ಮೇಷ: ಸರಕಾರಿ ಕೆಲಸಗಳಲ್ಲಿ ಪ್ರಗತಿ ನಿರೀಕ್ಷಿಸಬಹುದು. ಆರ್ಥಿಕವಾಗಿ ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಳೆದು ಹೋದ ಘಟನೆಗಳ ಬಗ್ಗೆ ಚಿಂತಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಪ್ರಶಂಸೆ ಸಿಗಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷಕ್ಕೆ ದಾರಿ ಮಾಡಬೇಡಿ.
ಮಿಥುನ: ನೆರೆಹೊರೆಯವರು ನಿಮ್ಮ ಗುಟ್ಟುಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸಲಿದ್ದಾರೆ. ಹೆಚ್ಚಿನ ಧನ ಲಾಭಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗಲಿದೆ.
ಕರ್ಕಟಕ: ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದ್ದು, ಹಿಂದಿನ ಕಷ್ಟಗಳೆಲ್ಲವೂ ತೀರಿಹೋಗಲಿವೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ವ್ಯಾಪಾರೀ ವರ್ಗದವರಿಗೆ ಸಾಲದಿಂದ ಮುಕ್ತಿ ಸಿಗುವುದು.
ಸಿಂಹ: ಹೊಸ ಜಮೀನು, ವಾಹನ ಖರೀದಿ ಇತ್ಯಾದಿ ವ್ಯವಹಾರಗಳಿಗೆ ಇದು ಸಕಾಲ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗಲಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಕಿರು ಸಂಚಾರ ಮಾಡುವಿರಿ.
ಕನ್ಯಾ: ಕಾರ್ಯನಿಮಿತ್ತ ಕತ್ತೆ ಕಾಲು ಹಿಡಿ ಎಂಬ ಪರಿಸ್ಥಿತಿ ನಿಮ್ಮದಾಗಲಿದೆ. ಸಾಂಸಾರಿಕವಾಗಿ ಸಮೃದ್ಧಿ ಕಂಡುಬರಲಿದ್ದು, ಪತ್ನಿ, ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ನಾಲಿಗೆ ಚಪಲದ ಮೇಲೆ ಕಡಿವಾಣ ಒಳ್ಳೆಯದು.
ತುಲಾ: ವೃತ್ತಿರಂಗದಲ್ಲಿ ಅಭಿವೃದ್ಧಿದಾಯಕ ವಾತಾವರಣವಿರಲಿದೆ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಂದ ಜನರ ಪ್ರಶಂಸೆಗೊಳಗಾಗಲಿದ್ದೀರಿ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಚಿಂತೆ ಬೇಡ.
ವೃಶ್ಚಿಕ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಬಂದೀತು. ಕಷ್ಟದ ಸಮಯದಲ್ಲಿ ಬಂಧು ಮಿತ್ರರ ಸಹಕಾರ ದೊರೆಯಲಿದೆ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು.
ಧನು: ಉದ್ದೇಶವಿಟ್ಟುಕೊಂಡು ನಿಮ್ಮ ಸನಿಹವಿರುವವರ ಹುನ್ನಾರಗಳು ಬಯಲಿಗೆ ಬರಲಿವೆ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ. ಅಪರಿಚಿತರೊಂದಿಗೆ ವ್ಯವಹಾರ ಬೇಡ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.
ಮಕರ: ವಿದ್ಯಾರ್ಥಿಗಳು ಕೆಟ್ಟ ಸ್ನೇಹ ಸಂಗದಿಂದ ತೊಂದರೆಗೆ ಸಿಲುಕಿಕೊಳ್ಳುವ ಸಾಧ್ಯತೆಯಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ವ್ಯಾಪಾರೀ ವರ್ಗದವರಿಗೆ ಮುನ್ನಡೆಯ ಯೋಗವಿದೆ.
ಕುಂಭ: ದೈವಿಕ ಕಾರ್ಯಗಳಿಗಾಗಿ ಸಿದ್ಧತೆ ನಡೆಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣವಿರಲಿ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ತಾಳ್ಮೆಯಿರಲಿ.
ಮೀನ: ನಿಮ್ಮ ವೈಯಕ್ತಿಕ ಜೀವನದಲ್ಲಿ ಮೂರನೆಯವರ ಪ್ರವೇಶಕ್ಕೆ ಅವಕಾಶ ಮಾಡಿಕೊಡದಿರಿ. ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗವಿದೆ. ಇಷ್ಟಭೋಜನ ಮಾಡಲಿದ್ದೀರಿ.