ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 27 ಫೆಬ್ರವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಳೆಯ ಸಮಸ್ಯೆಗಳು ಮತ್ತೆ ಪ್ರತ್ಯಕ್ಷವಾಗಲಿದ್ದು, ಮನಸ್ಸಿಗೆ ಕಿರಿ ಕಿರಿಯಾಗಲಿದೆ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಿದೆ. ಇಷ್ಟಭೋಜನ ಮಾಡುವ ಯೋಗ. ಸಾಂಸಾರಿಕವಾಗಿ ತಾಳ್ಮೆ ಅಗತ್ಯ.

ವೃಷಭ: ವ್ಯಾಪಾರೀ ವರ್ಗದವರಿಗೆ ಅಡೆತಡೆಗಳಿದ್ದರೂ ಆರ್ಥಿಕವಾಗಿ ಲಾಭವಾಗಲಿದೆ. ಸಕಾಲದಲ್ಲಿ ಹಣಕಾಸಿನ ನೆರವು ಹರಿದುಬರುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಯನ್ನು ಯಾರಿಂದಲೂ ತಡೆಯಲು ಸಾಧ‍್ಯವಿಲ್ಲ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮನಸ್ಸಿನ ಆಸೆ, ಆಕಾಂಕ್ಷೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ.

ಕರ್ಕಟಕ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಪ್ರೀತಿಪಾತ್ರಗಳ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಬಂಧುಬಳಗದವರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ದಾಂಪತ್ಯದಲ್ಲಿ ಸಂತೋಷವಿರಲಿದೆ. ಇಷ್ಟ ಮಿತ್ರರ ಭೇಟಿ ಯೋಗ ನಿಮ್ಮದಾಗಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಚಿಂತೆ ಅಗತ್ಯ.

ಕನ್ಯಾ: ವ್ಯಾಪಾರ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ-ನಷ್ಟ ಸಮನಾಗಿರಲಿದೆ. ದೂರದ ಬಂಧು ಮಿತ್ರರ ಭೇಟಿಯಾಗುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಾಳದೀತು. ಭೂಮ್ಯಾದಿ ಆಸ್ತಿ ಖರೀದಿ ವಿಚಾರದಲ್ಲಿ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ.

ವೃಶ್ಚಿಕ: ಸಾಂಸಾರಿಕ ಸುಖಕ್ಕೆ ಯಾವುದೇ ಅಡ್ಡಿಯಾಗದು. ಆದರೆ ನೆರೆಹೊರೆಯವರೊಂದಿಗೆ ಸಂಘರ್ಷಗಳಾಗುವ ಸಾಧ‍್ಯತೆ. ಎಚ್ಚರಿಕೆಯಿಂದಿರಬೇಕು. ನೀವು ಇಂದು ಕೈಗೊಳ್ಳುವ ನಿರ್ಧಾರಗಳು ಮುಂದಿನ ಜೀವನಕ್ಕೆ ಪೂರಕವಾಗಲಿದೆ.

ಧನು: ದಾಂಪತ್ಯದಲ್ಲಿ ಪರಸ್ಪರ ಸಹಕಾರದಿಂದ ಕೌಟುಂಬಿಕವಾಗಿ ನೆಮ್ಮದಿ ಕಂಡುಬರುವುದು. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಬಗ್ಗೆ ಆಸಕ್ತಿ ಮೂಡಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮಕರ: ಬಹಳ ದಿನಗಳ ನಂತರ ಆಪ್ತೇಷ್ಟರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಸಾಂಸಾರಿಕವಾಗಿ ಮಧ್ಯಮ ಸುಖ. ಮಾತಿನ ಮೇಲೆ ನಿಗಾ ಇರಲಿ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಚಿಂತೆ ಬೇಡ.

ಕುಂಭ: ಅತೀವ ಸಂತೋಷವಾಗುವಂತಹ ವಾರ್ತೆಗಳು ಇಂದು ಕೇಳಿಬರಲಿದೆ. ಕೌಟುಂಬಿಕವಾಗಿ ಸಂತೋಷದಾಯಕ ದಿನಗಳು. ನೀವು ಅಂದುಕೊಂಡಂತೆಯೇ ಕೆಲಸಗಳು ನೆರವೇರಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ಮಹಿಳೆಯರಿಗೆ ಚಿನ್ನಾಭರಣಗಳನ್ನು ಖರೀದಿಸುವ ಯೋಗ. ನೀವು ಬಹಳ ಇಷ್ಟಪಡುತ್ತಿದ್ದ ವಸ್ತು ಇಂದು ನಿಮ್ಮ ಕೈಸೇರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳಿಗೆ ಸತತ ಪ್ರಯತ್ನ ಅಗತ್ಯ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ