ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 20 ಜೂನ್ 2021 (09:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮದಲ್ಲದ ವಿಚಾರದಲ್ಲಿ ಅನಗತ್ಯ ತಲೆಕಡಿಸಿಕೊಳ್ಳಬೇಕಾಗಿಲ್ಲ. ಅನಗತ್ಯವಾಗಿ ದೇಹಾರೋಗ್ಯದ ಬಗ್ಗೆ ಚಿಂತೆ ಬೇಡ. ಸಾಂಸಾರಿಕವಾಗಿ ತಾಳ್ಮೆ, ಹೊಂದಾಣಿಕೆ ಅಗತ್ಯ. ಗೃಹೋಪಯೋಗಿ ವಸ್ತುಗಳಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ.

ವೃಷಭ: ಸಾಂಸಾರಿಕವಾಗಿ ನೀವು ಕೈಗೊಳ್ಳುವ ಕೆಲವು ನಿರ್ಧಾರಗಳಿಂದ ಸಂಗಾತಿಯ ಕೋಪಕ್ಕೆ ಗುರಿಯಾಗಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ತಾಳ್ಮೆಯಿರಲಿ.

ಮಿಥುನ: ಇಂದು ನೀವು ಕೈಗೊಳ್ಳುವ ನಿರ್ಧಾರಗಳು ನಿಮ್ಮ ಭವಿಷ್ಯಕ್ಕೆ ಪೂರಕವಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ಸ್ವಯಂ ವ್ಯಾಪಾರಿಗಳಿಗೆ ಹಿನ್ನಡೆಯಾದೀತು. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಮನೆಯಲ್ಲಿ ಸಣ್ಣ ಪುಟ್ಟ ರಿಪೇರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಗೃಹಿಣಿಯರಿಗೆ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ನಿರುದ್ಯೋಗಿಗಳಿಗೆ ಹೊಸ ಬಗೆಯ ಐಡಿಯಾಗಳು ಬರಲಿವೆ. ಕಾರ್ಯರೂಪಕ್ಕೆ ತನ್ನಿ.

ಸಿಂಹ: ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಸೂಕ್ತ. ಸಾಲಗಾರರ ಕಾಟದಿಂದ ಮುಕ್ತಿ ಸಿಕ್ಕೀತು. ಪತ್ನಿ ನೀಡುವ ಕೆಲವೊಂದು ಸಲಹೆಗಳು ಉಪಯೋಗಕ್ಕೆ ಬರಲಿವೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ಮಾಡಲಿದ್ದೀರಿ.

ಕನ್ಯಾ: ಕಾರ್ಯರಂಗದಲ್ಲಿ ನಿಮ್ಮ ಏಳಿಗೆಯನ್ನು ಯಾರಿಂದಲೂ ತಡೆಯಲಾಗದು. ಕ್ರಿಯಾತ್ಮಕ ಯೋಚನೆಗಳಿಂದ ಬೇರೆಯವರ ಮನಸ್ಸು ಗೆಲ್ಲಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮಕ್ಕಳಿಂದ ಸಂತೋಷ ಸಿಗುವುದು.

ತುಲಾ: ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದ್ದು, ಸಂತೋಷ ನೆಲೆಸಲಿದೆ. ವಿಚಾರವಾದಿಗಳ ಸಹವಾಸದಿಂದ ಹೊಸ ಚಿಂತನೆಗಳು ಹುಟ್ಟಿಕೊಂಡೀತು. ಕೃಷಿಕರಿಗೆ ವ್ಯವಹಾರಕ್ಕೆ ಅನುಕೂಲಕರ ವಾತಾವರಣ ಒದಗಿಬರಲಿದೆ.

ವೃಶ್ಚಿಕ: ನೀವು ಅಂದುಕೊಂಡಿದ್ದು ಒಂದು ಆಗಿದ್ದು ಇನ್ನೊಂದು ಎಂಬ ಪರಿಸ್ಥಿತಿ ನಿಮ್ಮದಾಗುವುದು. ವಿಶೇಷ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆ, ಸಂಯಮ ಅಗತ್ಯ.

ಧನು: ಕೋಪ ತಾಪದ ಕೈಗೆ ಬುದ್ಧಿ ಕೊಟ್ಟರೆ ಪ್ರೀತಿ ಪಾತ್ರರ ಮನಸ್ಸಿಗೆ ನೋವಾದೀತು. ನಿರುದ್ಯೋಗಿಗಳು ಉದ್ಯೋಗ ಸಂದರ್ಶನಕ್ಕಾಗಿ ಪರವೂರಿಗೆ ಪ್ರಯಾಣ ಬೆಳೆಸಲಿದ್ದೀರಿ. ವ್ಯಾಪಾರಿಗಳು ಹೊಸ ದಾರಿಗಳು ಗೋಚರವಾಗಲಿದೆ.

ಮಕರ: ನಿಮ್ಮ ನಿರ್ಧಾರಗಳು ಇತರರಿಗೆ ಇಷ್ಟವಾಗದೇ ಹೋದೀತು. ಆದರೆ ಅಂತಿಮವಾಗಿ ಜಯ ನಿಮ್ಮದಾಗುವುದು. ಸರಕಾರಿ ಲೆಕ್ಕಪತ್ರಗಳನ್ನು ಜೋಪಾನವಾಗಿಟ್ಟುಕೊಳ್ಳಿ. ಮನಸ್ಸಿನ ಭಾವನೆಗಳನ್ನು ಆತ್ಮೀಯರೊಂದಿಗೆ ಹಂಚಿಕೊಳ್ಳುವಿರಿ.

ಕುಂಭ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಮಹಿಳೆಯರಿಂದ ಅಪವಾದದ ಬೀತಿ ಎದುರಾದೀತು. ಎಚ್ಚರಿಕೆಯಿಂದಿರಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಕಿರು ಸಂಚಾರ ಮಾಡಲಿದ್ದೀರಿ.

ಮೀನ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಮಹಿಳೆಯರಿಗೆ ಕೌಟುಂಬಿಕ ಜವಾಬ್ಧಾರಿಗಳು ಹೆಗಲಿಗೇರಲಿವೆ. ವಾಹನ ಸವಾರರು ಎಚ್ಚರಿಕೆಯಿಂದಿರಬೇಕು. ಕುಲದೇವರ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ