ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 22 ಫೆಬ್ರವರಿ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಜೀವನದಲ್ಲಿ ಹೊಸ ಆರಂಭಕ್ಕೆ ಮುನ್ನುಡಿ ಬರೆಯಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸಂಗಾತಿಯೊಂದಿಗೆ ಪರಾಮರ್ಶಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ. ದಿನದಂತ್ಯಕ್ಕೆ ನೆಮ್ಮದಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳ ಕಾಟ ಕಂಡುಬರಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದೂರ ಸಂಚಾರದಿಂದ ಕಾರ್ಯಸಿದ್ಧಿಯಾಗಲಿದೆ.

ಕರ್ಕಟಕ: ಹೊಸ ವಸ್ತು ಖರೀದಿಸುವ ನಿಮ್ಮ ಕನಸು ನನಸಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಕಂಡುಬಂದೀತು. ಕೃಷಿಕರಿಗೆ ಬೆಳೆಗೆ ತಕ್ಕ ಬೆಲೆ ಸಿಗಲಿದೆ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯ ಯೋಗ. ನಿಮ್ಮ ಹಠವಾದೀ ಮನೋಭಾವ ಇತರರಿಗೆ ಕಿರಿ ಕಿರಿ ಎನಿಸೀತು. ಕಾರ್ಯ ಸಿದ್ಧಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಬಹುದಿನಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಲಿದೆ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಇಷ್ಟ ಮಿತ್ರರ ಭೇಟಿ, ಭೋಜನ ಯೋಗವಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ಉತ್ತಮ ಯೋಚನೆಗಳಿಂದ ಸುತ್ತಲಿದ್ದವರಿಗೂ ಸಕಾರಾತ್ಮಕ ಭಾವನೆ ಮೂಡಿಸಲಿದ್ದೀರಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ. ಮಾನಸಿಕವಾಗಿ ನೆಮ್ಮದಿಯಾಗಲಿದೆ.

ವೃಶ್ಚಿಕ: ಸುಲಭವಾಗಿ ಸಿಕ್ಕಿದ ವಸ್ತು ಅಷ್ಟೇ ಸುಲಭವಾಗಿ ಕಳೆದುಹೋಗಲಿದೆ. ಸಂಬಂಧಗಳಲ್ಲಿ ಒಡಕಾಗದಂತೆ ನೋಡಿಕೊಳ್ಳಿ. ಮಾತಿನ ಮೇಲೆ ಸಂಯಮವಿರಲಿ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ತಾಳ್ಮೆ ಅಗತ್ಯ.

ಧನು: ಎಷ್ಟೋ ದಿನದಿಂದ ಅಂದುಕೊಂಡ ಕೆಲಸಗಳು ಇಂದು ಪೂರ್ತಿ ಮಾಡಲಿದ್ದೀರಿ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಉದ್ಯೋಗ, ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ದೇವರ ಪ್ರಾರ್ಥನೆ ಮಾಡಿದರೆ ಶುಭ.

ಮಕರ: ವಿಶೇಷವಾದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡಬೇಡಿ. ಸಂದರ್ಭಕ್ಕೆ ತಕ್ಕ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಅಪಾಯಗಳು ದೂರವಾಗಲಿದೆ.

ಕುಂಭ: ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಇಷ್ಟಮಿತ್ರರ ಭೇಟಿ ಯೋಗವಿದೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮನದಾಸೆ ಈಡೇರಲಿದೆ. ಆರ್ಥಿಕವಾಗಿ ಸುಧಾರಣೆ ಕಂಡುಬರಲಿದ್ದು, ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ. ಸಂತೋಷವಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ