ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 12 ಮಾರ್ಚ್ 2022 (08:35 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಂದರ್ಭಕ್ಕೆ ಸರಿಯಾಗಿ ಯೋಚನೆ ಮಾಡಿ ನಿರ್ಧಾರ ಕೈಗೊಳ್ಳುವುದರಿಂದ ಸಂಭಾವ್ಯ ಅಪಾಯ ತಪ್ಪಲಿದೆ. ಮಕ್ಕಳ ವಿಚಾರದಲ್ಲಿ ಅಭಿವೃದ್ಧಿ ಕಂಡುಬಂದು ಸಂತೋಷವಾಗಲಿದೆ. ಅನಗತ್ಯ ವಿವಾದಗಳನ್ನು ಮೈಮೇಲೆಳೆದುಕೊಳ್ಳಬೇಡಿ.

ವೃಷಭ: ಉದ್ಯೋಗದಲ್ಲಿ ಉನ್ನತ ಸ್ಥಾನ ಮಾನದ ಯೋಗ ಕೂಡಿಬರಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗವಿದೆ. ದೂರದ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಗೃಹೋಪಕರಣಗಳ ಖರೀದಿಗೆ ನೆಮ್ಮದಿ ಸಿಗಲಿದೆ.

ಮಿಥುನ: ದೀರ್ಘ ಪ್ರಯಾಣದಿಂದ ದೇಹಾಯಾಸವಾಗುವ ಸಂಭವವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನ ಸಾಧ‍್ಯತೆ. ಇಷ್ಟಭೋಜನ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಕರ್ಕಟಕ: ನಿಮ್ಮ ದೂರದೃಷ್ಟಿಯಿಂದ ವೃತ್ತಿರಂಗದಲ್ಲಿ ನಿರೀಕ್ಷಿತ ಮುನ್ನಡೆ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ಅವಕಾಶಗಳು ಬರಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕಷ್ಟೇ. ತಾಳ್ಮೆಯಿರಲಿ.

ಸಿಂಹ: ಮನಸ್ಸಿಗೆ ಖುಷಿಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಅಧಿಕ ಧನ ಸಂಪಾದನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಚಿಂತೆ ಬೇಡ.

ಕನ್ಯಾ: ಕಾರ್ಯರಂಗದಲ್ಲಿ ಉನ್ನತಾಧಿಕಾರದ ಯೋಗ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಮಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ತುಲಾ: ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರುವುದು. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಂತೂ ಆಗದು. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.

ವೃಶ್ಚಿಕ: ನಿರೀಕ್ಷಿತ ಸಮಯದಲ್ಲಿ ಧನ ಸಹಾಯ ಕೂಡಿಬರಲಿದ್ದು, ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ತಕ್ಕ ಫಲ ಸಿಗಲಿದೆ.

ಧನು: ಆಸ್ತಿ ವಿವಾದಗಳಿಗೆ ಹಿರಿಯರ ಮಧ್ಯಸ್ಥಿಕೆಯಿಂದ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಸಂಗಾತಿಯಿಂದ ಸುಖ ಪ್ರಾಪ್ತಿಯಾಗಲಿದೆ. ನಿರೀಕ್ಷಿತ ಸಮಯದಲ್ಲಿ ಸಹಾಯ ಸಿಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಕರ: ದೂರದ ವ್ಯವಹಾರಗಳಿಂದ ಧನಾದಾಯ ವೃದ್ಧಿಯಾಗುವುದು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಲಿದ್ದೀರಿ.

ಕುಂಭ: ಆಸ್ತಿ ವ್ಯವಹಾರ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿದೆ. ಮಕ್ಕಳಿಂದ ಸಂತೋಷ ವೃದ್ಧಿಯಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಮೀನ: ಮಹಿಳೆಯರಿಗೆ ಚಿನ್ನಾಭರಣಗಳನ್ನು ಸಂರಕ್ಷಿಸು ಹೊಣೆ ಬೀಳಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತಮ ಅವಕಾಶ ಸಿಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ