ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 26 ಫೆಬ್ರವರಿ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಾಹನ, ಭೂಮಿ ಖರೀದಿ ವಿಚಾರದಲ್ಲಿ ಆಸಕ್ತಿ ಕಂಡುಬರಲಿದೆ. ಉದ್ಯೋಗ ವಿಚಾರದಲ್ಲಿ ಅಜಾಗ್ರತೆಯಿಂದ ಅನಾಹುತಗಳಾಗಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಹಳೆಯ ವೈಷಮ್ಯಗಳನ್ನು ಮರೆತು ಹೊಸ ಜೀವನ ಎದುರಿಸಲು ಸಿದ್ಧರಾಗಿ. ಮಹಿಳೆಯರಿಗೆ ಕೌಟುಂಬಿಕ ಜವಾಬ್ಧಾರಿಗಳು ಹೆಚ್ಚಾಗಲಿವೆ. ಹಿರಿಯರಿಗೆ ದೇವತಾ ಕಾರ್ಯ ನೆರವೇರಿಸುವ ಯೋಗ ಕೂಡಿಬರಲಿದೆ.

ಮಿಥುನ: ವೃತ್ತಿರಂಗದಲ್ಲಿ ಗುರುಹಿರಿಯರ ಮಾರ್ಗದರ್ಶನದಿಂದ ಅಭಿವೃದ್ಧಿ ಕಂಡುಬರಲಿದೆ. ಸರಕಾರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ತಾಳ್ಮೆಯಿರಲಿ.

ಕರ್ಕಟಕ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನದಲ್ಲಿ ಅಭಿವೃದ್ಧಿ ಕಂಡುಬರಲಿದೆ. ವೃತ್ತಿರಂಗದಲ್ಲಿ ನಿಮ್ಮ ಜವಾಬ್ಧಾರಿಯುತ ಕಾರ್ಯಗಳಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಹೊಸದಾಗಿ ವೃತ್ತಿ ಜೀವನ ಆರಂಭಿಸಿದ್ದವರಿಗೆ ಹೊಸ ಸವಾಲುಗಳು ಎದುರಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಿದ ತೃಪ್ತಿ ಉಂಟಾಗಲಿದೆ.

ಕನ್ಯಾ: ಅತಿಯಾದ ಕಾರ್ಯದೊತ್ತಡ ಎದುರಾದೀತು. ಅನಿವಾರ್ಯವಾಗಿ ದೂರ ಸಂಚಾರ ಮಾಡಲಿದ್ದೀರಿ. ಹಾಗಿದ್ದರೂ ಕಾರ್ಯಸಾಧನೆಯಾದ ಖುಷಿ ಸಿಗಲಿದೆ. ಮಕ್ಕಳ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುವುದು. ಚಿಂತೆ ಬೇಡ.

ತುಲಾ: ದೈಹಿಕವಾಗಿ ಸಣ್ಣ ಪುಟ್ಟ ಸಮಸ್ಯೆಗಳು ಕಂಡುಬಂದರೂ ಮಾನಸಿಕವಾಗಿ ಗಟ್ಟಿಯಾಗಿರಲಿದ್ದೀರಿ. ಉದ್ಯೋಗ, ವ್ಯವಹಾರದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಹಿರಿಯರೊಂದಿಗೆ ಸಂಘರ್ಷಕ್ಕಿಳಿಯಬೇಡಿ. ಮಾತಿನ ಮೇಲೆ ಸಂಯಮವಿರಲಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿಯಾಗುವ ಯೋಗ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯಕ್ಕೊಳಗಾಗಬೇಡಿ.

ಧನು: ಉದ್ಯೋಗ ವ್ಯವಹಾರದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ನಿಮ್ಮ ದೃಢ ನಿರ್ಧಾರದಿಂದ ಕಾರ್ಯಸಾಧನೆಯಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಸ್ಥಿತಿಯಿರಲಿದೆ. ಚಿಂತೆ ಬೇಡ.

ಮಕರ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ದುಂದು ವೆಚ್ಚಗಳಿಗೆ ಕಡಿವಾಣ ಹಾಕವುದು ಉತ್ತಮ.

ಕುಂಭ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಲಾಭ ಕಂಡುಬರುವುದು. ಸರಕಾರಿ ಕಾಗದ ಪತ್ರಗಳ ಬಗ್ಗೆ ನಿಗಾ ವಹಿಸಿ. ನೆರೆಹೊರೆಯವರ ವಿಚಾರದಲ್ಲಿ ಎಚ್ಚರಿಕೆಯಿಂದಿರಿ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮೀನ: ಅನಿರೀಕ್ಷಿತವಾಗಿ ಧನ ಲಾಭವಾಗಲಿದ್ದು, ಅಂದುಕೊಂಡಿದ್ದ ಕೆಲಸಗಳನ್ನು ನೆರವೇರಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ