತ್ತಮ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರುಗಳಾದೀತು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಉದ್ಯೋಗದಲ್ಲಿ ಮುಂಬಡ್ತಿ ಯೋಗವಿದೆ. ಅನಗತ್ಯವಾಗಿ ಕೆಲವು ವಿಚಾರಗಳಲ್ಲಿ ಮೂಗು ತೂರಿಸಲು ಹೋಗಿ ಕೈಸುಟ್ಟುಕೊಳ್ಳಬೇಡಿ. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ ಕಂಡುಬರುವುದು.

ಮಕರ: ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗುವುದು. ಪ್ರೇಮಿಗಳ ಗುಟ್ಟು ಮನೆಯವರೆದುರು ಬಯಲಾಗಲಿದೆ. ವ್ಯಾಪಾರೀ ವರ್ಗದವರಿಗೆ ಮುನ್ನಡೆಯ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಇನ್ನೊಬ್ಬರಿಗೆ ಸಾಂತ್ವನ ಹೇಳುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಸಾಮಾಜಿಕವಾಗಿ ಉನ್ನತ ಸ್ಥಾನಕ್ಕೇರುವ ಯೋಗ ನಿಮ್ಮದಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ದತೆ ನಡೆಸಲಿದ್ದೀರಿ.

ಮೀನ: ಕಾರ್ಯಕ್ಷೇತ್ರದಲ್ಲಿ ಉತ್ಸಾಹದಿಂದ ತೊಡಗಿಸಿಕೊಳ್ಳಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಕ್ಕೀತು. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ