ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 29 ಜನವರಿ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಿಶೇಷವಾದ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ ನಿಮ್ಮದಾಗಲಿದೆ. ಹಳೆಯ ತಪ್ಪುಗಳಿಂದ ಪಾಠ ಕಲಿಯಲಿದ್ದೀರಿ. ಮಕ್ಕಳ ವಿಚಾರದಲ್ಲಿ ಸಂಗಾತಿಯೊಂದಿಗೆ ಸಣ್ಣ ಪುಟ್ಟ ಘರ್ಷಣೆಯಾದೀತು. ತಾಳ್ಮೆ, ಸಂಯಮ ಅಗತ್ಯ.

ವೃಷಭ: ಮಾನಸಿಕವಾಗಿ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಬರಲಿದೆ. ಮಹಿಳೆಯರಿಗೆ ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಚಿಂತೆ ಬೇಡ.

ಮಿಥುನ: ಮನಸ್ಸಿನ ಆಸೆಗಳನ್ನು ಅದುಮಿಟ್ಟುಕೊಳ್ಳುವ ಪ್ರಯತ್ನ ಮಾಡಲಿದ್ದೀರಿ. ಪ್ರೇಮಿಗಳಿಗೆ ಮಿಶ್ರಫಲವಿರಲಿದೆ. ನಿರುದ್ಯೋಗಿಗಳ ಬಹುದಿನಗಳ ಕನಸು ನನಸಾಗಿದೆ. ಅಧ್ಯಯನ ಶೀಲರಿಗೆ ಮುನ್ನಡೆ ಕಂಡುಬರಲಿದೆ.

ಕರ್ಕಟಕ: ನಿಮ್ಮ ಕೆಲಸ ಕಾರ್ಯದ ಹೊರೆಯನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಕೌಟುಂಬಿಕವಾಗಿ ವಿಶೇಷ ಅತಿಥಿಗಳ ಆಗನವಾಗಲಿದೆ. ಹಣಕಾಸಿನ ವಿಚಾರದಲ್ಲಿ ಜಾಗರೂಕತೆಯಿಂದ ಖರ್ಚು ಮಾಡಬೇಕಾಗುತ್ತದೆ. ತಾಳ್ಮೆಯಿರಲಿ.

ಸಿಂಹ: ವೃತ್ತಿರಂಗದಲ್ಲಿ ನಿಮ್ಮ ಕನಸು ನನಸು ಮಾಡಿಕೊಳ್ಳಲು ಉತ್ತಮ ಅವಕಾಶಗಳು ಸಿಗಲಿವೆ. ಕ್ರಿಯಾತ್ಮಕ ಕೆಲಸಗಳಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದ್ದೀರಿ. ವ್ಯಾವಹಾರಿಕವಾಗಿ ಅಪರಿಚಿತರೂ ಸಹಾಯಕ್ಕೆ ಒದಗಿಬರಲಿದ್ದಾರೆ.

ಕನ್ಯಾ: ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಸಂದರ್ಭಗಳು ಎದುರಾದೀತು. ಕುಟುಂಬದ ಹಿತದೃಷ್ಟಿಯಿಂದ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ.

ತುಲಾ: ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರುವುದು. ಮನಸ್ಸಿಗೆ ಹಿಡಿಸಿದ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಚಿಂತೆ ಬೇಡ.

ವೃಶ್ಚಿಕ: ಇಂದು ನೀವು ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದ್ದು, ಮನಸ್ಸಿಗೆ ಸಂತೋಷವಾಗಲಿದೆ. ರೈತಾಪಿ ವರ್ಗದವರಿಗೆ ಬೆಳೆ ನಷ್ಟದ ಭೀತಿ ಕಂಡುಬರಲಿದೆ. ಭವಿಷ್ಯದ ದೃಷ್ಟಿಯಿಂದ ಖರ್ಚು ವೆಚ್ಚಕ್ಕೆ ಕಡಿವಾಣ ಹಾಕುವುದು ಉತ್ತಮ.

ಧನು: ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಧನ ಗಳಿಕೆಗೆ ಹೊಸ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿಯಾಗುವುದು. ನೆರೆಹೊರೆಯವರ ಪ್ರೀತಿಗೆ ಪಾತ್ರರಾಗಲಿದ್ದೀರಿ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಕೊಂಚ ಎಚ್ಚರಿಕೆ ತಪ್ಪಿದರೂ ನಷ್ಟ ಸಂಭವಿಸುವ ಭೀತಿ. ಉದ್ಯೋಗ ನಿಮಿತ್ತ ಪ್ರಯಾಣ ಮಾಡಬೇಕಾಗುತ್ತದೆ. ಧನಾಗಮನಕ್ಕೆ ಕೊರತೆಯಿರದು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ.

ಕುಂಭ: ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಉದ್ಯೋಗ, ವ್ಯವಹಾರದಲ್ಲಿ ಅನಿರೀಕ್ಷಿತ ಧನಾಗಮನವಾದೀತು. ತಾಳ್ಮೆಯಿರಲಿ.

ಮೀನ: ಉದ್ಯೋಗಸ್ಥ ಮಹಿಳೆಯರಿಗೆ ಕಾರ್ಯದೊತ್ತಡ ಕಂಡುಬಂದೀತು. ಉನ್ನತ ಸ್ಥಾನಕ್ಕಾಗಿ ಖರ್ಚು ವೆಚ್ಚ ಮಾಡಬೇಕಾಗಿ ಬಂದೀತು. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖಕ್ಕೆ ಕೊರತೆಯಾಗದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ