ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 25 ಏಪ್ರಿಲ್ 2021 (09:06 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನೀವು ಅನವಶ್ಯಕವಾಗಿ ಆಡುವ ಮಾತಿಗೆ ನೀವೇ ಹೊಣೆಯಾಗಬೇಕಾಗುತ್ತದೆ. ಕೌಟುಂಬಿಕವಾಗಿ ಸಾಮರಸ್ಯ ಕಾಪಾಡಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಹಣಕಾಸಿನ ಹರಿವಿಗೆ ತೊಂದರೆಯಿರದು.

ವೃಷಭ: ಮನಸ್ಸಿಗೆ ಹಿತವೆನಿಸುವವರ ಜೊತೆ ಮುಕ್ತವಾಗಿ ಬೆರೆಯಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಪಡೆಯಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಅಂದುಕೊಂಡಿದ್ದ ಕೆಲಸಗಳು ನೆರವೇರಲಿವೆ.

ಮಿಥುನ: ಬೇರೆಯವರು ನಿಮ್ಮ ಬಗ್ಗೆ ಏನು ಹೇಳುತ್ತಾರೋ ಎಂಬ ಅತಿಯಾದ ಯೋಚನೆ ಬೇಡ. ಮಾನಸಿಕವಾಗಿ ಆತ್ಮವಿಶ್ವಾಸ ಬೆಳೆಸಿಕೊಳ್ಳಿ. ಬಿಡುವಿನ ವೇಳೆಯ ಸದುಪಯೋಗ ಪಡೆದುಕೊಳ್ಳಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಕರ್ಕಟಕ: ಧನಾತ್ಮಕವಾಗಿ ಯೋಚನೆ ಮಾಡುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಕಷ್ಟದಲ್ಲಿರುವ ಮಿತ್ರರಿಗೆ ಸಹಾಯ ಮಾಡಲಿದ್ದೀರಿ. ಸ್ವಯಂ ಉದ್ಯೋಗಿಗಳು ಆರ್ಥಿಕವಾಗಿ ನಷ್ಟ ಅನುಭವಿಸಬೇಕಾದೀತು. ತಾಳ್ಮೆಯಿರಲಿ.

ಸಿಂಹ: ವ್ಯಾಪಾರ, ವ್ಯವಹಾರದಲ್ಲಿ ಲಾಭಾಂಶ ಕಡಿಮೆಯಾಗಲಿದೆ. ಆದರೆ ನಿರಾಸೆ ಬೇಡ. ಕ್ರಿಯಾತ್ಮಕವಾಗಿ ಯೋಚನೆ ಮಾಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. ರಾಜಕೀಯ ವರ್ಗದವರಿಗೆ ಕೆಲಸದೊತ್ತಡ ಹೆಚ್ಚಲಿದೆ.

ಕನ್ಯಾ: ಅನಿವಾರ್ಯ ಕಾರಣಗಳಿಗಾಗಿ ದೂರ ಪ್ರಯಾಣ ಮಾಡಬೇಕಾಗಿ ಬಂದೀತು. ಮಕ್ಕಳ ವಿಚಾರದಲ್ಲಿ ಅತೀವ ಕಾಳಜಿ ಅಗತ್ಯ. ಸಂಗಾತಿಯ ದೇಹಾರೋಗ್ಯದ ಕಡೆಗೆ ಗಮನಕೊಡಿ. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ.

ತುಲಾ: ನಿಮ್ಮನ್ನು ಅರ್ಥೈಸಿಕೊಳ್ಳುವ ಸಂಗಾತಿಯು ನಿಮ್ಮ ಕಷ್ಟಗಳಿಗೆ ಹೆಗಲುಕೊಡಲಿದ್ದಾರೆ. ಗೃಹೋಪಯೋಗಿ ವಸ್ತುಗಳ ಖರೀದಿ, ಗೃಹ ಸಂಬಂಧೀ ಕೆಲಸಗಳಿಗಾಗಿ ಖರ್ಚು ವೆಚ್ಚಗಳು ಕಂಡುಬರಲಿವೆ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ವೃಶ್ಚಿಕ: ಶುಭ ಮಂಗಲ ಕಾರ್ಯದ ನಿಮಿತ್ತ ಪ್ರಯಾಣ ಮಾಡಲಿದ್ದೀರಿ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಆದರೆ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ.

ಧನು: ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಆರ್ಥಿಕವಾಗಿ ಎಷ್ಟೇ ಹಣಕಾಸಿನ ಹರಿವಿದ್ದರೂ ಖರ್ಚು ವೆಚ್ಚಗಳು ದುಪ್ಪಟ್ಟಾಗಲಿವೆ. ಮನೆ ಬಳಕೆ ವಸ್ತುಗಳ ಖರೀದಿ ಮಾಡಲಿದ್ದೀರಿ. ನಯವಂಚಕರ ಬಗ್ಗೆ ಎಚ್ಚರಿಕೆಯಿಂದಿರುವುದು ಮುಖ್ಯ. ಕಾರ್ಯನಿಮಿತ್ತ ಕಿರು ಓಡಾಟ ನಡೆಸುವಿರಿ.

ಕುಂಭ: ಅವಿವಾಹಿತರಿಗೆ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಕ್ಕೀತು. ಇಷ್ಟ ಮಿತ್ರರ ಭೇಟಿ, ಭೋಜನ ಮನಸ್ಸಿಗೆ ಮುದ ಕೊಡಲಿದೆ. ಗೃಹ ನಿರ್ಮಾಣ ಕಾರ್ಯಗಳನ್ನು ಮುಂದೂಡಬೇಕಾದೀತು.

ಮೀನ: ಹಿರಿಯರ ಬುದ್ಧಿ ಮಾತುಗಳು ಉಪದೇಶ ಎನಿಸಬಹುದು.ಪೋಷಕರೊಂದಿಗೆ ವಾದ ವಿವಾದ ಮಾಡಲು ಹೋಗಬೇಡಿ. ಮಾತಿನ ಮೇಲೆ ಸಂಯಮವಿರಲಿ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ತಕ್ಕ ಫಲ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ