ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 6 ನವೆಂಬರ್ 2021 (08:32 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕಾರ್ಯರಂಗದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕಾಗುತ್ತದೆ. ಇಲ್ಲದೇ ಹೋದರೆ ಮುಂದೆ ಸಮಸ್ಯೆಗಳು ಎದುರಾದೀತು. ಇಷ್ಟಮಿತ್ರರ ಭೇಟಿಯಾಗಲು ಮನಸ್ಸು ಹಾತೊರೆಯಲಿದೆ. ತಾಳ್ಮೆ, ಸಂಯಮವಿರಲಿ.

ವೃಷಭ: ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ‍್ಳುವುದರಿಂದ ಕಷ್ಟಗಳಿಂದ ಪಾರಾಗಲಿದ್ದೀರಿ. ಆರ್ಥಿಕವಾಗಿ ಧನ ಸಂಪಾದನೆಗೆ ಹೊಸ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಚಿಂತೆ ಬೇಡ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಸ್ಥಾನ ಮಾನ ಪಡೆಯುವ ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಮನಸ್ಸಿನ ಭಾವನೆಗಳನ್ನು ಅದುಮಿಟ್ಟುಕೊಳ್ಳಲು ಪ್ರಯತ್ನಿಸುವಿರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.

ಕರ್ಕಟಕ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಸ್ಪರ್ಧೆಗಳು ಎದುರಾದೀತು. ಆತ್ಮ ವಿಶ್ವಾಸದಿಂದ ಎದುರಿಸಬೇಕು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಕೆಲಸ ಕಾರ್ಯಗಳಲ್ಲಿ ನಿಮ್ಮ ಚಾಕಚಕ್ಯತೆಯಿಂದ ಇತರರ ಗಮನ ಸೆಳೆಯಲಿದ್ದೀರಿ. ಇಂದು ಕುಟುಂಬ ಸದಸ್ಯರೊಂದಿಗೆ ಸಂಭ್ರಮದಿಂದ ಕಾಲ ಕಳೆಯಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಕನ್ಯಾ: ನಿಮ್ಮ ಬಹುದಿನಗಳ ಆಶೋತ್ತರಗಳಿಗೆ ಬೆಂಬಲ ಸಿಗಲಿದೆ. ಸಂಗಾತಿಯ ಸಹಕಾರದಿಂದ ಕೈ ಹಿಡಿದ ಕೆಲಸಗಳು ಯಶಸ್ವಿಯಾಗಲಿದೆ. ಗೃಹ ವಾಹನಾದಿ ಸೌಕರ್ಯಗಳು ಸದ್ಯದಲ್ಲೇ ನಿಮ್ಮದಾಗಲಿದೆ. ದಿನದಂತ್ಯಕ್ಕೆ ನೆಮ್ಮದಿ ಸಿಗಲಿದೆ.

ತುಲಾ: ವ್ಯಾಪಾರಿಗಳಿಗೆ ಆರ್ಥಿಕವಾಗಿ ನಿವ್ವಳ ಲಾಭ ಸಿಗಲಿದೆ. ಆದರೆ ಹಿತಶತ್ರುಗಳ ಕಾಟ ಕಂಡುಬಂದೀತು. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಮುನ್ನಡೆಯಿರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಹಿರಿಯರ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆ ಎದುರಾದೀತು. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುವ ತಾಳ್ಮೆಯಿರಬೇಕು. ಮಹಿಳೆಯರಿಗೆ ಸಹೋದರರೊಂದಿಗೆ ಸಂಘರ್ಷಗಳಾದೀತು. ಮಾತಿನ ಮೇಲೆ ನಿಗಾ ಇರಲಿ.

ಧನು: ಎಷ್ಟೋ ದಿನದಿಂದ ಹುಡುಕುತ್ತಿದ್ದ ವಸ್ತು ಕೈ ಸೇರಲಿದೆ. ಸಂಗಾತಿಯ ಮಾತುಗಳು ನಿಮಗೆ ಅಪಥ್ಯವೆನಿಸೀತು. ಮಕ್ಕಳ ಪ್ರೀತಿಗೆ ಭಾಜನರಾಗಲಿದ್ದೀರಿ. ದಾಂಪತ್ಯ ಸುಖವಿದ್ದರೂ ಖರ್ಚು ವೆಚ್ಚಗಳು ಚಿಂತೆಗೆ ಕಾರಣವಾದೀತು.

ಮಕರ: ವೃತ್ತಿರಂಗದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರುವುದು. ದೇವತಾ ಪ್ರಾರ್ಥನೆ ಮರೆಯದಿರಿ.

ಕುಂಭ: ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದುಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಶೈಕ್ಷಣವಿಕವಾಗಿ ಉನ್ನತ ಅವಕಾಶಗಳು ದೊರೆಯಲಿವೆ. ಹೊಸ ಜನರ ಭೇಟಿಯಿಂದ ನಿಮ್ಮ ಕೆಲಸಕ್ಕೆ ಅನುಕೂಲವಾಗಲಿದೆ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನ, ಗೌರವಗಳು ಪ್ರಾಪ್ತಿಯಾದೀತು. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗೌರವಕ್ಕೆ ಪಾತ್ರರಾಗಲಿದ್ದೀರಿ. ನೆರೆಹೊರೆಯವರೊಂದಿಗೆ ಸಂಘರ್ಷವಾಗದಂತೆ ಎಚ್ಚರಿಕೆ ವಹಿಸಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ