ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 23 ಡಿಸೆಂಬರ್ 2021 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಧೈರ್ಯ ಸಾಹಸ ಮನೋಭಾವದಿಂದ ನಿಮ್ಮ ಎದುರು ಬರುವ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಲಿದ್ದೀರಿ. ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರ ಬದಲಾವಣೆಗಳು ಕಂಡುಬರಲಿದೆ. ಹೊಸ ವಿಚಾರಗಳನ್ನು ಕಲಿಯಲಿದ್ಧೀರಿ.

ವೃಷಭ: ನಿಮ್ಮ ಆಪ್ತರನ್ನು ನೋಡುವ ದೃಷ್ಟಿಕೋನ ಬದಲಾಗಲಿದೆ. ಮನೆಯಲ್ಲಿ ಹೊಸ ಸದಸ್ಯರ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ಹಿಂದೆ ಮಾಡಿದ್ದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಕ್ರಿಯಾತ್ಮಕ ಯೋಚನೆಗಳನ್ನು ಮಾಡಬೇಕಾಗುತ್ತದೆ. ಹಿರಿಯರಿಂದ ಬಂದಿರುವ ಬಳವಳಿ ಸಂರಕ್ಷಿಸುವ ಹೊಣೆಗಾರಿಕೆ ನಿಮ್ಮದಾಗಲಿದೆ.

ಕರ್ಕಟಕ: ವೈಯಕ್ತಿಕ ಜೀವನದಲ್ಲಿ ಮೂರನೆಯವರಿಗೆ ಮೂಗು ತೂರಿಸಲು ಅವಕಾಶ ಕೊಡದಿರಿ. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗುವುದು. ಇಷ್ಟ ಭೋಜನ ಮಾಡಲಿದ್ದೀರಿ.

ಸಿಂಹ: ನಿಮ್ಮ ಉದ್ಯೋಗದಲ್ಲಿ ಯಶಸ್ಸಿಗೆ ಕಾರಣರಾದವರನ್ನು ಮರೆಯದಿರಿ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ತಾಳ್ಮೆಯಿರಲಿ.

ಕನ್ಯಾ: ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಅನಿವಾರ್ಯ ಕಾರಣಗಳಿಗೆ ಉದ್ಯೋಗ ಬದಲಾವಣೆ ಬಗ್ಗೆ ಪ್ರಯತ್ನ ನಡೆಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಹಿತಶತ್ರುಗಳಿಂದ ದೂರವಿದ್ದರೆ ಉತ್ತಮ. ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ವೈಯಕ್ತಿಕ ಸುಖಕ್ಕಿಂತ ಪರರ ಹಿತ ಮುಖ್ಯ ಎಂದನಿಸುವುದು. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಬಗ್ಗೆ ಆಸಕ್ತಿ ಬರಲಿದೆ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿದೆ.

ಧನು: ವೈಚಾರಿಕವಾಗಿ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇಹಾರೋಗ್ಯದ ಸಮಸ್ಯೆಗಳು ದೂರವಾಗಲಿದೆ. ಅನಗತ್ಯ ಚಿಂತೆ ಬೇಡ.

ಮಕರ: ವಾಹನ, ಭೂಮಿ ಖರೀದಿಸುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಆರ್ಥಿಕವಾಗಿ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಉದ್ಯೋಗಾದಿ ವ್ಯವಹಾರಗಳಲ್ಲಿ ಹೆಚ್ಚಿನ ಸ್ಥಾನ ಮಾನ ಗೌರವಗಳು ನಿಮ್ಮದಾಗಲಿದೆ.

ಕುಂಭ: ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸಿದ ತೃಪ್ತಿ ನಿಮ್ಮಲ್ಲಿರಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ಮೀನ: ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ದೂರವಾಗಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೂರ ಸಂಚಾರ ಮಾಡಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ