ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 24 ಮಾರ್ಚ್ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸಿಗಲಿದೆ. ಸ್ನೇಹಿತರೊಂದಿಗೆ ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ.

ವೃಷಭ: ಉತ್ತಮ ಭವಿಷ್ಯಕ್ಕಾಗಿ ಕೆಲವೊಂದು ಯೋಜನೆ ಹಾಕಿಕೊಳ್ಳಲಿದ್ದೀರಿ. ಸ್ತ್ರೀಯರ ಸಹಕಾರದಿಂದ ನಿಮ್ಮ ಕೆಲಸ ಸುಗಮವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ನಿಮ್ಮಿಂದ ಹಿಂದೆ ಸಹಾಯ ಪಡೆದವರಿಂದ ಇಂದು ಪ್ರತ್ಯುಪಕಾರ ಸಿಗಲಿದೆ. ನಾನಾ ರೀತಿಯ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಯೋಚನೆ ಬರಲಿದೆ.

ಕರ್ಕಟಕ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಮಕ್ಕಳ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ಕೌಟುಂಬಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ. ದಿನದಂತ್ಯಕ್ಕೆ ನೆಮ್ಮದಿ.

ಸಿಂಹ: ಜಲೋತ್ಪನ್ನಗಳ ವ್ಯವಹಾರ ಮಾಡುವವರಿಗೆ ಲಾಭ ಕಂಡುಬರುವುದು. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ರಾಜಕೀಯದಲ್ಲಿ ಪ್ರಗತಿ ಕಂಡುಬರಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ನಾನಾ ರೀತಿಯ ಸನ್ನಿವೇಶಗಳು ನಿಮ್ಮ ಮನಸ್ಸಿನ ಗೊಂದಲಕ್ಕೆ ಕಾರಣವಾಗುವುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯವಿದೆ. ಆರೋಗ್ಯದಲ್ಲಿ ಕಾಳಜಿಯಿರಲಿ.

ತುಲಾ: ಆರ್ಥಿಕವಾಗಿ ನಿಮ್ಮ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ. ವಾಹನಾದಿ ಸೌಕರ್ಯಗಳು ಒದಗಿಬರುವುದು. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ.

ವೃಶ್ಚಿಕ: ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಗೃಹೋಪಯೋಗಿ ಕೆಲಸಗಳಿಗಾಗಿ ಧನವ್ಯಯ ಮಾಡಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರುವುದು. ದೇವತಾ ಪ್ರಾರ್ಥನೆ ಮಾಡಿ.

ಧನು: ಸುದೀರ್ಘ ಪ್ರಯಾಣದಿಂದ ದೇಹಾಯಾಸವಾಗುವ ಸಾಧ್ಯತೆ. ಹೆಚ್ಚಿನ ಧನಗಳಿಕೆಗಾಗಿ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ ಕಂಡುಬರಲಿದೆ.

ಮಕರ: ನಿರೀಕ್ಷಿತ ಧನಲಾಭವಾಗುವುದಿರಂದ ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳು ಮರೆಯಾಗಲಿದೆ. ಬಂಧು ಮಿತ್ರರ ಸಮಾಗಮವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸಾಧನೆಗೆ ಅವಕಾಶ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಗೊಂದಲಗಳಾಗದಂತೆ ಎಚ್ಚರಿಕೆ ವಹಿಸಿ. ಸರಕಾರಿ ಕೆಲಸಗಳಲ್ಲಿ ಜಯ, ಮನಸ್ಸಿಗೆ ನೆಮ್ಮದಿಯಾಗಲಿದೆ.

ಮೀನ: ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರುವುದು. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ಇಷ್ಟಮಿತ್ರರ ಭೇಟಿ, ಪ್ರವಾಸ ಯೋಗವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ