ಮೇಷ: ದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಆರ್ಥಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಆಪ್ತರೊಂದಿಗಿನ ವ್ಯಾಜ್ಯಗಳನ್ನು ನಿಭಾಯಿಸಲು ಕಲಿಯಬೇಕು. ತಾಳ್ಮೆಯಿರಲಿ.
ವೃಷಭ: ನೂತನ ಮಿತ್ರರ ಸಮಾಗಮವಾಗಲಿದೆ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರುವುದು. ಉದ್ಯೋಗ ಕ್ಷೇತ್ರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.
ಮಿಥುನ: ದಾಂಪತ್ಯದಲ್ಲಿ ಕತ್ತಿಯ ಮೇಲಿನ ನಡಿಗೆ ನಿಮ್ಮದಾಗಲಿದೆ. ಮಾತಿನ ಮೇಲೆ ನಿಗಾ ಇರಲಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಏಕಾಗ್ರತೆ ಕಂಡುಬರುವುದು.
ಕರ್ಕಟಕ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ತಾಳ್ಮೆಯಿರಲಿ.
ಸಿಂಹ: ಅಧ್ಯಾಪನ ವೃತ್ತಿಯಲ್ಲಿರುವವರಿಗೆ ಮುನ್ನಡೆಯ ಯೋಗ. ಆರ್ಥಿಕವಾಗಿ ಸಂಪತ್ತು ವೃದ್ಧಿಯಾಗಲಿದೆ. ಕಾರ್ಯನಿಮಿತ್ತ ದೀರ್ಘ ಪ್ರಯಾಣ ಸಂಭವ. ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆಯ ಯೋಗ. ದೇವತಾ ಪ್ರಾರ್ಥನೆ ಮಾಡಿ.
ಕನ್ಯಾ: ಮಕ್ಕಳಿಂದ ಸಂತೋಷ, ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ ಕಂಡುಬರುವುದು. ಆದರೆ ಕೌಟುಂಬಿಕ ವಿಚಾರದಲ್ಲಿ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ಸಂದರ್ಭಕ್ಕೆ ಸರಿಯಾಗಿ ನಿರ್ಧಾರ ಬದಲಿಸಬೇಕಾಗುತ್ತದೆ.
ತುಲಾ: ಆಸ್ತಿ ವಿಚಾರದಲ್ಲಿ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ನಿರ್ಣಯಕ್ಕೆ ಬರಬೇಕಾಗುತ್ತದೆ. ಹೊಸ ಯೋಜನೆಗಳನ್ನು ಆರಂಭಿಸಲು ಕೆಲವು ದಿನ ಕಾಯುವುದು ಒಳಿತು. ಮಕ್ಕಳ ವಿಚಾರದಲ್ಲಿ ಸಂತೋಷದಾಯಕ ಸುದ್ದಿ ಕೇಳಿಬರಲಿದೆ.
ವೃಶ್ಚಿಕ: ಆರ್ಥಿಕವಾಗಿ ಚೇತರಿಕೆ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಹೊಸ ಜನರ ಭೇಟಿ, ಮಿತ್ರತ್ವ ಸಂಪಾದಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ಧನು: ಅಭಿವೃದ್ಧಿ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ನಿಮ್ಮ ಹಿಂದೆ ನಡೆಯುತ್ತಿದ್ದ ವಂಚೆನಗಳು ಬೆಳಕಿಗೆ ಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ.
ಮಕರ: ನೆರೆಹೊರೆಯವರ ಕಷ್ಟಕ್ಕೆ ಆಗಿ ಬರಲಿದ್ದೀರಿ. ವಿದ್ಯಾರ್ಥಿಗಳಿಗೆ ಪ್ರಯಾಣ ಯೋಗ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವೃತ್ತಿರಂಗದಲ್ಲಿ ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ಚಿಂತೆ ಬೇಡ.
ಕುಂಭ: ಆರೋಗ್ಯದಲ್ಲಿ ಏರಿಳಿತವಾದೀತು. ವಿದ್ಯಾರ್ಥಿಗಳಲ್ಲಿ ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರುವುದು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಸಹೋದರಾದಿ ವರ್ಗದವರಿಂದ ಸಂತೋಷ ಸಿಗಲಿದೆ.
ಮೀನ: ಹಿರಿಯರಿಂದ ಬರಬೇಕಾಗಿದ್ದ ಪಾಲಿನ ಬಳವಳಿ ಕೈಗೆ ಬರಲಿದೆ. ಆರ್ಥಿಕವಾಗಿ ಎಚ್ಚರಿಕೆಯಿಂದ ಖರ್ಚು ಮಾಡುವುದು ಮುಖ್ಯ. ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ.