ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 1 ಜನವರಿ 2022 (08:32 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮನಸ್ಸಿಗೆ ಮುದ ನೀಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕೆಲಸಗಳು ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ವೃಷಭ: ನಿಮ್ಮ ವಿಚಾರಧಾರೆಗಳಿಗೆ ಮನೆಯ ಇತರ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಾಗಲಿವೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ವಿಶೇಷವಾದ ಜನರನ್ನು ಭೇಟಿ ಮಾಡಲಿದ್ದು, ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಹಿಂದೆ ಮಾಡಿದ್ದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಕಿರು ಸಂಚಾರ ಮಾಡಬೇಕಾಗಬಹುದು.

ಕರ್ಕಟಕ: ನಿಮ್ಮ ಮಾತುಗಳಿಗೆ ಮನೆಯವರೇ ಬೆಲೆ ಕೊಡದ ಪರಿಸ್ಥಿತಿಯಾದೀತು. ಮನಸ್ಸಿಗೆ ದುಃಖವನ್ನು ಆತ್ಮೀಯರೊಂದಿಗೆ ಹಂಚಿಕೊಳ್ಳಲಿದ್ದೀರಿ. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಸಿಂಹ: ಕೆಲವು ವಸ್ತುಗಳ ಮೇಲೆ ಅತಿಯಾದ ಮೋಹ ಕಂಡುಬರಲಿದೆ. ವೃತ್ತಿರಂಗದಲ್ಲಿ ಮುಂಬಡ್ತಿ ಯೋಗವಿದೆ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮೆಚ್ಚುಗೆ ಸಿಗಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ.

ಕನ್ಯಾ: ಹೊಸ ಅವಕಾಶಗಳು ಬಂದಾಗ ಎರಡೂ ಕೈಗಳಿಂದ ಬಾಚಿಕೊಳ್ಳಲಿದ್ದೀರಿ. ಎಷ್ಟೋ ದಿನದಿಂದ ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡುವ ಮೂಲಕ ಸಂತೋಷ ಕೊಡಲಿದ್ದೀರಿ.

ತುಲಾ: ಮಕ್ಕಳ ಜೀವನದಲ್ಲಿ ಬದಲಾವಣೆಯಾದೀತು. ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಕಾರ್ಯರಂಗದಲ್ಲಿ ನಿಮ್ಮ ಹಿತಶತ್ರುಗಳ ಹುನ್ನಾರ ಬಯಲಾಗಲಿದೆ. ಆರ್ಥಿಕವಾಗಿ ಅಳೆದು ತೂಗಿ ಖರ್ಚು ಮಾಡಬೇಕಾದ ಪರಿಸ್ಥಿತಿಯಿರಲಿದೆ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ.

ಧನು: ನಿಮ್ಮ ವಿಚಾರಗಳನ್ನು ಇತರರ ಮೇಲೆ ಹೇರಲು ಹೋಗಬೇಡಿ. ಸಂಗಾತಿಯ ಹಿತೋಪದೇಶಗಳು ಅಪಥ್ಯವೆನಿಸೀತು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕಂಡುಬರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಮಕರ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಸ್ಥಾನ ಲಾಭವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಕುಂಭ: ನಿಮ್ಮ ಮನಸ್ಸಿಗೆ ಖುಷಿಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದಲ್ಲಿ ಉದರ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು. ಸರಕಾರಿ ನೌಕರರಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ.

ಮೀನ: ಬಂಧು ವರ್ಗದವರ ಪ್ರೀತಿ, ಆದರಗಳಿಗೆ ಪಾತ್ರರಾಗಲಿದ್ದೀರಿ. ಪಾಲು ಬಂಡವಾಳ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ಕೌಟುಂಬಿಕವಾಗಿ ಅಭಿವೃದ್ಧಿ, ನೆಮ್ಮದಿ ಕಂಡುಬರುವುದು. ಅನಗತ್ಯ ಚಿಂತೆ ಬೇಡ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ