ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 16 ನವೆಂಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಆದರೆ ಮಾನಸಿಕವಾಗಿ ಹಲವು ಚಿಂತೆಗಳು ನಿಮ್ಮನ್ನು ಹೈರಾಣಾಗಿಸಲಿದೆ. ವ್ಯವಹಾರದಲ್ಲಿ ನಿರೀಕ್ಷಿತ ಫಲ ಕಂಡುಬರಲಿದೆ. ಮಕ್ಕಳ ಭವಿಷ್ಯದ ನಿಮಿತ್ತ ತೀರ್ಮಾನ ಕೈಗೊಳ್ಳಲಿದ್ದೀರಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಆರ್ಥಿಕ ಅಡಚಣೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕಾರ್ಯನಿಮಿತ್ತ ದೂರ ಪ್ರಯಾಣ ಸಂಭವವಿದೆ. ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ವ್ಯಾವಹಾರಿಕ ಕೆಲಸಗಳಿಗೆ ಪ್ರಭಾವಿ ವ್ಯಕ್ತಿಗಳ ಸಹಾಯ ಪಡೆಯಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ವೃತ್ತಿಸಂಬಂಧವಾದ ನಿಮ್ಮ ಸಮಸ್ಯೆಗಳನ್ನು ಕುಟುಂಬದವರ ಮೇಲೆ ತೋರಿಸಬೇಡಿ. ಸಂಗಾತಿಯೊಂದಿಗೆ ಸಂಯಮದಿಂದ ವರ್ತಿಸಿ. ಮಕ್ಕಳ ಸಂತೋಷಕ್ಕಾಗಿ ಕೆಲವು ನಿರ್ಧಾರ ಕೈಗೊಳ್ಳಲಿದ್ದೀರಿ.

ಸಿಂಹ: ಸಹೋದ್ಯೋಗಿಗಳು ನಿಮ್ಮ ಮೇಲೆ ಅವಲಂಬಿತರಾಗಿರುತ್ತಾರೆ. ಮಹಿಳೆಯರಿಗೆ ಸೋದರ ಸಮಾನರಿಂದ ಸಹಾಯವಾಗಲಿದೆ. ಗಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ಕನ್ಯಾ: ಹಠಮಾರಿ ಧೋರಣೆ ಬಿಟ್ಟು ಕಾರ್ಯಸಾಧನೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಸಾಂಸಾರಿಕವಾಗಿ ಸುಂದರ ಕ್ಷಣ ಕಳೆಯುವ ಯೋಗವಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ತುಲಾ: ವೃತ್ತಿರಂಗದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ನಿಗಾ ವಹಿಸಬೇಕಾಗುತ್ತದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಎಚ್ಚರಿಕೆಯಿರಲಿ.

ವೃಶ್ಚಿಕ: ವ್ಯವಹಾರದಲ್ಲಿ ಹಿಂದೆ ಮಾಡಿದ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಿ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಯಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆಯಿರಲಿದೆ.

ಧನು: ಹಲವು ದಿನಗಳ ನಂತರ ಬಂಧುಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಧಾರ್ಮಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರುವುದು. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರುವುದು. ಸಾಮಾಜಿಕವಾಗಿ ಜನಮನ್ನಣೆ ಗಳಿಸಲಿದ್ದೀರಿ.

ಮೀನ: ಮನೆಯವರ ಉತ್ತೇಜನದಿಂದ ಹೊಸ ಕೆಲಸಗಳನ್ನು ಮಾಡುವ ಉತ್ಸಾಹ ನಿಮ್ಮಲ್ಲಿ ಕಂಡುಬರುವುದು. ವೈವಾಹಿಕ ಸಂಬಂಧಗಳಲ್ಲಿ ತೊಂದರೆಯಾಗದಂತೆ ಕುಲದೇವರ ಪ್ರಾರ್ಥನೆ ಮಾಡಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ