ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 5 ನವೆಂಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಭವಿಷ್ಯದ ದೃಷ್ಟಿಯಿಂದ ಕೆಲವೊಂದು ದೃಢ ನಿರ್ಧಾರ ತಳೆಯುವ ಅನಿವಾರ್ಯತೆ ಎದುರಾಗಲಿದೆ. ಕಾರ್ಯಕ್ಷೇತ್ರದಲ್ಲಿ ಕೆಲಸದೊತ್ತಡ ಹೆಚ್ಚಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ವೃಷಭ: ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಮಾಡುವ ಯೋಗ ಕಂಡುಬಂದೀತು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ಪಾಲಿಗೆ ಬಂದಿದ್ದೇ ಪಂಚಾಮೃತ ಎಂದು ತಿಳಿದುಕೊಳ್ಳಬೇಕಾದೀತು.

ಮಿಥುನ: ಅತಿಯಾದ ಧಾರಾಳತನವೂ ನಿಮಗೇ ಕುತ್ತಾದೀತು. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ, ಮರಳಿಬಾರದು. ಧನಾರ್ಜನೆಗೆ ನಾನಾ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ತಾಳ್ಮೆಯಿರಲಿ.

ಕರ್ಕಟಕ: ನಿಮ್ಮ ಕೆಲಸಗಳಿಗೆ ಮಹಿಳೆಯರಿಂದ ಸಹಕಾರ ಸಿಗಲಿದ್ದು, ಕಾರ್ಯರಂಗದಲ್ಲಿ ಅಭಿವೃದ್ಧಿ ಕಂಡುಬರುವುದು. ರಾಜಕೀಯ ರಂಗದಲ್ಲಿ ಪ್ರಗತಿ ಕಂಡುಬಂದೀತು. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ.

ಸಿಂಹ: ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಎಲ್ಲವೂ ಶುಭವಾಗಲಿದೆ. ನಿರುದ್ಯೋಗಿಗಳು ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಪಡೆಯಲಿದ್ದಾರೆ. ಕಾರ್ಯನಿಮಿತ್ತ ಓಡಾಟ ನಡೆಸಲಿದ್ದೀರಿ.

ಕನ್ಯಾ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮಕ್ಕಳ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ಇಷ್ಟಭೋಜನ ಮಾಡುವಾಗ ನಾಲಿಗೆ ಮೇಲೆ ಹಿಡಿತವಿರಲಿ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಮುಂದಾಗಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕಾರ್ಯನಿಮಿತ್ತ ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ನಿಮ್ಮ ಮನಸ್ಸಿನ ಮಾತುಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಇಷ್ಟಮಿತ್ರರ ಭೇಟಿ ಮಾಡಲಿದ್ದೀರಿ. ಹಣಕಾಸಿನ ಅಡಚಣೆ ಉಂಟಾದರೂ ಸಕಾಲದಲ್ಲಿ ನೆರವು ಹರಿದುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಧನು: ನಾನಾ ರೀತಿಯ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಕಷ್ಟದ ಸನ್ನಿವೇಶಗಳಲ್ಲಿ ಸಂಗಾತಿಯ ಸಾಥ್ ಸಿಗಲಿದೆ. ಕೃಷಿಕರಿಗೆ ಲಾಭ-ನಷ್ಟ ಸಮನಾಗಿರಲಿದೆ.

ಮಕರ:ದೈಹಿಕ ಶ್ರಮದ ಕೆಲಸದಿಂದ ದೇಹಾಯಾಸವಾದೀತು. ಕೌಟುಂಬಿಕವಾಗಿ ಬಂಧು ಮಿತ್ರರ ಆಗಮನದಿಂದ ಸಂತೋಷದ ವಾತಾವರಣವಿರಲಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ತಾಳ್ಮೆಯಿರಲಿ.

ಕುಂಭ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಸಹೋದರರೊಂದಿಗೆ ಅನಗತ್ಯ ಭಿನ್ನಾಭಿಪ್ರಾಯಗಳು ಬೇಡ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಮೇಲಧಿಕಾರಿಗಳ ಪ್ರೋತ್ಸಾಹದಿಂದ ಹೊಸ ಸಾಹಸಕ್ಕೆ ಕೈ ಹಾಕಲಿದ್ದೀರಿ. ಕೊಡು ಕೊಳ್ಳುವ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗ. ಋಣಾತ್ಮಕ ಚಿಂತನೆಗಳಿಗೆ  ಅವಕಾಶ ಕೊಡಬೇಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ