ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 1 ಜುಲೈ 2021 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 

ಮೇಷ: ನಿಮ್ಮ ವರ್ತನೆ ನೋಡಿದರೆ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ ಎನಿಸಬಹುದು. ಅನಗತ್ಯ ಚಿಂತೆಗಳಲ್ಲಿ ಕಳೆದುಹೋಗಬೇಡಿ. ಉದಾಸೀನ ಪ್ರವೃತ್ತಿ ಬಿಟ್ಟು ಕೆಲಸಗಳಲ್ಲಿ ತೊಡಗಿಸಿಕೊಂಡರೆ ಯಶಸ್ಸು ಸಿಗಲಿದೆ.

ವೃಷಭ: ವೃತ್ತಿರಂಗದಲ್ಲಿ ನಿಮ್ಮ ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಯೋಜನೆ ಹಾಕಿಕೊಳ್ಳಲಿದ್ದೀರಿ. ಅನಿವಾರ್ಯ ಕಾರಣಗಳಿಂದ ದೂರ ಪ್ರಯಾಣ ಮುಂದೂಡಬೇಕಾದೀತು. ದೇಹಾರೋಗ್ಯ ಬಗ್ಗೆ ಕಾಳಜಿ ವಹಿಸಿ.

ಮಿಥುನ: ಅತಿಯಾಗಿ ನಿಮ್ಮನ್ನು ಹೊಗಳುವವರಿಂದ ದೂರವಿದ್ದರೇ ಉತ್ತಮ. ವ್ಯವಹಾರದಲ್ಲಿ ಹಿತ ಶತ್ರುಗಳ ಕಾಟ ಕಂಡುಬಂದೀತು. ತಾಳ್ಮೆ, ಸಂಯಮದಿಂದ ನಿಭಾಯಿಸಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗುವುದು.

ಕರ್ಕಟಕ: ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾಗಲಿದ್ದು, ಚಿಂತೆಗೆ ಕಾರಣವಾಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಸಿಂಹ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ನಿಮ್ಮದಾಗುವುದು. ನಿಮ್ಮ ಇಚ್ಛೆಗೆ ವಿರುದ್ಧವಾಗಿ ಕೆಲವೊಂದು ಘಟನೆಗಳು ನಡೆದೀತು. ತಾಳ್ಮೆ, ಸಂಯಮ ಅಗತ್ಯ.

ಕನ್ಯಾ: ಪ್ರೀತಿ ಪಾತ್ರರನ್ನು ಬಹಳ ದಿನಗಳ ನಂತರ ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಅನಗತ್ಯ ಯೋಚನೆಗಳನ್ನು ತೆಗೆದುಹಾಕಿ ಕಾರ್ಯಪ್ರವೃತ್ತರಾಗಿ. ಸಂಗಾತಿಯ ಕೆಲವೊಂದು ಸಲಹೆಗಳು ಉಪಯೋಗಕ್ಕೆ ಬರಲಿದೆ.

ತುಲಾ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಲು ಶನೀಶ್ವರನ ಪ್ರಾರ್ಥನೆ ಮಾಡಬೇಕಾಗುತ್ತದೆ. ಮನೆಯಲ್ಲಿ ಸಣ್ಣ ಪುಟ್ಟ ರಿಪೇರಿ ಕೆಲಸಗಳಿಗೆ ಮುಂದಾಗಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ವೃಶ್ಚಿಕ: ನೂತನ ದಂಪತಿಗಳು ಸುಂದರ ಕ್ಷಣ ಕಳೆಯಲಿದ್ದೀರಿ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ದೈವಾನುಕೂಲದಿಂದ ಕೈ ಹಿಡಿದ ಕೆಲಸಗಳು ಯಶಸ್ವಿಯಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಧನು: ನಿಮಗೆ ಇಷ್ಟವಿಲ್ಲದಿದ್ದರೂ ಕೆಲವೊಂದು ಕೆಲಸಗಳನ್ನು ಕುಟುಂಬದ ಒಳಿತಿಗಾಗಿ ಮಾಡಬೇಕಾಗುತ್ತದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಅಲಕ್ಷ್ಯ ಬೇಡ. ಸಂಗಾತಿಯ ಮನಸ್ಸಿಗೆ ಬೇಸರವುಂಟು ಮಾಡದಿರಿ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಬಹಳ ದಿನಗಳಿಂದ ಭೇಟಿಯಾಗಬೇಕೆಂದುಕೊಂಡಿದ್ದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ನಿಮ್ಮ ವಿಚಾರಧಾರೆಗಳಿಗೆ ವೃತ್ತಿರಂಗದಲ್ಲಿ ಮನ್ನಣೆ ಸಿಗಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಸಣ್ಣ ಪುಟ್ಟ ವಿಚಾರಗಳಿಂದ ಸಂತೋಷ ಪಡೆದುಕೊಳ್ಳುವುದನ್ನು ಕಲಿಯಬೇಕು. ಹಣಕಾಸಿನ ಹರಿವು ಕಡಿಮೆಯಾಗಿದ್ದರೂ ಸಕಾಲದಲ್ಲಿ ಆಪ್ತರಿಂದ ನೆರವು ಸಿಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಮೀನ: ಪ್ರೇಮಿಗಳ ಸಂಬಂಧಕ್ಕೆ ಮನೆಯವರ ಸಹಮತ ಸಿಗಲಿದೆ. ಶೀಘ್ರದಲ್ಲೇ ಶುಭ ಮಂಗಲ ಕಾರ್ಯ ನೆರವೇರಲಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿಸುವ ಯೋಗ ಕೂಡಿಬರಲಿದೆ. ಬಂಧು ಮಿತ್ರರ ಭೇಟಿಯಾಗಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ