ಮೇಷ: ಹಳೆಯ ವಿಚಾರಗಳನ್ನು ನೆನೆಸಿಕೊಂಡು ಮಾನಸಿಕವಾಗಿ ಖಿನ್ನರಾಗಲಿದ್ದೀರಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಮಾತಿನ ಮೇಲೆ ನಿಗಾ ಇರಲಿ.
ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪಾಲಿನ ಕೆಲಸಗಳನ್ನು ಬೇಗನೇ ಮುಗಿಸಿದ ತೃಪ್ತಿ ನಿಮ್ಮದಾಗಲಿದೆ. ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ನಿರುದ್ಯೋಗಿಗಳಿಗೆ ತಕ್ಕ ಉದ್ಯೋಗಾವಕಾಶ ಸಿಗಲಿದೆ.
ಮಿಥುನ: ಹೊಸದಾಗಿ ಆರಂಭಿಸಿದ ವೃತ್ತಿಯಲ್ಲಿ ಅಡೆತಡೆಗಳು ಕಂಡುಬಂದೀತು. ನಿಮ್ಮ ಕಷ್ಟಗಳಿಗೆ ಸಂಗಾತಿಯ ಸಾಥ್ ಸಿಗುವುದು. ನಿಮ್ಮ ಮಾತಿನ ಧಾಟಿ ಇನ್ನೊಬ್ಬರಿಗೆ ಅಪ್ರಿಯವೆನಿಸೀತು. ದೇವತಾ ಪ್ರಾರ್ಥನೆ ಮಾಡಿ.
ಕರ್ಕಟಕ: ಗೃಹೋಪಕರಣಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಆಹಾರ ಸೇವನೆಯಲ್ಲಿ ಹಿತಮಿತವಾಗಿದ್ದರೆ ಉತ್ತಮ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ.
ಸಿಂಹ: ವಿದ್ಯಾರ್ಥಿಗಳಿಗೆ ಬಹುದಿನಗಳ ಸಮಸ್ಯೆಗೆ ಪರಿಹಾರ ಸಿಗಲಿದೆ. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಮುನ್ನಡೆಯಿದ್ದರೂ ಹಿತಶತ್ರುಗಳ ಕಾಟ ಕಂಡುಬಂದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.
ಕನ್ಯಾ: ವೃತ್ತಿರಂಗದಲ್ಲಿ ನಿಮ್ಮ ಬಗ್ಗೆ ಸದಭಿಪ್ರಾಯಗಳು ಕೇಳಿಬರಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಹೊಸ ವ್ಯಕ್ತಿಗಳ ಭೇಟಿಯಿಂದ ಕಾರ್ಯಸಾಧನೆಗೆ ಅನುಕೂಲವಾಗಲಿದೆ.
ತುಲಾ: ಮಹಿಳೆಯರಿಗೆ ಅಡುಗೆ ಮನೆ ವಿಚಾರದಲ್ಲಿ ಸಣ್ಣ ಪುಟ್ಟ ಅಪಘಾತಗಳಾದೀತು. ಎಚ್ಚರಿಕೆ ಅಗತ್ಯ. ಮನೆಗೆ ಬಂಧು ಮಿತ್ರರ ಭೇಟಿ ಸಂಭವ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ. ತಾಳ್ಮೆ, ಸಂಯಮ ಅಗತ್ಯ.
ವೃಶ್ಚಿಕ: ಹೊಸದಾಗಿ ಮದುವೆಯಾಗಿದ್ದರೆ ಹೊಂದಾಣಿಕೆ ಕಷ್ಟವಾಗಬಹುದು. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯುವುದು ಉತ್ತಮ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಧನು: ಭೂಮಿ, ವಾಹನಾದಿ ಖರೀದಿ ಯೋಚನೆಗಳು ಮನಸ್ಸಿಗೆ ಬರಲಿದ್ದು, ಅದರ ಬಗ್ಗೆ ಕಾರ್ಯಪ್ರವೃತ್ತರಾಗಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನದ ಯೋಗ ಕೂಡಿಬರುವುದು. ದಿನದಂತ್ಯಕ್ಕೆ ಶುಭ ಸುದ್ದಿ.
ಮಕರ: ಮಾತಿಗಿಂತ ಕೃತಿಯ ಮೇಲೆ ಹೆಚ್ಚು ಗಮನ ಕೊಡಬೇಕಾದ ದಿನವಿದು. ನಿಮ್ಮ ಕ್ರಿಯಾತ್ಮಕ ಕೆಲಸಗಳು ಇತರರ ಮೆಚ್ಚುಗೆಗೆ ಪಾತ್ರವಾಗಲಿದೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಮುನ್ನಡೆ. ಕುಲದೇವರ ಪ್ರಾರ್ಥನೆ ಮಾಡಿ.
ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಅನುಭವಕ್ಕೆ ಬರಲಿದೆ. ಸಂಗಾತಿಯ ಬಹುದಿನಗಳ ಆಸೆ ಪೂರೈಸಲು ಮುಂದಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.
ಮೀನ: ಅನಿರೀಕ್ಷತವಾಗಿ ಸಂಭವಿಸುವ ಕೆಲವು ಘಟನೆಗಳು ನಿಮ್ಮ ಜೀವನ ಬದಲಾಯಿಸಲಿದೆ. ಕಳೆದು ಹೋದ ವಸ್ತುಗಳು ಮರಳಿ ಕೈ ಸೇರಲಿದೆ. ಪ್ರಾಮಾಣಿಕತೆಯಿಂದ ಇತರರ ಮನಸ್ಸು ಗೆಲ್ಲಲಿದ್ದೀರಿ. ದೇವತಾ ಪ್ರಾರ್ಥನೆ ಮರೆಯದಿರಿ.