ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 12 ಅಕ್ಟೋಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬಂದರೂ ಮಾನಸಿಕವಾಗಿ ಕೆಲವೊಂದು ವಿಚಾರಗಳನ್ನು ನಿಮ್ಮನ್ನು ಬಾಧಿಸಲಿವೆ. ದೈನಂದಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳಲೇಬೇಕಾಗುತ್ತದೆ. ತಾಳ್ಮೆ, ಸಂಯಮವಿರಲಿ.

ವೃಷಭ: ಎಷ್ಟೇ ಕಷ್ಟದ ವ್ಯವಹಾರವಾದರೂ ನಿಮ್ಮ ಮಾತಿನಿಂದಲೇ ಎಲ್ಲರನ್ನೂ ಗೆಲ್ಲಲಿದ್ದೀರಿ. ವಿದ್ಯಾರ್ಥಿಗಳಿಗೆ ಹೊಸದನ್ನು ಕಲಿಯುವ ಆಸಕ್ತಿ ಹೆಚ್ಚಲಿದೆ. ಸಂಪತ್ತು ವೃದ್ಧಿಯಾಗಲಿದ್ದು, ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ.

ಮಿಥುನ: ಹೆಚ್ಚಿನ ಧನಸಂಗ್ರಹಣೆಗಾಗಿ ಕ್ರಿಯಾತ್ಮಕವಾಗಿ ಕೆಲಸ ಮಾಡಬೇಕಾಗುತ್ತದೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ  ಅನಿರೀಕ್ಷಿತವಾಗಿ ಉನ್ನತ ಸ್ಥಾನಕ್ಕೇರುವ ಅವಕಾಶ ಸಿಗಲಿದೆ. ಬಂಧು ಮಿತ್ರರ ಭೇಟಿಯಾಗಲಿದ್ದೀರಿ.

ಕರ್ಕಟಕ: ನಿಮ್ಮ ಶಾರೀರಿಕ ಸೌಖ್ಯಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಿಗೆ ಸಹೋದ್ಯೋಗಿಗಳ ನೆರವು ಸಿಗಲಿದೆ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ.

ಸಿಂಹ: ಮನಸ್ಸಿಗೆ ಸರಿ ಎನಿಸಿದ ನಿರ್ಧಾರ ತೆಗೆದುಕೊಳ‍್ಳಲಿದ್ದೀರಿ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯ ಸಾಧನೆಗೆ ಅನುಕೂಲವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲಿಯೇ ಕಂಕಣ ಬಲ ಕೂಡಿಬರಲಿದೆ. ಚಿಂತೆ ಬೇಡ.

ಕನ್ಯಾ: ಹೊಸ ಜಾಗ, ಪರಿಸರಕ್ಕೆ ಹೊಂದಿಕೊಳ್ಳಲು ಕಷ್ಟವಾದೀತು. ಸಂಗಾತಿಯ ಸಹಕಾರ ಸಿಗಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕೌಟುಂಬಿಕವಾಗಿ ನಿಮ್ಮ ನಿರ್ಧಾರಗಳು ಸದಸ್ಯರ ಸಂತೋಷ ಹೆಚ್ಚಿಸಲಿದೆ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ತುಲಾ: ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಸುಧಾರಣೆಗೆ ಅವಕಾಶ ಸಿಗಲಿದೆ. ಸರಿಯಾದ ನಿರ್ಧಾರ ಕೈಗೊಳ್ಳಬೇಕು. ನಿರುದ್ಯೋಗಿಗಳು ಸ್ವಯಂ ಉದ್ಯೋಗ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಮನೆಗೆ ಅನಿರೀಕ್ಷಿತ ವ್ಯಕ್ತಿಗಳು ಭೇಟಿ ನೀಡಲಿದ್ದು, ಒಂದು ರೀತಿಯ ಸಂಭ್ರಮವಿರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಧನು: ಪುಣ್ಯ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಹಿರಿಯರಿಗೆ ತೀರ್ಥ ಯಾತ್ರೆ ಮಾಡುವ ಯೋಗ ಕೂಡಿಬರಲಿದೆ. ಮಾತಿನ ಮೇಲೆ ಹಿಡಿತವಿರಲಿ. ಕೌಟುಂಬಿಕವಾಗಿ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಬೇಕು. ದೇವತಾ ಪ್ರಾರ್ಥನೆ ಮಾಡಿ.

ಮಕರ: ವೃತ್ತಿರಂಗದಲ್ಲಿ ನಿಮಗೆ ತೊಡಕಾಗಿದ್ದವರ ಉಪಟಳ ನಿವಾರಣೆಯಾಗಲಿದೆ. ಮೇಲ್ವರ್ಗಕ್ಕೇರುವ ಅವಕಾಶಗಳು ತೋರಿಬರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.

ಕುಂಭ: ಆಸ್ತಿ ವಿಚಾರವಾಗಿ ಹಿರಿಯರೊಂದಿಗೆ ಸಂಘರ್ಷಕ್ಕಿಳಿಯುವ ಸಂದರ್ಭಗಳು ಬರಲಿವೆ. ದೂರದ ಸಂಬಂಧಿಗಳನ್ನು ಭೇಟಿಯಾಗಲಿದ್ದೀರಿ. ಕೋರ್ಟು ಕಚೇರಿ ಕೆಲಸಗಳಿಗೆ ಮುಂದಾಗಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ವೈವಾಹಿಕ ಸಂಬಂಧಗಳಲ್ಲಿ ಬಿರುಕು ಬಾರದಂತೆ ದೇವರ ಮೊರೆ ಹೋಗಲಿದ್ದೀರಿ. ಮಕ್ಕಳಿಂದ ಸಂತೋಷ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸದ್ಯದಲ್ಲೇ ವಾಹನ ಖರೀದಿ ಯೋಗ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ