ಮೇಷ: ನೀವು ಅಂದುಕೊಂಡಂತೇ ಎಲ್ಲವೂ ನಡೆಯದೇ ಹೋದರೂ, ಮಾನಸಿಕವಾಗಿ ನಿರಾಶೆಗೊಳ್ಳಬೇಕಾಗಿಲ್ಲ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.
ವೃಷಭ: ಉದ್ಯೋಗ, ವ್ಯವಹಾರದಲ್ಲಿ ವಂಚನೆಯ ಭೀತಿಯಿದ್ದು, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಕಷ್ಟದಲ್ಲಿರುವವರ ಸಹಾಯಕ್ಕೆ ಹೋಗಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಮಿಥುನ: ಹೊಸ ಕೆಲಸಗಳು ಯೋಜನಾ ಹಂತದಲ್ಲೇ ಮುರಿದುಬೀಳಲಿದ್ದು, ಮನಸ್ಸಿಗೆ ಬೇಸರವಾದೀತು. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಇರಬೇಕು.
ಕರ್ಕಟಕ: ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ವಿವಾಹಾದಿ ಪ್ರಯತ್ನಗಳಿಗೆ ಫಲ ಸಿಗಲಿದೆ. ನೂತನ ದಂಪತಿಗಳಿಗೆ ಹೊಂದಾಣಿಕೆ ಅಗತ್ಯ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.
ಸಿಂಹ: ವೃತ್ತಿರಂಗದಲ್ಲಿ ನಿಮ್ಮ ಸ್ಥಾನ ಮಾನ ವೃದ್ಧಿಗೊಳ್ಳಲಿದೆ. ಹಣಕಾಸಿನ ಹರಿವಿಗೆ ತೊಂದರೆಯಿರದು. ವ್ಯಾಪಾರ, ವ್ಯವಹಾರಗಳಲ್ಲಿ ಮುನ್ನಡೆಯ ಯೋಗವಿದೆ. ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು.
ಕನ್ಯಾ: ನಿಮ್ಮ ತಪ್ಪುಗಳಿಗೆ ಇತರರನ್ನು ಹೊಣೆ ಮಾಡಿ ಪ್ರಯೋಜನವಿಲ್ಲ. ಕ್ರಿಯಾತ್ಮಕ ಯೋಚನೆಗಳು ಫಲಗೂಡಲಿವೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಚುರುಕುತನ ಎಲ್ಲರ ಗಮನ ಸೆಳೆಯಲಿದೆ. ಕುಲದೇವರ ಪ್ರಾರ್ಥನೆ ಮಾಡಿ.
ತುಲಾ: ದಾಂಪತ್ಯದಲ್ಲಿ ಸಣ್ಣ ಪುಟ್ಟ ಏರು ಪೇರು ಸಾಮಾನ್ಯ. ತಾಳ್ಮೆ, ಸಂಯಮ ಅಗತ್ಯ. ನಿಮ್ಮ ಮಾತಿನಿಂದ ಇತರರ ಮನಸ್ಸಿಗೆ ನೋವಾಗದಂತೆ ಎಚ್ಚರಿಕೆ ವಹಿಸಿ. ಬಂಧು ಮಿತ್ರರ ಸಹಕಾರ ಕಂಡುಬರಲಿದ್ದು, ಅಭಿವೃದ್ಧಿಯಿರಲಿದೆ.
ವೃಶ್ಚಿಕ: ಹಿರಿಯರ ಆಶೀರ್ವಾದದೊಂದಿಗೆ ಹೊಸ ಕೆಲಸಗಳಿಗೆ ಕೈಹಾಕಲಿದ್ಧೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರುವುದು. ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.
ಧನು: ಅತಿಯಾದ ಆತ್ಮವಿಶ್ವಾಸವೂ ಕೆಲವೊಮ್ಮೆ ಸಂಕಷ್ಟಕ್ಕೆ ಕಾರಣವಾದೀತು. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಮನೆಗೆ ನೆಂಟರಿಷ್ಟರ ಆಗಮನವಾಗಲಿದೆ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ.
ಮಕರ: ಗೃಹಿಣಿಯರಿಗೆ ಕೊಂಚ ಬಿಡುವಿನ ದಿನವಾಗಿದ್ದು, ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಆದಾಯ ವೃದ್ಧಿಗೆ ನಾನಾ ದಾರಿ ಕಂಡುಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು.
ಕುಂಭ: ಸುದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ದಾಯಾದಿ ವ್ಯಾಜ್ಯಗಳು ಬಗೆಹರಿಯುವುದು. ದೇವತಾ ಪ್ರಾರ್ಥನೆ ಮಾಡಿ.
ಮೀನ: ವೃತ್ತಿರಂಗದಲ್ಲಿ ವೈಚಾರಿಕ ಭಿನ್ನಾಭಿಪ್ರಾಯಗಳು ಕಂಡುಬರಲಿದೆ. ಸಹೋದ್ಯೋಗಿಗಳೊಂದಿಗೆ ಸಂಯಮದಿಂದ ವರ್ತಿಸಿ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗ ಕೂಡಿಬರಲಿದೆ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ.