ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 20 ನವೆಂಬರ್ 2021 (08:47 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಲವು ದಿನಗಳ ನಂತರ ಪ್ರೀತಿ ಪಾತ್ರರ ಭೇಟಿಯಾದ ಸಂತೋಷ ನಿಮ್ಮದಾಗುವುದು. ಅನಿವಾರ್ಯ ಕಾರಣಗಳಿಗೆ ಭವಿಷ್ಯದ ಯೋಜನೆಗಳನ್ನು ಮುಂದೂಡಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ.

ವೃಷಭ: ನಿಮ್ಮ ಉಪಸ್ಥಿತಿ ಕುಟುಂಬ ಸದಸ್ಯರಿಗೆ ಒಂದು ರೀತಿಯ ಬಲ ನೀಡಲಿದೆ. ಮಾತಿನಿಂದ ಇತರರ ಗಮನ ಸೆಳೆಯಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಕ್ರಿಯಾತ್ಮಕ ಕೆಲಸಗಳನ್ನು ಮಾಡಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಮಿಥುನ: ಎಷ್ಟೋ ದಿನಗಳಿಂದ ಬಾಕಿಯಾಗಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಮುಂದಾಗಲಿದ್ದೀರಿ. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ ಕಂಡುಬರಲಿದೆ.

ಕರ್ಕಟಕ: ಯಾವತ್ತೂ ಮಾಡುವ ಕೆಲಸವಾದರೂ ಇಂದು ಎಡವಿ ಬೀಳುವ ಸಂಭವವಿದೆ. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ದಾಂಪತ್ಯದಲ್ಲಿ ಸಂಗಾತಿಯ ಮಾತಿಗೆ ಬೆಲೆ ಕೊಡದಿದ್ದರೆ ಭಿನ್ನಾಭಿಪ್ರಾಯಗಳಾದೀತು.

ಸಿಂಹ: ವೃತ್ತಿರಂಗದಲ್ಲಿ ಸದವಕಾಶಗಳು ಬಂದಾಗ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗುವುದು. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ವಾತಾವರಣ ಬದಲಾವಣೆಯಿಂದ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದೀತು. ಹಳೆಯ ಮಿತ್ರರನ್ನು ಭೇಟಿಯಾಗಲಿದ್ದೀರಿ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ತುಲಾ: ವ್ಯಾಪಾರಿ ವರ್ಗದವರಿಗೆ ಉನ್ನತಿಗೇರುವ ಅವಕಾಶಗಳು ದೊರೆಯಲಿವೆ. ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಕಷ್ಟದಲ್ಲಿರುವವರಿಗೆ ನಿಮ್ಮ ಇಚ್ಛಾಶಕ್ತಿಗನುಗುಣವಾಗಿ ಸಹಾಯ ಮಾಡಲಿದ್ದೀರಿ. ಸಾಮಾಜಿಕವಾಗಿ ಜನಮನ್ನಣೆಗೆ ಪಾತ್ರರಾಗಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಸ್ಥಾನಪಲ್ಲಟ ಸಾಧ‍್ಯತೆಯಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಧನು: ಮಾತಿನಿಂದ ಮನೆ, ಮನಸ್ಸು ಕೆಟ್ಟೀತು ಎಂಬುದನ್ನು ಅರಿತುಕೊಳ್ಳಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ತಾಳ್ಮೆಯಿರಲಿ.

ಮಕರ: ಸಂಗಾತಿಯು ಸಕಾಲದಲ್ಲಿ ಕೊಡುವ ಸಲಹೆಗಳಿಂದ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕುಂಭ: ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿರಿಸಿ ಕೌಟುಂಬಿಕವಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ನಿಮ್ಮ ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯಗತಗೊಳಿಸಲಿದ್ದೀರಿ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಮಾತಿಗಿಂತ ಕೆಲಸದ ಕಡೆಗೆ ಹೆಚ್ಚು ಗಮನವಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ