ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 28 ಅಕ್ಟೋಬರ್ 2021 (08:35 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೆಲವೊಂದು ಅನಿರೀಕ್ಷಿತ ಕೆಲಸಗಳು ನಿಮ್ಮ ಪಾಲಿಗೆ ಬರಲಿವೆ. ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಆತಂಕ ಪಡುವ ಅಗತ್ಯವಿಲ್ಲ.

ವೃಷಭ: ಹೊಸದಾಗಿ ನೌಕರಿ ಆರಂಭಿಸಿರುವವರಿಗೆ ಸವಾಲುಗಳು ಸಹಜ. ತಾಳ್ಮೆ, ಸಂಯಮದಿಂದ ನಿಭಾಯಿಸಬೇಕಾಗುತ್ತದೆ. ಕಳೆದು ಹೋದ ವಸ್ತುವಿನ ಬಗ್ಗೆ ಚಿಂತೆ ನಡೆಸಿ ಪ್ರಯೋಜನವಿಲ್ಲ ಎಂಬುದನ್ನು ಅರಿಯುವಿರಿ.

ಮಿಥುನ: ನಿಮಗೆ ಇಂತಹದ್ದೇ ವಸ್ತು ಬೇಕೆನಿಸಿದರೂ ಅದು ಸಿಗದೇ ನಿರಾಸೆಪಡುವ ಸಂದರ್ಭ ಎದುರಾದೀತು. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟ ಕಡಿಮೆಯಾಗಲಿದೆ. ಧನಾರ್ಜನೆಗೆ ನಾನಾ ಮಾರ್ಗ ಕಂಡುಕೊಳ್ಳಲಿದ್ದೀರಿ.

ಕರ್ಕಟಕ: ಕಾರ್ಯಕ್ಷೇತ್ರದಲ್ಲಿ ಅನಗತ್ಯ ಸಂಶಯಗಳನ್ನಿಟ್ಟುಕೊಂಡು ತೊಂದರೆ ಮೈಮೇಲೆಳೆದುಕೊಳ್ಳಬೇಡಿ. ಆಪ್ತ ಮಿತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬಿಟ್ಟು ಇಷ್ಟದ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ. ವ್ಯವಸ್ಥಿತ ಯೋಜನೆಯಿದ್ದರೆ ನೀವು ಕೈಹಿಡಿದ ಕೆಲಸ ಯಶಸ್ವಿಯಾದೀತು. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳು ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದೆ. ಸಂಗಾತಿಯ ದೇಹಾರೋಗ್ಯದ ಸಮಸ್ಯೆ ಪರಿಹಾರ ಸಿಕ್ಕಿ ನೆಮ್ಮದಿಯಾಗುವುದು. ಮಕ್ಕಳಿಂದ ಸಂತೋಷ ಸಿಗಲಿದೆ.

ತುಲಾ: ಪಾಲುದಾರಿಕೆ ವ್ಯವಹಾರಗಳಲ್ಲಿ ಅಡೆತಡೆಗಳು ಕಂಡುಬಂದೀತು. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ.

ವೃಶ್ಚಿಕ: ನಿಮ್ಮ ಇಷ್ಟ ವ್ಯಕ್ತಿಗಳ ಭೇಟಿ ಮನಸ್ಸಿಗೆ ಸಂತೋಷ ಕೊಡಲಿದೆ. ಯಂತ್ರೋಪಕರಣಗಳ ವೃತ್ತಿಯಲ್ಲಿರುವವರಿಗೆ ಮುನ್ನಡೆಯಿರಲಿದೆ. ವ್ಯಾಪಾರೀ ವರ್ಗದವರಿಗೆ ಆರ್ಥಿಕ ಲಾಭವಾದೀತು. ಖರ್ಚುವೆಚ್ಚಗಳ ಬಗ್ಗೆ ನಿಗಾ ಇರಲಿ.

ಧನು: ಬಾಕಿ ಇದ್ದ ಸಾಲ ಮರುಪಾವತಿ ಮಾಡಲಿದ್ದೀರಿ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಕರ: ಸಾಂಸಾರಿಕ ವಿಚಾರದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಮುನ್ನಡೆ ಕಂಡುಬರಲಿದೆ. ತಾಳ್ಮೆಯಿರಲಿ.

ಕುಂಭ: ಒಳ್ಳೆಯ ಅವಕಾಶಕ್ಕಾಗಿ ಕಾಯಲೇಬೇಕಾಗುತ್ತದೆ. ಸನ್ಮಿತ್ರರ ಸಂಗದಿಂದ ನಿಮ್ಮ ಭವಿಷ್ಯಕ್ಕೆ ಲಾಭವಾಗಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಸಂಕೋಚ ಪ್ರವೃತ್ತಿ ಬಿಟ್ಟು ನಿಮಗನಿಸಿದ್ದನ್ನು ನೇರವಾಗಿ ಹೇಳಿದರೆ ಉತ್ತಮ. ದಾಯಾದಿ ಕಲಹಗಳಿಗೆ ಹಿರಿಯರ ಮಧ‍್ಯಸ್ಥಿಕೆ ಪಡೆದುಕೊಳ್ಳಿ. ನೆಂಟರಿಷ್ಟರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ತಾಳ್ಮೆ, ಸಂಯಮ ಅಗತ್ಯ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ