ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 13 ಫೆಬ್ರವರಿ 2022 (08:32 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸುದೀರ್ಘ ಪ್ರಯಾಣ ಮಾಡುವಾಗ ಅನಾಹುತಗಳಾಗುವ ಅಪಾಯವಿದೆ. ಎಚ್ಚರಿಕೆ ಅಗತ್ಯ. ಸಾಂಸಾರಿಕವಾಗಿ ಆಡಿದ ಮಾತಿಗೆ ಪಶ್ಚಾತ್ತಾಪಡುವ ಸಂದರ್ಭಗಳು ಎದುರಾದೀತು. ಹೊಸ ಜನರ ಭೇಟಿಯಿಂದ ಕಾರ್ಯಸಾಧನೆಯಾಗಲಿದೆ.

ವೃಷಭ: ನಿಮ್ಮ ನಿರ್ಧಾರಗಳು ಸರಿ ಎನ್ನುವ ಅತಿಯಾದ ಆತ್ಮವಿಶ್ವಾಸದಲ್ಲಿರುತ್ತೀರಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳನ್ನು ಹೊರಬೇಕಾಗುತ್ತದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ.

ಮಿಥುನ: ಎಷ್ಟೋ ದಿನದಿಂದ ಬಾಕಿಯಿದ್ದ ಹರಕೆ ತೀರಿಸಲು ಮುಂದಾಗಲಿದ್ದೀರಿ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ.

ಕರ್ಕಟಕ: ಕೈತಪ್ಪಿ ಹೋದ ಅವಕಾಶಗಳ ಬಗ್ಗೆ ಯೋಚಿಸುತ್ತಾ ಮಾನಸಿಕವಾಗಿ ಖಿನ್ನರಾಗಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗುವುದು. ಮಕ್ಕಳ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ.

ಸಿಂಹ: ಸರಕಾರಿ ಲೆಕ್ಕಪತ್ರಗಳನ್ನು ಜೋಪಾನವಾಗಿಟ್ಟುಕೊಳ್ಳಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಧನಾದಾಯ ಹೆಚ್ಚಿಸಲು ಹೊಸ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ತಾಳ್ಮೆ ಅಗತ್ಯ.

ಕನ್ಯಾ: ಅಧ್ಯಯನದಲ್ಲಿ ಆಸಕ್ತಿ ಹೊಂದಿದವರಿಗೆ ಅವಕಾಶಗಳು ಕಂಡುಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಪಡೆಯಲಿದ್ದೀರಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ.

ತುಲಾ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ. ಮಹಿಳೆಯರಿಗೆ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಇಷ್ಟಮಿತ್ರರೊಂದಿಗೆ ಕಿರು ಸಂಚಾರ ಮಾಡಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಪ್ರೇಮಿಗಳಿಗೆ ಮನದ ಭಾವನೆ ಹಂಚಿಕೊಳ್ಳಲು ಸಕಾಲ. ವ್ಯಾಪಾರಸ್ಥರಿಗೆ ಅನುಕೂಲಕರ ದಿನ.

ಧನು: ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಆರ್ಥಿಕವಾಗಿ ಮತ್ತು ವ್ಯಾವಹಾರಿಕವಾಗಿ ಚೇತರಿಕೆ ಕಂಡುಬರಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ.

ಮಕರ: ಉತ್ತಮ ಯೋಚನೆಗಳಿಂದ ಮನೆಯಲ್ಲಿ ಸಕಾರಾತ್ಮಕ ಭಾವನೆ ಹರಡಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಬಿಡುವಿನ ದಿನದ ಸಂತೋಷ ಅನುಭವಿಸುವಿರಿ. ದಿನದಂತ್ಯಕ್ಕೆ ಸಂತೋಷದ ಸುದ್ದಿ ಕೇಳಿಬರುವುದು.

ಕುಂಭ: ಮಕ್ಕಳ ಜೀವನದಲ್ಲಿ ಅಂದುಕೊಂಡ ಬದಲಾವಣೆ ಕಂಡುಬರಲಿದ್ದು, ಮನಸ್ಸಿಗೆ ಸಂತೋಷವಾಗಲಿದೆ. ಕೌಟುಂಬಿಕವಾಗಿ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ಮಹಿಳೆಯರಿಗೆ ಅಡುಗೆ ಮನೆ ವಿಚಾರದಲ್ಲಿ ಅಪಘಾತಗಳಾಗುವ ಸಂಭವ, ಎಚ್ಚರಿಕೆ ಅಗತ್ಯ. ನಿರ್ಧಾರ ಕೈಗೊಳ‍್ಳುವಾಗ ಗೊಂದಲಗಳಾದೀತು. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ