ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 1 ಫೆಬ್ರವರಿ 2022 (08:32 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ತಮ್ಮ ಕ್ಷೇತ್ರದಲ್ಲಿ ಬೇಡಿಕೆ ಹೆಚ್ಚಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಹೊಸ ಬಗೆಯ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ನಿಮ್ಮ ನಡೆ-ನುಡಿಯ ಮೇಲೆ ನಿಯಂತ್ರಣವಿರಲಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು.

ಮಿಥುನ: ವಿವಾಹಾದಿ ಪ್ರಯತ್ನಗಳಿಗೆ ತಕ್ಕ ಫಲ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಚಿಂತೆ ಬೇಡ.

ಕರ್ಕಟಕ: ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ನಿರುದ್ಯೋಗಿಗಳಿಗೆ ತಾವು ಸಾಗುವ ದಾರಿಯಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರಿ ವರ್ಗದವರಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗುವುದು. ತಾಳ್ಮೆಯಿರಲಿ.

ಸಿಂಹ: ಹೊಸದಾಗಿ ಉದ್ಯೋಗ ಆರಂಭಿಸಿದ್ದರೆ ಸವಾಲುಗಳು ಎದುರಾಗಲಿವೆ. ಕ್ರಿಯಾತ್ಮಕವಾಗಿ ಯೋಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ‍್ಳಬೇಕಾಗುತ್ತದೆ. ದಂಪತಿಗಳು ಅನಗತ್ಯ ಚರ್ಚೆಗಳಿಗೆ ಅವಕಾಶ ಕೊಡದಿರುವುದು ಉತ್ತಮ.

ಕನ್ಯಾ: ಮಕ್ಕಳ ವಿಚಾರದಲ್ಲಿ ಅಭಿವೃದ್ಧಿ ಕಂಡುಬರಲಿದ್ದು, ಮನಸ್ಸಿಗೆ ಸಂತೋಷವಾಗಲಿದೆ. ಹಿರಿಯರೊಂದಿಗೆ ಅಭಿಪ್ರಾಯ ಬೇಧ ಕಂಡುಬಂದೀತು. ತಾಳ್ಮೆ, ಸಂಯಮವಿರಲಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು.

ತುಲಾ: ವಿಶೇಷವಾದ ವ್ಯಕ್ತಿಗಳನ್ನು ಬೇಟಿಯಾಗುವ ಯೋಗ ನಿಮ್ಮದಾಗಲಿದೆ. ವೃತ್ತಿರಂಗದಲ್ಲಿ ಮುನ್ನಡೆಗೆ ಅವಕಾಶಗಳು ಸಿಗಲಿವೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಕಂಡುಬಂದೀತು. ದಿನದಂತ್ಯಕ್ಕೆ ಶುಭ ಸುದ್ದಿ ಕೇಳಿಬರುವುದು.

ವೃಶ್ಚಿಕ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಧನು: ಭವಿಷ್ಯದ ದೃಷ್ಟಿಯಲ್ಲಿ ಕೆಲವೊಂದು ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ನಿಮ್ಮ ಪ್ರಯತ್ನಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಿದ್ಯಾರ್ಥಿಗಳಿಗೆ ಮುನ್ನಡೆ.

ಮಕರ: ವಾಹಾನಾದಿ ಸೌಕರ್ಯ ಮಾಡಿಕೊಳ್ಳಲು ಹಣಕಾಸಿನ ಹೊಂದಾಣಿಕೆ ಮಾಡಿಕೊಳ್ಳಲಿದ್ದೀರಿ. ಪಾಲು ಬಂಡವಾಳ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು. ಹಳೆಯ ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ.

ಕುಂಭ: ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆಗೆ ಅಡ್ಡಿ ಮಾಡುವವರಿರುತ್ತಾರೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಸರಕಾರಿ ಪತ್ರಗಳನ್ನು ಜೋಪಾನ ಮಾಡಬೇಕಾಗುತ್ತದೆ. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಮುನ್ನಡೆ.

ಮೀನ: ಕೌಟುಂಬಿಕವಾಗಿ ಅನಿರೀಕ್ಷಿತವಾಗಿ ಕೆಲವೊಂದು ಖರ್ಚು ವೆಚ್ಚಗಳು ಕಂಡುಬರಲಿದೆ. ನಿಮ್ಮ ಮಾತಿನಿಂದ ಇನ್ನೊಬ್ಬರ ಮನಸ್ಸಿಗೆ ನೋವಾಗುವ ಪ್ರಸಂಗಗಳಾದೀತು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ