ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 2 ಆಗಸ್ಟ್ 2021 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನೀವು ಉದ್ದೇಶಿಸಿದ ಕೆಲಸ ಪೂರ್ತಿಯಾಗಬೇಕಾದರೆ ಕೆಲವೊಂದು ಅಡೆತಡೆ ದಾಟಬೇಕಾಗುತ್ತದೆ. ಬೇರೆಯವರ ಕಷ್ಟಕ್ಕೆ ಸಾಥ್ ಕೊಡಲಿದ್ದೀರಿ. ನಿಮ್ಮ ಮನಸ್ಸಿನ ಮಾತುಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳುವಿರಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ನಿರುದ್ಯೋಗಿಗಳು ಉದ್ಯೋಗ ಸಂಬಂಧವಾಗಿ ಸಮಸ್ಯೆಗಳಿಗೆ ಶನಿದೇವರ ಪೂಜೆ ಮಾಡುವುದು ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಬೇರೆಯವರ ಕಷ್ಟದಲ್ಲಿ ಸಮಭಾಗಿಯಾಗಲು ಹೋಗಿ ನೀವೇ ತೊಂದರೆಗೆ ಸಿಲುಕಿಕೊಳ್ಳದಿರಿ. ಆರ್ಥಿಕವಾಗಿ ಹಣಕಾಸಿನ ಅಡಚಣೆಗಳು ಕಂಡುಬಂದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ.

ಕರ್ಕಟಕ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ನೂತನ ದಂಪತಿಗಳು ಮೂರನೆಯವರ ಪ್ರವೇಶಕ್ಕೆ ಸಿದ್ಧರಾಗಲಿ. ಹಿರಿಯರ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾದೀತು.

ಸಿಂಹ: ಮನಸ್ಸಿನಲ್ಲಿ ಅಂದುಕೊಂಡಿದ್ದೇ ನಡೆದಾಗ ಅಚ್ಚರಿಯಾಗುವುದು. ಇಷ್ಟದೇವರ ಪ್ರಾರ್ಥನೆ ಮಾಡಿದರೆ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಪ್ರೀತಿ ಪಾತ್ರರಿಂದ ಅಚ್ಚರಿಯ ಉಡುಗೊರೆ ಪಡೆಯಲಿದ್ದೀರಿ.

ಕನ್ಯಾ: ಭವಿಷ್ಯದ ಬಗ್ಗೆ ಇಂದೇ ಯೋಜನೆ ರೂಪಿಸಬೇಕಾಗುತ್ತದೆ. ಸಂಗಾತಿಯ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ತುಲಾ: ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಭವಿಷ್ಯದಲ್ಲಿ ಒಳ್ಳೆಯ ದಿನಗಳಿಗಾಗಿ ಇಂದೇ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಕ್ರಿಯಾತ್ಮಕ ಕೆಲಸಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಪಡೆಯಲಿದ್ದೀರಿ.

ವೃಶ್ಚಿಕ: ನಿಮ್ಮ ಬೇಕು-ಬೇಡಗಳ ಬಗ್ಗೆ ಯೋಚನೆ ಮಾಡುವವರ ಮನಸ್ಸಿಗೆ ನೋವುಂಟು ಮಾಡಬೇಡಿ.  ಮಾತಿನ ಮೇಲೆ ನಿಗಾ ಇರಲಿ. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ ಮಾಡಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆಯಿರಲಿದೆ.

ಧನು: ಅಧಿಕ ಧನ ಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಅನಗತ್ಯವಾಗಿ ವಿವಾದ ಮೈಮೇಲೆಳೆದುಕೊಳ್ಳಬೇಡಿ. ಮಕ್ಕಳೊಂದಿಗೆ ಮನದಾಳ ಹಂಚಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಕರ: ನಿಮ್ಮದಲ್ಲದ ವಸ್ತುವಿನ ಬಗ್ಗೆ ಅತಿಯಾದ ವ್ಯಾಮೋಹ ಒಳ್ಳೆಯದಲ್ಲ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಪಾಲು ಬಂಡವಾಳ ಹೂಡಿಕೆ ವ್ಯವಹಾರ ಲಾಭ ತಂದುಕೊಡಲಿದೆ. ತಾಳ್ಮೆಯಿರಲಿ.

ಕುಂಭ: ಬಯಸಿದ ವ್ಯಕ್ತಿ, ವಸ್ತು ಕೈಗೆಟುಕುವ ದಿನವಿದು. ಸಾಂಸಾರಿಕವಾಗಿ ಸಂತೋಷವಿರಲಿದೆ. ಆದರೆ ಆರ್ಥಿಕವಾಗಿ ಹಣಕಾಸಿನ ಅಡಚಣೆ ಕಂಡುಬಂದೀತು. ಸ್ವಯಂ ವ್ಯಾಪಾರಿಗಳು ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆ ವಹಿಸಬೆಕಾಗುತ್ತದೆ.

ಮೀನ: ವಾಹನ ಖರೀದಿ ಮಾಡುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ನಿಮ್ಮ ಬಗ್ಗೆ ನೀವೇ ಋಣಾತ್ಮಕ ಚಿಂತೆ ಬೆಳೆಸಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ