ಮೇಷ: ವೃತ್ತಿರಂಗದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಿದ್ದೀರಿ. ಹೊಸ ಜನರ, ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಆದರೆ ಕೌಟುಂಬಿಕವಾಗಿ ಕೆಲವು ಸಮಸ್ಯೆ ಎದುರಿಸಲು ಸಿದ್ಧರಾಗಿ.
ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಬಯಸಿದರೂ ಸಿಗದೇ ನಿರಾಸೆ ಅನುಭವಿಸಬೇಕಾದೀತು. ಸುಬ್ರಮಣ್ಯ ದೇವರ ಪ್ರಾರ್ಥನೆ ಮಾಡಿದರೆ ಉತ್ತಮ. ವ್ಯಾಪಾರಾದಿ ವ್ಯವಹಾರಗಳಿಗೆ ಅಡೆತಡೆಗಳು ಬಂದರೂ ಅಂತಿಮ ಜಯ ಸಿಗುವುದು.
ಮಿಥುನ: ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸ ಪೂರ್ತಿ ಮಾಡಲು ಮುಂದಾಗಲಿದ್ದೀರಿ. ಗುರುಹಿರಿಯರ ಮಾರ್ಗದರ್ಶನದಿಂದ ಸಮಸ್ಯೆಗಳನ್ನು ಸೂಕ್ತವಾಗಿ ಪರಿಹರಿಸಲಿದ್ದೀರಿ. ತಾಳ್ಮೆ, ಸಂಯಮವಿರಲಿ.
ಕರ್ಕಟಕ: ನಿಮ್ಮ ಹಿತ ಬಯಸುವವರಿಗೆ ನೋವುಂಟು ಮಾಡಬೇಡಿ. ಮಾತಿನ ಮೇಲೆ ನಿಗಾ ಇರಲಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಸಿಂಹ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಸಂಚಾರದಲ್ಲಿ ಎಚ್ಚರವಿರಲಿ.
ಕನ್ಯಾ: ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಮಕ್ಕಳಿಂದ ಸಂತೋಷ ಸಿಗುವುದು. ದೂರ ಸಂಚಾರದಿಂದ ದೇಹಾಯಾಸವಾದೀತು.
ತುಲಾ: ಕಾರ್ಯಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನದ ಯೋಗ ಕೂಡಿಬರಲಿದೆ. ವಾಹನಾದಿ ಸೌಕರ್ಯಗಳು ಶೀಘ್ರದಲ್ಲೇ ನಿಮ್ಮದಾಗುವುದು. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ನೆಮ್ಮದಿಯಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.
ವೃಶ್ಚಿಕ: ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ ಎಂಬ ಪರಿಸ್ಥಿತಿ ಎದುರಾದೀತು. ಕಳೆದು ಹೋದ ವಸ್ತುಗಳಿಗಾಗಿ ಹುಡುಕಾಟ ನಡೆಸಲಿದ್ದೀರಿ. ಯಂತ್ರೋಪಕರಣಗಳ ಕೆಲಸದಲ್ಲಿರುವವರಿಗೆ ಬಿಡುವಿನ ಸಮಯ. ಆರೋಗ್ಯದಲ್ಲಿ ಸುಧಾರಣೆಯಾಗುವುದು.
ಧನು: ಬಂಧು ಮಿತ್ರರ ಸ್ವಾಗತಕ್ಕೆ ಸಿದ್ಧತೆ ನಡೆಸಲಿದ್ದೀರಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಸಮಸ್ಯೆಯಾದೀತು.
ಮಕರ: ವೈವಾಹಿಕ ಬದುಕಿನಲ್ಲಿ ತೃಪ್ತಿ, ನೆಮ್ಮದಿ ದೊರಕಲಿದೆ. ಪ್ರೀತಿ ಪಾತ್ರರಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರುವುದು.
ಕುಂಭ: ಮನೆಯಲ್ಲಿ ಶುಭ ಮಂಗಲಾದಿ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.
ಮೀನ: ಮನಸ್ಸಿನಲ್ಲಿ ಕೊರೆಯುತ್ತಿರುವ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ದಾಂಪತ್ಯದಲ್ಲಿ ಸುಂದರ ಕ್ಷಣ ಕಳೆಯುವ ಯೋಗ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದಾರೆ.