ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 23 ಫೆಬ್ರವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅತಿಯಾದ ಧಾರಾಳತನದಿಂದ ಆರ್ಥಿಕವಾಗಿ ಸಂಕಷ್ಟಕ್ಕೀಡಾಗುವ ಸಾಧ್ಯತೆಯಿದೆ. ಸಂಗಾತಿಯ ಕೆಲವೊಂದು ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವುದು ಉತ್ತಮ. ಸಾಂಸಾರಿಕವಾಗಿ ತಾಳ್ಮೆ ಅಗತ್ಯ.

ವೃಷಭ: ವೃತ್ತಿರಂಗದಲ್ಲಿ ಹೆಚ್ಚಿನ ಜವಾಬ್ಧಾರಿ ನಿಮ್ಮ ಹೆಗಲಿಗೇರಲಿದೆ. ಕ್ರಿಯಾತ್ಮಕ ಕೆಲಗಳಿಂದ ಇತರರ ಮನ ಗೆಲ್ಲಲಿದ್ದೀರಿ. ಗುರುಹಿರಿಯರ ಆಶೀರ್ವಾದದೊಂದಿಗೆ ಪ್ರಾರಂಭಿಸುವ ಕೆಲಸದಲ್ಲಿ ಯಶಸ್ಸು ಕಾಣಲಿದ್ದೀರಿ. ತಾಳ್ಮೆಯಿರಲಿ.

ಮಿಥುನ: ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಹೊಸ ಜನರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ವಾಹನ ಖರೀದಿ ಮಾಡುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ನಿರುದ್ಯೋಗಿಗಳು ಶನಿ ದೇವರ ಪ್ರಾರ್ಥನೆಯೊಂದಿಗೆ ಪ್ರಯತ್ನ ನಡೆಸಿದರೆ ತಕ್ಕ ಫಲ ಸಿಗಲಿದೆ. ಹೊಸ ಉದ್ದಿಮೆ, ವ್ಯವಹಾರ ಆರಂಭಿಸಲು ಇದು ಸಕಾಲ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸಿಗುವುದು. ದಿನದಂತ್ಯಕ್ಕೆ ನೆಮ್ಮದಿ.

ಸಿಂಹ: ನಿಮ್ಮ ಆತ್ಮೀಯರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಗೊಂದಲಕ್ಕೆ ಅವಕಾಶ ಕೊಡಬೇಡಿ. ಮಾತು, ನಡೆ ಸ್ಪಷ್ಟವಾಗಿರಲಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಕನ್ಯಾ: ಮಹಿಳೆಯರಿಗೆ ಉನ್ನತಾಧಿಕಾರ, ಸ್ಥಾನ ಮಾನ ಸಿಗುವುದು. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ‍್ಳಲಿದ್ದೀರಿ. ರಾಜಕೀಯ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ. ತಾಳ್ಮೆ, ಸಂಯಮ ಅಗತ್ಯ.

ತುಲಾ: ಬಂಧುಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಆಸ್ತಿ ವಿಚಾರದಲ್ಲಿ ಹಿರಿಯ ಸಲಹೆ ಪಾಲಿಸುವುದು ಉತ್ತಮ. ಹಿರಿಯರಿಗೆ ದೇವತಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಸರಕಾರಿ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಹಣಕಾಸಿನ ವಿಚಾರದಲ್ಲಿ ಗೊಂದಲಗಳಾಗದಂತೆ ಎಚ್ಚರಿಕೆ ವಹಿಸಿ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ. ಉದ್ಯೋಗ ವ್ಯವಹಾರದಲ್ಲಿ ಹಿತಶತ್ರುಗಳ ಕಾಟ ಕಂಡುಬಂದೀತು. ಕೌಟುಂಬಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ತಾಳ್ಮೆಯಿರಲಿ.

ಕುಂಭ: ಸ್ನೇಹಿತರೊಂದಿಗೆ ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಕಾರ್ಯರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ತಕ್ಕ ಮನ್ನಣೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಚಿಂತೆ ಬೇಡ.

ಮೀನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ