ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 2 ನವೆಂಬರ್ 2021 (07:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬಹುದಿನಗಳಿಂದ ಕಾಡುತ್ತಿದ್ದ ಚಿಂತೆಗೆ ಪರಿಹಾರ ಕಂಡುಕೊಂಡ ನೆಮ್ಮದಿ ನಿಮ್ಮದಾಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಾದೀತು. ಆದರೆ ಸಂಗಾತಿಯ ಸಹಕಾರ ಮನಸ್ಸಿಗೆ ನೆಮ್ಮದಿ ಕೊಡುವುದು. ಅನಗತ್ಯ ಚಿಂತೆ ಬೇಡ.

ವೃಷಭ: ಮಹಿಳೆಯರಿಂದ ನಿಮ್ಮ ಸುಖ-ಸಂತೋಷ ಇಮ್ಮಡಿಯಾಗಲಿದೆ. ವ್ಯಾಪಾರಿಗಳಿಗೆ ಧನಲಾಭವಾದೀತು. ನೆರೆಹೊರೆಯವರ ಚಾಡಿಮಾತುಗಳನ್ನು ಅಲಕ್ಷಿಸುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವೈಯಕ್ತಿಕ ಜೀವನದಲ್ಲಿ ಪ್ರಗತಿ ಉಂಟಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.

ಕರ್ಕಟಕ: ಆತುರದ ನಿರ್ಧಾರಗಳಿಂದ ಅನಾಹುತವೇ ಹೆಚ್ಚು. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಗಾತಿಯ ಸಲಹೆ ಪಡೆಯುವುದು ಉತ್ತಮ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ.

ಸಿಂಹ: ಪ್ರೀತಿ ಪಾತ್ರರ ಪ್ರೋತ್ಸಾಹಕರ ಮಾತುಗಳು ನಿಮ್ಮ ಉತ್ಸಾಹ ಹೆಚ್ಚಿಸಲಿದೆ. ಕೌಟುಂಬಿಕವಾಗಿ ಸಂತೋಷದಾಯಕ ದಿನಗಳಾಗಿವೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಿದ್ದರೂ ಆದಾಯಕ್ಕೆ ತೊಂದರೆಯಾಗದು.

ಕನ್ಯಾ: ಬಹುದಿನಗಳ ನಂತರ ಇಷ್ಟ ವ್ಯಕ್ತಿಗಳ ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಟ್ಟಡ ಕಾಮಗಾರಿ ಕೆಲಸಗಳನ್ನು ಮುಂದೂಡುವುದು ಉತ್ತಮ. ದಿನದಂತ್ಯಕ್ಕೆ ನೆಮ್ಮದಿ.

ತುಲಾ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ಸಂತೋಷ ಸಿಗುವುದು. ದೂರದ ನೆಂಟರಿಷ್ಟರನ್ನು ಭೇಟಿಯಾಗಲಿದ್ದೀರಿ. ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ.

ವೃಶ್ಚಿಕ: ಅನಿವಾರ್ಯ ಕಾರಣಗಳಿಗೆ ದೂರ ಸಂಚಾರ ಮಾಡಬೇಕಾಗಿ ಬಂದೀತು. ಸ್ವಜನರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು.

ಧನು: ಹೊಸದಾಗಿ ಆರಂಭಿಸಿರುವ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಮಕರ: ಕೆಲಸ ಕಾರ್ಯಗಳಲ್ಲಿ ನಿಮ್ಮ ತಲ್ಲೀನತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಕುಂಭ: ಸರಕಾರಿ ನೌಕರರಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗವಿದೆ. ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ‍್ಯತೆಯಿದೆ.

ಮೀನ: ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಆಸ್ತಿ, ವಾಹನಾದಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಚಿಂತೆ ಬೇಡ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ