ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 17 ಸೆಪ್ಟಂಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಹಿಳೆಯರಿಂದ ನಿಮಗೆ ಒಳಿತಾಗಲಿದೆ. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯಗಳು ಕಂಡುಬಂದರೂ ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ಉದ್ಯೋಗ ವ್ಯವಹಾರದಲ್ಲಿ ಅನಗತ್ಯ ಚರ್ಚೆಗೆ ಅವಕಾಶ ಕೊಡದಿರಿ. ದಿನದಂತ್ಯಕ್ಕೆ ನೆಮ್ಮದಿ.

ವೃಷಭ: ಮಾನಸಿಕವಾಗಿ ಒಂದು ರೀತಿಯ ಗೊಂದಲ, ನಿರುತ್ಸಾಹ ಕಾಡಲಿದೆ. ಆಪ್ತರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಿರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ವಾಕ್ಚತುರತೆಯಿಂದ ಸಮಸ್ಯೆಗಳಿಂದ ಬಗೆಹರಿಸಿ.

ಮಿಥುನ: ಯೋಗ್ಯ ವಯಸ್ಕರಿಗೆ ಹೇಳಿ ಮಾಡಿಸಿದಂತಹ ವೈವಾಹಿಕ ಪ್ರಸ್ತಾಪಗಳು ಬರಲಿವೆ. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ಸಾಧನೆ ಮಾಡಲಿದ್ದೀರಿ. ನೆರೆಹೊರೆಯವರೊಂದಿಗೆ ನೀರಿಗಾಗಿ ವೈಮನಸ್ಯಗಳಾದೀತು. ಎಚ್ಚರ.

ಕರ್ಕಟಕ: ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಆಕಸ್ಮಿಕ ಅಪಘಾತವಾಗುವ ಅಪಾಯವಿದೆ, ಎಚ್ಚರಿಕೆ ಅಗತ್ಯ. ಕೃಷಿಕರಿಗೆ ತಮ್ಮ ಉತ್ಪನ್ನಗಳಿಗೆ ತಕ್ಕ ಬೆಲೆ ಸಿಗಲಿದೆ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರುವುದು.

ಸಿಂಹ: ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆತ್ಮೀಯರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸಲಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ಚಿಂತೆ ಬೇಡ.

ಕನ್ಯಾ: ವೃತ್ತಿರಂಗದಲ್ಲಿ ನಿಮ್ಮ ಹಿತಶತ್ರುಗಳ ಹುನ್ನಾರಗಳು ಬಯಲಿಗೆ ಬರಲಿವೆ. ಕ್ರಿಯಾತ್ಮಕ ಕೆಲಸಗಳಿಂದ ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ಸಾಂಸಾರಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ.

ತುಲಾ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಕೆಳಹಂತದ ನೌಕರರಿಗೆ ಆಶಾದಾಯಕ ವಾತಾವರಣ ಕಂಡುಬರಲಿದೆ. ಮಹಿಳೆಯರಿಗೆ ಉದ್ಯೋಗದಲ್ಲಿ ಮುಂಬಡ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ವೃಶ್ಚಿಕ: ಕಾರ್ಯನಿಮಿತ್ತ ದೂರ ಪ್ರಯಾಣದಿಂದ ದೇಹಾಯಾಸವಾದೀತು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆಯಿರಲಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ. ಸಾಲ ಕೊಡಲು ಹೋಗಬೇಡಿ.

ಧನು: ಬೇರೆಯವರ ಬಗ್ಗೆ ಅಭಿಪ್ರಾಯಕ್ಕೆ ಬರುವ ಮೊದಲು ಪರಾಮರ್ಶಿಸಿ. ಮಹಿಳೆಯರಿಗೆ ಅಡುಗೆ ಮನೆ ವಿಚಾರದಲ್ಲಿ ಸಮಸ್ಯೆಗಳು ಎದುರಾದೀತು. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ತಾಳ್ಮೆ, ಸಂಯಮವಿರಲಿ.

ಮಕರ: ಉದ್ಯೋಗ ವ್ಯವಹಾರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಸಹೋದ್ಯೋಗಿಗಳ ಸಲಹೆ ಪಡೆಯಿರಿ. ಕಳೆದು ಹೋದ ವಸ್ತುಗಳ ಹುಡುಕಾಟ ನಡೆಸಲಿದ್ದೀರಿ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚಲಿದೆ.

ಕುಂಭ: ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಅವಕಾಶಗಳು ಸಿಗಲಿವೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು. ದೇವರ ಪ್ರಾರ್ಥನೆ ಮಾಡಿ.

ಮೀನ: ಹೊಸದಾಗಿ ಆರಂಭಿಸಿದ್ದ ಕೆಲಸಗಳಿಗೆ ವಿಘ‍್ನ ಭಯ ಕಂಡುಬಂದೀತು. ಕುಲದೇವರ ಪ್ರಾರ್ಥನೆ ನಡೆಸಿ ಮುನ್ನಡೆಯಿರಿ. ಸರಕಾರಿ ಉದ್ಯೋಗಿಗಳಿಗೆ ಸ್ಥಾನ ಪಲ್ಲಟ ಭೀತಿ ಎದುರಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ